RSS ಕಾರ್ಯಕರ್ತರು ಸೇನೆಗೆ ಸೇರೋದ್ರಲ್ಲಿ ತಪ್ಪೇನು: ಸುಧಾಕರ್ ಪ್ರಶ್ನೆ

Public TV
1 Min Read
SUDHAKAR 2

ಚಿಕ್ಕಬಳ್ಳಾಪುರ: ಆರ್‌ಎಸ್‌ಎಸ್ ಕಾರ್ಯರ್ತರು ಸೇನೆಗೆ ಸೇರೋದ್ರಲ್ಲಿ ತಪ್ಪೇನಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದ್ದಾರೆ.

ಇಲ್ಲಿನ ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಬಗ್ಗೆ ತಿಳಿದುಕೊಳ್ಳದೇ ಪ್ರತಿಪಕ್ಷಗಳು ಸುಮ್ಮನೇ ಸದ್ದು ಮಾಡುತ್ತಿದ್ದಾರೆ. ದೇಶದ ಮೇಲೆ ಅಭಿಮಾನ ಇರುವ ಪ್ರತಿಯೊಬ್ಬರೂ ಅಗ್ನಿಪಥ್ ಯೋಜನೆಯ ಅಗ್ನಿವೀರರಾಗಲು ಅರ್ಹರಿದ್ದಾರೆ. ಅದು ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆ ಸದಸ್ಯರಾದರೂ ಆಗಬಹುದು ಎಂದಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಗಾಂಧೀಜಿ ಮೊಮ್ಮಗ ಗೋಪಾಲಕೃಷ್ಣ ಗಾಂಧಿ

SUDHAKAR 1

ನಾಲ್ಕು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ಬಂದ ಯುವಕ ಯಾವುದೇ ಕೆಲಸಕ್ಕೆ ಸೇರಿದರೂ ಅಲ್ಲಿ ಶಿಸ್ತು, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ. ದೇಶದ ಬಗ್ಗೆ ಅಭಿಮಾನ ತೋರುತ್ತಾರೆ ಎಂಬ ಜ್ಞಾನವೂ ಇವರಿಗಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೇಸ್ ವಿವಿ ಕ್ಯಾಂಪಸ್ ಲೋಕಾರ್ಪಣೆ ಮಾಡಿದ ಮೋದಿ

ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ, ಎರಡು ದಿನಗಳ ರಾಜ್ಯ ಪ್ರವಾಸದ ಬಗ್ಗೆ ಪ್ರತಿಕ್ರಿಯೆ ನೀಡಿ, ನಾಳೆ ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿಯವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಭಾಗವಹಿಸಲಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ಹಲವು ಯೋಜನೆಗಳ ಫಲಾನುಭವಿಗಳಿಗೆ ಸಲಕರಣೆ ಮತ್ತು ಆದೇಶ ಪತ್ರಗಳನ್ನು ಪ್ರಧಾನಿಯವರು ಇದೇ ಸಂದರ್ಭದಲ್ಲಿ ವಿತರಿಸಲಿದ್ದಾರೆ ಎಂದು ಹೇಳಿದರು.

Live Tv

Share This Article
Leave a Comment

Leave a Reply

Your email address will not be published. Required fields are marked *