ಪ್ಯಾರಿಸ್: ಭಾರತದಲ್ಲಿ ಗೋಧಿ ರಫ್ತು ನಿಷೇಧಿಸಿದ ಬೆನ್ನಲ್ಲೇ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಆಗಿದೆ.
ಯುರೋಪ್ ಮಾರುಕಟ್ಟೆಯಲ್ಲಿ ಪ್ರತಿ ಟನ್‍ಗೆ 435 ಯುರೋಗಳಿಗೆ (35,311 ರೂ.) ಏರಿಕೆ ಕಂಡಿದೆ. ಅಂದರೆ ಪ್ರತಿ ಟನ್‍ಗೆ ಅಂದಾಜು 1,053 ರೂ.ನಷ್ಟು ಹೆಚ್ಚಳವಾಗಿದೆ.
ಗೋಧಿ ರಫ್ತು ಮಾಡುವ ರಾಷ್ಟ್ರಗಳಲ್ಲಿ ರಷ್ಯಾ ಮತ್ತು ಉಕ್ರೇನ್ ಪ್ರಮುಖವಾಗಿದ್ದವು. ಆದರೆ ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಎಲ್ಲಾ ಬೆಲೆಯೂ ಗಗನಕ್ಕೆ ಏರಿತ್ತು. ಅದರ ಜೊತೆಗೆ ಗೋಧಿ ಬೆಲೆಯೂ ಏರಿಕೆ ಆಗಿತ್ತು. ಈ ಹಿನ್ನೆಲೆಯಲ್ಲಿ ಭಾರತದ ಗೋಧಿಗೆ ಹೆಚ್ಚಿನ ಬೆಲೆ ಬಂದಿತ್ತು. ಇದನ್ನೂ ಓದಿ: ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್
ರಫ್ತಿಗೆ ನಿಷೇಧ ಹೇರಿದ್ದು ಯಾಕೆ?: ಭಾರತದಲ್ಲಿ ಉಷ್ಣತೆಯಲ್ಲಿ ಏರಿಕೆ ಕಂಡಿದ್ದರಿಂದ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿತ್ತು. ಇದರ ಜೊತೆಗೆ ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿತ್ತು. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿತ್ತು.
ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ತರಾಟೆಗೆ ತೆಗೆದುಕೊಂಡಿದೆ. ಆದರೆ ಭಾರತದಲ್ಲಿ ಗೋಧಿಯ ರಫ್ತು ನಿಷೇಧ ಮಾಡಿರುವುದಕ್ಕೆ ಚೀನಾ ಬೆಂಬಲ ನೀಡಿದೆ. ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಸರಿಯಲ್ಲ. G7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಚೀನಾ ಪ್ರಶ್ನಿಸಿದೆ. ಇದನ್ನೂ ಓದಿ: ಭೂ ವಿವಾದದ ತೀರ್ಪು 108 ವರ್ಷದ ಬಳಿಕ ಪ್ರಕಟ