ಚಾಮರಾಜನಗರ: ವ್ಹೀಲಿಂಗ್ ವಿಚಾರವಾಗಿ ಎರಡು ಕೋಮುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ತಲಾ ಮೂವರು ಯುವಕರ ಮೇಲೆ ಪ್ರಕರಣ ದಾಖಲಿಸಿ ಒಟ್ಟು 6 ಮಂದಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ತಿಳಿಸಿದರು.
ಈ ಬಗ್ಗೆ ಸುದ್ದಿಗರರೊಂದಿಗೆ ಮಾತನಾಡಿ ಅವರು, ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ವ್ಹೀಲಿಂಗ್ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ವ್ಹೀಲಿಂಗ್ ನಿಗ್ರಹಕ್ಕೆ ವಿಶೇಷ ತಂಡ ರಚನೆ ಮಾಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜನರಲ್ಲಿ ಎಚ್ಚರಿಕೆ ಮೂಡಿಸಲು ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಸಲಾಯಿತು ಎಂದು ಹೇಳಿದರು.
ಕೆ.ಎಸ್.ಆರ್.ಪಿ, ಡಿ.ಎ.ಆರ್ ಮತ್ತು ಸಿವಿಲ್ ಪೊಲೀಸ್ ಅಧಿಕಾರಿಗಳಿಂದ ಪಥಸಂಚಲನ ನಡೆಸಿ ಕೋಮುಗಲಭೆಗೆ ಪ್ರಚೋದನೆ ಹಾಗೂ ಕಾನೂನುಬಾಹಿರ ಚಟುವಟಿಕೆ ನಡೆಸುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಲಾಯಿತು. ಇದನ್ನೂ ಓದಿ: ಎಲ್ಲಾ ನಾಶ ಮಾಡಿದ್ದಾರೆ, ಶ್ರೀಗಳು ಯಾವುದೇ ಸಾಕ್ಷ್ಯ ಉಳಿಸಿಲ್ಲ: ಹೆಚ್. ವಿಶ್ವನಾಥ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಅಡಿಷನಲ್ ಎಸ್ಪಿ ಸುಂದರ್‌ರಾಜು, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಸೇರಿದಂತೆ 250ಕ್ಕೂ ಹೆಚ್ಚು ಮಂದಿ ಪೊಲೀಸ್ ಸಿಬ್ಬಂದಿ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ವ್ಹೀಲಿಂಗ್ ವಿಚಾರವಾಗಿ ನಿನ್ನೆ ರಾತ್ರಿ ಎರಡು ಕೋಮುಗಳ ನಡುವೆ ಗಲಾಟೆ ಯಾಗಿತ್ತು ಸಂತೇಮರಹಳ್ಳಿ ವೃತ್ತದ ಸುತ್ತಮುತ್ತ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದೀಗ ಪರಿಸ್ಥಿತಿ ಹತೋಟಿಯಲ್ಲಿದೆ. ಇದನ್ನೂ ಓದಿ: ಓದುವುದರಲ್ಲಿ ಕಾಂಪಿಟೇಷನ್ ನೀಡ್ತಿದ್ದಕ್ಕೆ ಮಗನ ಸಹಪಾಠಿಗೆ ವಿಷ ಕೊಟ್ಟು ಸಾಯಿಸಿದ್ಲು