ರಾಯಚೂರು: ಕಾವೇರಿ ನೀರಿನ (Kaveri Water) ವಿಚಾರದಲ್ಲಿ ಬಂಗಾರಪ್ಪನವರು (S Bangarappa) ಮುಖ್ಯಮಂತ್ರಿ ಆಗಿದ್ದಾಗ ಚಿಟಿಕೆ ಹೊಡೆಯುವುದರಲ್ಲಿ ಉತ್ತರ ಕೊಟ್ಟಿದ್ದರು. ಬಂಗಾರಪ್ಪನವರ ಕಾಲದ ಕಾನೂನು ಬೇರೆ, ಈಗ ಬೇರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದ್ದಾರೆ.
ರಾಯಚೂರಿನಲ್ಲಿ (Raichur) ಮಾತನಾಡಿದ ಅವರು, ಸಿದ್ದರಾಮಯ್ಯನವರು (Siddaramaiah) ಬಂಗಾರಪ್ಪ ತೆಗೆದುಕೊಂಡ ತೀರ್ಮಾನ ತೆಗೆದುಕೊಂಡರೆ ಅವರ ಜೊತೆ ಇರುತ್ತೇವೆ. ಪ್ರಾಧಿಕಾರ ವಿರುದ್ಧ ಹೋಗಿದ್ದಕ್ಕೆ ಹೈಕೋರ್ಟ್‌ನಲ್ಲಿ ಆಗ ನಮಗೆ ಛೀಮಾರಿ ಹಾಕಿದ್ದರು. ಅಷ್ಟರೊಳಗೆ ನಮ್ಮ ತಂದೆಯವರು ಏನೇನು ಮಾಡಬೇಕೋ ಮಾಡಿ ಮುಗಿಸಿದ್ದರು ಎಂದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಅಂಗೀಕಾರ – ಇದು ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ: ಪ್ರಹ್ಲಾದ್ ಜೋಶಿ
ಶಿಕ್ಷಕರ ವರ್ಗಾವಣೆಯಿಂದ ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಸಮಸ್ಯೆಯಾಗಿದೆ. ಖಾಲಿಯಿರುವ ಹುದ್ದೆಗಳಲ್ಲಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಸದ್ಯಕ್ಕೆ ಈ ಭಾಗದಲ್ಲಿ ಅಂತರ್ ವಿಭಾಗಕ್ಕೆ ವರ್ಗಾವಣೆಯಾದ ಶಿಕ್ಷಕರನ್ನು ಅತಿಥಿ ಶಿಕ್ಷಕರು ಬರುವವರೆಗೆ ಬಿಡುಗಡೆ ಮಾಡದಂತೆ ಸೂಚಿಸಲಾಗಿದೆ. ಕೆಲ ಅಧಿಕಾರಿಗಳು ಹಣ ಪಡೆದು ಶಿಕ್ಷಕರನ್ನು ಬಿಡುಗಡೆ ಮಾಡಿರುವ ಆರೋಪ ಹಿನ್ನೆಲೆ ಅಂತಹ ಘಟನೆ ನಡೆದಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಬೆಂಗ್ಳೂರಿಗರು ಭಾಗಿಯಾಗದ್ದಕ್ಕೆ ಆಕ್ರೋಶ- ಕಾವೇರಿ ನೀರು ಸರಬರಾಜು ಮಾಡೋ ಪಂಪ್ ಹೌಸ್‍ಗೆ ಮುತ್ತಿಗೆ
ಖಾಯಂ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗುತ್ತದೆ. ನ್ಯಾಯಾಲಯದಲ್ಲಿ ಆದಷ್ಟು ಬೇಗ ತೀರ್ಮಾನ ಆಗುತ್ತದೆ ಎಂದರು. ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ 8,500 ಕೊಠಡಿಗಳನ್ನು ಕೊಡಬೇಕು ಎಂದು ತೀರ್ಮಾನವಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 25%ರಷ್ಟು ಅನುದಾನ ಶಾಲೆಗಳ ಅಭಿವೃದ್ಧಿಗೆ ಬಳಸಲು ಮುಂದಾಗಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಂಡ್ಯ ಬಂದ್‌ಗೆ ಕರೆ – ಪ್ರತಿಭಟನಾಕಾರರಿಗೆ ಎಚ್ಚರಿಕೆ ಕೊಟ್ಟ ಗೃಹಸಚಿವ ಜಿ.ಪರಮೇಶ್ವರ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]