– ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಬಗ್ಗೆ ಪ್ರತಿಕ್ರಿಯೆ
ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಆರ್‌ಎಸ್‌ಎಸ್ (RSS)ಮೇಲಿನ ಕೇಸ್ ವಾಪಾಸ್ ತೆಗೆದುಕೊಂಡಿದ್ದರಲ್ಲ ಅದು ಏನಂಥೆ? ಎಂದು ಹುಬ್ಬಳ್ಳಿ ಗಲಭೆ ಕೇಸ್ ವಿಚಾರವಾಗಿ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆ ಕೇಸ್ (Hubballi Violence) ವಾಪಸ್‌ಗೆ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರವಾಗಿ ಮಾತನಾಡಿದರು. ಬಿಜೆಪಿಯವರು ಯಾವಾಗಲೂ ಹಾಗೇ ವಿರೋಧ ವ್ಯಕ್ತಪಡಿಸುತ್ತಾರೆ. ಪ್ರತಿಭಟನೆ ಬೇಕಾದರೆ ಮಾಡಲಿ, ಕ್ಯಾಬಿನೆಟ್ ಸಬ್ ಕಮಿಟಿಯಿಂದ ತೀರ್ಮಾನ ಆಗಿದ್ದು, ನಂತರ ಕಾನೂನು ಅಡಿಯಲ್ಲಿ ಕೇಸ್ ವಾಪಸ್ ಪಡೆಯಲಾಗಿದೆ. ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಆರ್‌ಎಸ್‌ಎಸ್ ಮೇಲಿನ ಕೇಸ್ ವಾಪಾಸ್ ತೆಗೆದುಕೊಂಡಿದ್ದರಲ್ಲ ಅದು ಏನಂಥೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಚುನಾವಣಾ ಫಲಿತಾಂಶದ ದಿನ ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್
ಇದೇ ವೇಳೆ ಕೇಂದ್ರದಿಂದ ತೆರಿಗೆ ಪಾಲು ವಿಚಾರವಾಗಿ ಮಾತನಾಡಿ, ನಮಗೆ ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ. ಪದೇ ಪದೇ ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯ ಆಗುತ್ತಿದೆ. ಉತ್ತರ ಪ್ರದೇಶಕ್ಕೆ ಜಾಸ್ತಿ ಕೊಟ್ಟಿದ್ದಾರೆ. ಕರ್ನಾಟಕದ ಎಂಪಿಗಳು ಈ ಕುರಿತು ಧ್ವನಿ ಎತ್ತಬೇಕು. ಈ ಬಗ್ಗೆ ಬಿಜೆಪಿ ನಾಯಕರು ಮಾತನಾಡಲ್ಲ. ಜೋಶಿ ಸೇರಿದಂತೆ ಯಾರು ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ನಾಡಹಬ್ಬ ಮೈಸೂರು ದಸರಾ ಕುರಿತು ಮಾತನಾಡಿದ ಅವರು, ಈ ಬಾರಿ ದಸರಾದಲ್ಲಿ ಹೆಚ್ಚು ಜನರು ಪಾಲ್ಗೊಂಡಿದ್ದರು. ನೀವೆಲ್ಲರೂ ಯಶಸ್ವಿ ಅಂದರೆ ದಸರಾ ಯಶಸ್ವಿ ಆದ ಹಾಗೇ. ಎಲ್ಲರೂ ಖುಷಿಯಾಗಿ ದಸರಾ ನೋಡಿದ್ದಾರೆ. ಎಲ್ಲರೂ ಖುಷಿಯಾಗಿ ಇದ್ದರೆ ನಮಗೂ ಖುಷಿ. ಅದ್ದೂರಿ ದಸರಾ ಮಾಡುವುದಕ್ಕೆ ನಮ್ಮೆಲ್ಲ ಅಧಿಕಾರಿಗಳು ಶ್ರಮ ಹಾಕಿದ್ದಾರೆ ಎಂದು ತಿಳಿಸಿದರು.
ಏನಿದು ಪ್ರಕರಣ?
ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಲು ನಿರ್ಧರಿಸಿತ್ತು. ಈ ಹಿನ್ನೆಲೆ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ (Cabinet Meeting) ಹುಬ್ಬಳ್ಳಿ ಗಲಭೆಯಲ್ಲಿ ದಾಖಲಾಗಿದ್ದವರ ಮೇಲಿನ ಪ್ರಕರಣವನ್ನು ವಾಪಸ್ ಪಡೆದುಕೊಂಡಿತ್ತು. ಈ ನಿರ್ಧಾರದ ಬೆನ್ನಲ್ಲೇ ಬಿಜೆಪಿ (BJP) ಆಕ್ರೋಶ ವ್ಯಕ್ತಪಡಿಸಿತ್ತು.. ಇದನ್ನೂ ಓದಿ: ಸರ್ಕಾರದಿಂದ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ – ಮುಸ್ಲಿಮರ ಓಲೈಕೆ ರಾಜಕೀಯ ಎಂದು ಬಿಜೆಪಿ ಕಿಡಿ