ಮಂಗಳೂರು: ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Udupi Pejawar Vishwa Prasanna Teertha Swamiji) ಹೇಳಿದ್ದಾರೆ.
ಜಾತ್ಯಾತೀತ (Secular) ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ (Caste) ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಉಡುಪಿ ಪೇಜಾವರ ಪ್ರಶ್ನಿಸಿ ಪರಿಷತ್ ಕಾಂಗ್ರೆಸ್ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ವಿರುದ್ದ ಅವರು ಪರೋಕ್ಷ ವಾಗ್ದಾಳಿ ನಡೆಸಿದರು.
Advertisement
ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ನಾವು ಹೇಳಿದ್ದು ತಪ್ಪಂತೆ. ಪುಡಿ ರಾಜಕಾರಣ (Politics) ಮಾಡುತ್ತಿದ್ದೇವೆ ಎನ್ನುತ್ತಾರೆ. ಹಾಗಾದರೆ ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ ಅಲ್ವೋ ಹೇಳಿ ಎಂದಿದ್ದಾರೆ. ಹೌದು ಅಂತಾದ್ರೆ ಒಬ್ಬ ಮಾಠಾಧಿಪತಿಗೆ ಅಂತಲ್ಲ, ಸಾಮಾನ್ಯ ಪ್ರಜೆಗೂ ಮಾತಾಡುವ ಹಕ್ಕಿದೆ. ಹೀಗಿರುವಾಗ ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇನೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
Advertisement
Advertisement
ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ಕೆಲವು ರಾಜಕಾರಣಿಗಳಿಗೆ ಮಾತ್ರವೇ? ಪ್ರಜೆಗಳಿಗೂ ಹಕ್ಕಿಲ್ಲ, ರಾಜಕಾರಣಿಗಳಿಗೆ ಮಾತ್ರ ಹಕ್ಕಿದೆ ಅಂತ ಹೇಳಲಿ. ಪ್ರಜಾಪ್ರಭುತ್ವ ಸತ್ತು ಹೋಯ್ತು, ಈಗ ಇರೋದು ರಾಜಕಾರಣಿಗಳ ರಾಜ್ಯ ಅಂತ ಹೇಳಿ ಬಿಡಲಿ. ಹಾಗಿಲ್ಲ ಅಂತಾದ್ರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪೀಠಾಧಿಪತಿ ಮಾತ್ರ ಅಲ್ಲ, ಸಾಮಾನ್ಯ ಪ್ರಜೆಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿರಲೇಬೇಕು. ಹಾಗಾಗಿ ನಾವು ಅದನ್ನ ಮಾತ್ರ ಮಾಡಿದ್ದೇವೆಯೇ ಹೊರತು ಬೇರೆ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ
Advertisement
ಇಂಥಹ ರಾಜಕಾರಣಿಗಳಿಗೆ ಸದ್ಭುದ್ದಿ ಕೊಡಲಿ ಎಂದು ದೇವರಲ್ಲಿ ಕೇಳುತ್ತಿದ್ದೇನೆ. ನಮ್ಮ ಪಂಗಡದೊಳಗೆ ಯಾರಿಗೆಲ್ಲಾ ವೈಮನಸ್ಸು ಇದೆಯೋ ಅದು ದೂರವಾಗಲಿ ಎಂದು ಅವರು ಪ್ರಾರ್ಥಿಸಿದರು.
ಏನಿದು ಪುಡಿ ರಾಜಕಾರಣಿ ವಿವಾದ?
ಜಾತಿಗಣತಿ ವಿಚಾರದ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದ ಪೇಜಾವರ ಶ್ರೀ, ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ (Caste Census) ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ (Secular) ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ ಬೇಕು ಎಂದು ಪ್ರಶ್ನಿಸಿದ್ದರು. ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದರು.
ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಹರಿಪ್ರಸಾದ್, ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.