ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವಾಗ ರಾಜೀನಾಮೆ ಕೊಡುತ್ತಾರೆ ಎಂದು ಅನರ್ಹ ಶಾಸಕ ಎಚ್ ವಿಶ್ವನಾಥ್ ಪ್ರಶ್ನಿಸಿದ್ದಾರೆ.
ನಗರದಲ್ಲಿಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲುಂಟಾಯಿತು. ಈ ಸೋಲಿನ ಹೊಣೆ ಹೊತ್ತು ರಾಹುಲ್ ಗಾಂಧಿಯವರು ತಮ್ಮ ಎಐಸಿಸಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇತ್ತ ನಾನೂ ಜೆಡಿಎಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಅವರು ಯಾವಾಗ ರಾಜೀನಾಮೆ ನೀಡುತ್ತಾರೆ ಎಂದು ಬಹಿರಂಗವಾಗಿ ಪ್ರಶ್ನೆ ಮಾಡಿದ್ದಾರೆ.
Advertisement
Advertisement
ಜೆಡಿಎಸ್ ವರಿಷ್ಠ ದೇವೇಗೌಡರನ್ನು ತುಮಕೂರಿಗೆ ಕರೆದೊಯ್ದು ಖೆಡ್ಡಾ ತೋಡಿದ್ದೇ ಸಿದ್ದರಾಮಯ್ಯ ಅವರಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೂ ಒಂದು ಸೀಟು, ನಮ್ಮ ಪಕ್ಷಕ್ಕೂ ಒಂದು ಸೀಟು ಸಿಕ್ಕಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ಯಾವಾಗ ರಾಜೀನಾಮೆ ನೀಡುತ್ತಾರೆ ಎಂದು ಕೇಳಿದ್ದಾರೆ. ಇದನ್ನೂ ಓದಿ; ನಾನು ದೇವೇಗೌಡ್ರ ಬಳಿ ಕ್ಷಮೆ ಕೇಳುತ್ತೇನೆ- ಎಚ್ ವಿಶ್ವನಾಥ್
Advertisement
ಆದರೆ ಸಿದ್ದರಾಮಯ್ಯ ಅವರು ಕೆಪಿಸಿಸಿ ಅಧ್ಯಕ್ಷರಾಗಿರಲಿಲ್ಲ, ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಹಾಗಾಗಿ ವಿಶ್ವನಾಥ್ ಅವರು ಯಾವುದಕ್ಕೆ ರಾಜೀನಾಮೆ ಕೊಡಬೇಕು ಎಂದು ಹೇಳಿದ್ದಾರೆ ಎಂಬುದಾಗಿ ತಿಳಿದುಬಂದಿಲ್ಲ.
Advertisement
ನನ್ನನ್ನು ಸಿದ್ದರಾಮಯ್ಯ ಅವರಿಂದ ದೂರ ಮಾಡಿದ್ದೇ ಜೆಡಿಎಸ್. ಸಿದ್ದರಾಮಯ್ಯ ಇದ್ದಾರೆ ಅಲ್ಲಿ ಬರಬೇಡಿ. ಸಿದ್ದರಾಮಯ್ಯ ಇದ್ದಾರೆ ಇಲ್ಲಿ ಬರಬೇಡಿ ಎಂದು ಹೇಳಿದ ಜೆಡಿಎಸ್ ನಾಯಕರಿಂದಲೇ ನಾನು ಸಿದ್ದರಾಮಯ್ಯ ಅವರಿಂದ ದೂರವಾದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಜೆಡಿಎಸ್ ಗೆ ವಿಷವುಣಿಸಿದ್ದೇ ಸಾರಾ ಮಹೇಶ್ ಎಂದು ಮಾಜಿ ಸಚಿವರ ವಿರುದ್ಧವೂ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.