ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನ ಪತ್ರವನ್ನು ಮಾಜಿ ಪ್ರಧಾನಿ ದೇವೇಗೌಡರ (HD DeveGowda) ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಸತ್ಯ ಹೇಳುವ ಧಮ್ಮು, ತಾಕತ್ತು ಸಿಎಂಗೆ (Basavaraj Bommai) ಇದೆಯಾ ಎಂದು ಟ್ವೀಟ್ ಮಾಡುವ ಮೂಲಕ ಬಿಜೆಪಿಗೆ (BJP) ಜೆಡಿಎಸ್ ಪ್ರಶ್ನಿಸಿದೆ.
Advertisement
ಈ ಕುರಿತಂತೆ ಟ್ವೀಟ್ ಮಾಡಿರುವ ಜೆಡಿಎಸ್ (JDS), ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ, ಸರಿ. ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ. ಆದರೆ, ಮುಖ್ಯಮಂತ್ರಿಗಳೇ ಪತ್ರ ಬರೆದು ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಕಿಡಿಕಾರಿದ್ದಾರೆ.
Advertisement
ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ @H_D_Devegowda ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ @BJP4Karnataka ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ. 1/8
— Janata Dal Secular (@JanataDal_S) November 12, 2022
Advertisement
ಈ ಮುನ್ನ, ಕನ್ನಡ ನೆಲದಿಂದ ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗರಾದ ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ನೀಡದೇ ಇರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಗುರುವಾರ ಟ್ವೀಟ್ ಮಾಡುವ ಮೂಲಕ ಜೆಡಿಎಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತ್ತು. ಇದನ್ನೂ ಓದಿ: ದೇವೇಗೌಡರಿಗೆ ಆಹ್ವಾನ ನೀಡದ್ದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ : ಬಿಜೆಪಿ ವಿರುದ್ಧ ಜೆಡಿಎಸ್ ಆಕ್ರೋಶ
Advertisement
ಇದಕ್ಕೆ ಪ್ರತಿಯಾಗಿ ಶುಕ್ರವಾರ ಬಿಜೆಪಿ ಟ್ವೀಟ್ ಮಾಡಿದ್ದು, ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿ ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ಜೆಡಿಎಸ್ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿತ್ತು. ಇದನ್ನೂ ಓದಿ: ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ನೀಡಿ, ಖುದ್ದು ಸಿಎಂ ಕರೆ ಮಾಡಿದ್ದಾರೆ – ಬಿಜೆಪಿ ಸ್ಪಷ್ಟನೆ