ಹಾಸನ: ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ತೇರಿನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಭಾಗಿಯಾಗಿದ್ದರು. ಈ ವೇಳೆ ಚನ್ನಕೇಶವಸ್ವಾಮಿಗೆ ಪೂಜೆ ಸಲ್ಲಿಸಿ ರಾಜ್ಯದ ಜನತೆಗೆ, ರೈತರಿಗೆ ಒಳ್ಳೆಯ ಆರೋಗ್ಯ ಕೊಡಲಿ ಎಂದು ಪೂಜೆ ಸಲ್ಲಿಸಿದರು.
ಪೂಜೆಯಲ್ಲಿ ಭಾಗಿಯಾದ ನಂತರ ಬೇಲೂರಿನಲ್ಲಿ ಮಾತನಾಡಿದ ಅವರು, ಒಳ್ಳೆಯ ಮಳೆ, ಬೆಳೆ ಆಗಿ ರೈತರು ಸಮೃದ್ಧಿಯಾಗಿರಲಿ. ಭಗವಂತ ರಾಜ್ಯ, ಜಿಲ್ಲೆಯ ಜನತೆಗೆ ಆರೋಗ್ಯ ಕೊಡಲಿ. ಯಾವುದೇ ಕಷ್ಟಕ್ಕೆ ಸಿಗದಂತೆ ಕಾಪಾಡಲಿ ಎಂದು ಸೌಮ್ಯ ಚನ್ನಕೇಶವಸ್ವಾಮಿಯನ್ನು ಬೇಡಿದ್ದೇವೆ. ರಾಜ್ಯದಲ್ಲಿ ಶಾಂತಿ ವಾತಾವರಣ ನೆಲೆಸಬೇಕು. ಯಾವುದೇ ಕಾರಣಕ್ಕೂ ಕೋಮುಗಲಭೆಗಳಿಗೆ ಅವಕಾಶ ಕೊಡಬೇಡಿ ಎಂದು ತಿಳಿಸಿದರು. ಇದನ್ನೂ ಓದಿ: ಹಳದಿ ಶೆರ್ವಾನಿ ಹಾಕಿಕೊಂಡು ಆಲಿಯಾ-ರಣಬೀರ್ ಅರಿಶಿಣ ಶಾಸ್ತ್ರಕ್ಕೆ ಹೊರಟ ಕರಣ್ ಜೋಹರ್
Advertisement
Advertisement
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಡುವ ಪರಿಸ್ಥಿತಿ ನಾನಗಿಲ್ಲ. ರಾಜ್ಯ ಸರ್ಕಾರಯಿದೆ. ಅದರ ಬಗ್ಗೆ ತೀರ್ಮಾನ ಮಾಡುತ್ತೆ, ಅದು ಅವರಿಗೆ ಬಿಟ್ಟ ವಿಷಯ. ಅದರ ಬಗ್ಗೆ ಮಾತನಾಡುವ ಮಟ್ಟಕ್ಕೆ ನಾವು ಬೆಳೆದಿಲ್ಲ. ಪರ್ಸೆಂಟೇಜ್ ಬಗ್ಗೆ ಟೈಂ ಬಂದಾಗ ಹೇಳ್ತಿನಿ ಎಂದು ತಿಳಿಸಿದರು.
Advertisement
Advertisement
ಹಿಂದೂ, ಮುಸ್ಲಿಂ ಬೇರೆಯಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗಬೇಕು. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ನಡೆದುಕೊಳ್ಳಬೇಕು. ಯಾರೋ ಪುಣ್ಯಾತ್ಮರು ಹಿಂದೆ ನಡೆಸಿಕೊಂಡು ಬಂದಿರುವ ಹಾದಿಯನ್ನು ಮುಂದುವರಿಸಿಕೊಂಡು ಹೋಗಬೇಕು. ಯಾವುದೇ ಗಲಭೆಗಳಿಗೆ ಅವಕಾಶ ಕೊಡಬೇಡಿ ಎಂದು ರಾಜ್ಯ ಸರ್ಕಾರವನ್ನು ಕೋರುತ್ತೇನೆ ಎಂದರು. ರಾಜ್ಯ ಹಾಗೂ ಜಿಲ್ಲೆಯ ಅಭಿವೃದ್ಧಿ ಕಡೆ ಹೆಚ್ಚು ಗಮನಕೊಡಿ ಎಂದು ರಾಜ್ಯ ಸರ್ಕಾರವನ್ನು ಮನವಿ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಬಾಲಿವುಡ್‍ನತ್ತ ಗೂಗ್ಲಿ ಡೈರೆಕ್ಟರ್: ಬಾಲಿವುಡ್ ಸ್ಟಾರ್ ಪರಂಬ್ರತ ಚಟ್ಟೋಪಾಧ್ಯಾಯಗೆ ಪವನ್ ಒಡೆಯರ್ ಆಕ್ಷನ್ ಕಟ್