ಬೆಂಗಳೂರು: ನಾವು ಪರಿಶುದ್ಧವಾಗಿದ್ದಾಗ ಯಾರು ಏನು ಮಾಡೋದಕ್ಕೆ ಆಗೋದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.
Advertisement
ತಾಯಿ ಚನ್ನಮ್ಮಗೆ ಐಟಿ ನೋಟಿಸ್ ನೀಡಿರುವ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅದ್ರಲ್ಲಿ ತಲೆಕಡೆಸಿಕೊಳ್ಳುವ ವಿಚಾರ ಏನಿದೆ. ನೋಟಿಸ್ ನೀಡಿರುವ ಬಗ್ಗೆ ನನಗೆ ಐಡಿಯಾ ಇಲ್ಲ, ಈ ಬಗ್ಗೆ ನನಗೆ ಯಾವುದು ಗೊತ್ತಿಲ್ಲ. ನೋಟಿಸ್ ಕೊಟ್ಟಿರೋದು ನನಗೆ ಗೊತ್ತಿಲ್ಲ. ಕೊಟ್ಟಿದ್ದರು ಸಹ ಪ್ಯಾನಿಕ್ ಆಗುವ ಅವಶ್ಯಕತೆ ಇಲ್ಲ ಎಂದು ಸಮಾಧಾನವಾಗಿ ಪ್ರತಿಕ್ರಿಯೆ ಕೊಟ್ಟರು. ಇದನ್ನೂ ಓದಿ: ಎಚ್‍ಡಿಡಿ ಪತ್ನಿಗೆ ಐಟಿ ನೋಟಿಸ್
Advertisement
Advertisement
ನಮ್ಮ ಕುಟುಂಬದಲ್ಲಿ ನಮ್ಮ ವ್ಯವಹಾರ ತೆರೆದ ಪುಸ್ತಕ. ದೇವೇಗೌಡರ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದು ಮಹತ್ವ ಕೊಟ್ಟಿಲ್ಲ. ನಾವು ಸಹ ನಮ್ಮ ರಾಜಕೀಯ ಜೀವನದಲ್ಲಿ ಹಣಕ್ಕೆ ಎಂದು ಪ್ರಾಮುಖ್ಯತೆ ಕೊಟ್ಟವರಲ್ಲ. ನಾವು ಪರಿಶುದ್ಧವಾಗಿರಬೇಕು ಅಷ್ಟೇ. ನೋಟಿಸ್ ಕೊಟ್ಟಿದ್ದಾರೆ ಅದಕ್ಕೆ ಏನ್ ಉತ್ತರ ಕೊಡಬೇಕೋ ಕೊಟ್ಟರಾಯ್ತು. ನನ್ನ ಸಹೋದರನಿಗೂ ಅದನ್ನೇ ಹೇಳಿದ್ದೇನೆ. ಇದನ್ನ ನಾವು ರಾಜಕೀಯವಾಗಿ ಬಳಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.
Advertisement
ಕಾನೂನಾತ್ಮಕವಾಗಿ ಆಸ್ತಿ ವಿಚಾರವಾಗಿ ಕೇಳಿರ್ತಾರೆ ಅದನ್ನು ನಾವು ಸಲ್ಲಿಸುತ್ತೇವೆ. ಇದನ್ನ ರಾಜಕೀಯವಾಗಿ ಪ್ರಚಾರ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ. ನಾವು ಪರಿಶುದ್ಧವಾಗಿದ್ದಾಗ ಯಾರು ಏನು ಮಾಡೋದಕ್ಕೆ ಆಗೋದಿಲ್ಲ ಎಂದು ಉತ್ತರಿಸದರು. ಇದನ್ನೂ ಓದಿ: ಯುಗಾದಿ ವೇಳೆ ಹಲಾಲ್ ಮಾಂಸ ಬಹಿಷ್ಕರಿಸಿ – ಹಿಂದೂ ಜನಜಾಗೃತಿ ಸಮಿತಿ ಕರೆ