ಪಾಟ್ನಾ: ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಜನಸಂಖ್ಯೆ ನಿಯಂತ್ರಣದ (Population Control) ಬಗ್ಗೆ ನೀಡಿರುವ ಅಭಿಪ್ರಾಯದಿಂದ ರಾಜಕೀಯ ಕೋಲಾಹಲ ಸೃಷ್ಟಿಯಾಗಿದೆ.
ನಿತೀಶ್ ಕುಮಾರ್ ತಮ್ಮ ಹೇಳಿಕೆಯಲ್ಲಿ ಮಹಿಳೆಯರನ್ನು (Women) ಅವಹೇಳನ ಮಾಡಿದ್ದಾರೆಂದು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಇದನ್ನೂ ಓದಿ: ಪ್ರತಿ ತಿಂಗಳು 6 ಸಾವಿರ ಪಿಂಚಣಿ ಕೊಡಿ – ಸರ್ಕಾರಕ್ಕೆ ಬೋಳುತಲೆ ಪುರುಷರ ಸಂಘ ಮನವಿ
Advertisement
मुख्यमंत्री श्री कुशासन कुमार जी ने जिन अमर्यादित शब्दों का प्रयोग किया वह संवेदनहीनता की पराकाष्ठा है। ऐसे शब्दों का प्रयोग कर वह मुख्यमंत्री पद की गरिमा को कलंकित कर रहे हैं। pic.twitter.com/d8hwU0KzkR
— Samrat Choudhary (@SMCHOUOfficial) January 7, 2023
Advertisement
ಬಿಹಾರದ ವೈಶಾಲಿಯಲ್ಲಿ ನಡೆಯುತ್ತಿರುವ `ಸಮಾಧಾನ ಯಾತ್ರೆ’ಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ಜನಸಂಖ್ಯಾ ನಿಯಂತ್ರಣಕ್ಕೆ (Population Control) ಪುರುಷರು ಹೆಚ್ಚಿನ ಒಲವು ತೋರಬೇಕು. ಮಹಿಳೆಯರು ಅವಿದ್ಯಾವಂತರಾಗಿದ್ದು (UnEducated), ಜನಸಂಖ್ಯೆ ನಿಯಂತ್ರಣದ ಕುರಿತು ಅವರಿಗೆ ಜ್ಞಾನ ಕಡಿಮೆ. ಹೀಗಾಗಿ ಪುರುಷರು ತಮ್ಮನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ, ಜನಸಂಖ್ಯೆ ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.
Advertisement
ಮಹಿಳೆಯರು ಶಿಕ್ಷಿತರಾಗಿದ್ದರೆ ತಾವು ಗರ್ಭಿಣಿಯಾಗದಂತೆ (Pregnant) ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ತಿಳಿದಿರುತ್ತಿತ್ತು. ಆದ್ರೆ ಮಹಿಳೆಯರು ಸರಿಯಾಗಿ ಶಿಕ್ಷಣ ಪಡೆಯದ ಕಾರಣ, ಜನಸಂಖ್ಯೆ ನಿಯಂತ್ರಿಸಲು ಅವರಿಂದ ಆಗುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದರಲ್ಲಿ ವಿಷ ಇದ್ರೆ? – UP ಪೊಲೀಸರು ನೀಡಿದ ಚಹಾವನ್ನು ನಿರಾಕರಿಸಿದ ಅಖಿಲೇಶ್ ಯಾದವ್
Advertisement
ಇದಕ್ಕೆ ಪ್ರತಿಪಕ್ಷ ಬಿಜೆಪಿ (BJP) ಕಿಡಿ ಕಾರಿದೆ. ಸಿಎಂ ಹೇಳಿಕೆ ಬಿಹಾರದ ಪ್ರತಿಷ್ಟೆಗೆ ಕಳಂಕ ತಂದಿದೆ ಎಂದು ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k