ನವದೆಹಲಿ: ಹೆಂಡತಿ ಹಾಗೂ ಆಕೆಯ ಕುಟುಂಬಸ್ಥರ ಕಿರುಕುಳದಿಂದ ಬೇಸತ್ತು, ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಟೆಕ್ಕಿ ಅತುಲ್ ಸುಭಾಷ್ (Atul Subhash) ಅವರ ತಂದೆ ತಮ್ಮ ಮೊಮ್ಮಗ ಎಲ್ಲಿ ಎಂದು ಪ್ರಶ್ನೆ ಎತ್ತಿದ್ದಾರೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಎಂಬವರನ್ನು ಬಂಧಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಅತುಲ್ ತಂದೆ ಪವನ್ ಕುಮಾರ್, ಅತುಲ್ ಅವರ ಮಗ ಎಲ್ಲಿದ್ದಾನೆ ಎಂದು ಪ್ರಶ್ನಿಸಿದ್ದಾರೆ.
Advertisement
ಆರೋಪಿಗಳನ್ನು ಬಂಧಿಸಿದ್ದಕ್ಕಾಗಿ ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಅವರು, ನಿಕಿತಾ ನಮ್ಮ ಮೊಮ್ಮಗನನ್ನು ಎಲ್ಲಿ ಇರಿಸಿದ್ದಾಳೆಂದು ನಮಗೆ ತಿಳಿದಿಲ್ಲ. ಅವನು ಕೊಲೆಯಾಗಿದ್ದಾನೋ ಅಥವಾ ಬದುಕಿದ್ದಾನೋ? ಅವನ ಬಗ್ಗೆ ನಮಗೆ ಏನೂ ತಿಳಿದಿಲ್ಲ. ನನ್ನ ಮೊಮ್ಮಗ ನಮ್ಮೊಂದಿಗೆ ಇರಬೇಕೆಂದು ನಾನು ಬಯಸುತ್ತೇನೆ ಎಂದು ಭಾವುಕರಾಗಿದ್ದಾರೆ.
Advertisement
ನ್ಯಾಯ ಸಿಗುವವರೆಗೆ ಅತುಲ್ ಚಿತಾಭಸ್ಮವನ್ನು ವಿಸರ್ಜನೆ ಮಾಡದಿರಲು ಕುಟುಂಬ ನಿರ್ಧರಿಸಿದೆ. ಇದೇ ವೇಳೆ, ʻಜೌನ್‌ಪುರ ಕೌಟುಂಬಿಕ ನ್ಯಾಯಾಲಯದಲ್ಲಿ ಅತುಲ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರು ಭ್ರಷ್ಟರಾಗಿದ್ದಾರೆʼ ಎಂದು ಆರೋಪಿಸಿದ್ದಾರೆ.
Advertisement
Advertisement
ನಾವು ನಮ್ಮ ಮೊಮ್ಮಗನಿಗಾಗಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರಿಗೆ ಮನವಿ ಮಾಡುತ್ತೇವೆ ಎಂದು ಭಾವುಕರಾಗಿದ್ದಾರೆ.
ಪ್ರಕರಣದಲ್ಲಿ ಬಂಧಿಸಲಾದ ಆರೋಪಿಗಳನ್ನು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಏನಿದು ಪ್ರಕರಣ?
ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದರು. ಆತ್ಮಹತ್ಯೆಗೂ ಮುನ್ನ ಪತ್ನಿ ಹಾಗೂ ಆಕೆಯ ಕುಟುಂಬಸ್ಥರಿಂದ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿದ್ದರು.