– ಯಾವ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಲಿದೆ?
ಬೆಂಗಳೂರು: ಸಿಲಿಕಾನ್ ಸಿಟಿ ಜನರು ಈಗಾಗಲೇ ಟ್ರಾಫಿಕ್ ಕಿರಿಕಿರಿಯಿಂದ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಈಗ ಬೆಂಗಳೂರಿನ ಜನರು ಇನ್ನಷ್ಟು ಟ್ರಾಫಿಕ್ ಸಮಸ್ಯೆ ಎದುರಿಸಲು ಸಿದ್ಧರಾಗಬೇಕಿದೆ. ಇಷ್ಟು ದಿನ ಸ್ಥಗಿತಗೊಂಡಿದ್ದ ವೈಟ್ ಟಾಪಿಂಗ್ ಕಾಮಗಾರಿ ಮತ್ತೆ ಆರಂಭವಾಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಯಿಂದ ಟ್ರಾಫಿಕ್ ಕಿರಿಕಿರಿಗೆ ಒಳಗಾಗಿದ್ದ ಜನ ಕೆಲಕಾಲ ನಿಟ್ಟುಸಿರು ಬಿಟ್ಟಿದ್ದರು. ಆದ್ರೆ ಈಗ ಮತ್ತೆ ವೈಟ್ ಟ್ಯಾಪಿಂಗ್ ಕಾಮಗಾರಿ ಆರಂಭವಾಗುತ್ತಿದ್ದು ಟ್ರಾಫಿಕ್‍ನಿಂದ ನರಕ ಸದೃಶ್ಯ ಎದುರಾಗಲಿದೆ. ಹೌದು ಸಂಚಾರಿ ಪೊಲೀಸರಿಂದ ಅನುಮತಿ ದೊರೆಯದ ಹಿನ್ನೆಲೆ ಸ್ಥಗಿತಗೊಂಡಿದ್ದ ಕಾಮಗಾರಿ ಮತ್ತೆ ಆರಂಭವಾಗುತ್ತಿದೆ. ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಸಂಚಾರಿ ಪೊಲೀಸರಿಂದ ಕಾಮಗಾರಿಗೆ ಅನುಮತಿ ದೊರಕಿಸಿದ್ದು, ಇದೇ ತಿಂಗಳ 27 ರಿಂದ ಕಾಮಗಾರಿ ಆರಂಭವಾಗಲಿದೆ.
Advertisement
ಯಾವ ರಸ್ತೆಯಲ್ಲಿ ವೈಟ್ ಟ್ಯಾಪಿಂಗ್?
ಹೆಬ್ಬಾಳ – ಹೆಣ್ಣೂರು ರಸ್ತೆ
ನಾಯಂಡಳ್ಳಿ – ಸುಮ್ಮನಹಳ್ಳಿ
ವೆಸ್ಟ್ ಆಫ್ ಕಾರ್ಡ್ ರೋಡ್ – ಟೋಲ್ ಗೇಟ್
Advertisement
Advertisement
95 ಕಿ.ಮೀಗೆ ಟೆಂಡರ್ ಆಗಿದ್ದ ವೈಟ್ ಟ್ಯಾಪಿಂಗ್ ಕಾಮಗಾರಿ ಇಲ್ಲಿಯವರಗೂ 15 ಕಿ.ಮೀ ವರೆಗೂ ಕಾಮಗಾರಿ ಪೂರ್ಣವಾಗಿದೆ. ಮತ್ತೆ ವೈಟ್ ಟ್ಯಾಪಿಂಗ್ ಕಾಮಗಾರಿ ಶುರುವಾಗಿದ್ದರಿಂದ ವಾಹನ ಸವಾರರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚೆನ್ನಾಗಿ ಇರೋ ರಸ್ತೆನಾ ಹಾಳು ಮಾಡಿ ವೈಟ್ ಟ್ಯಾಪಿಂಗ್ ಮಾಡಲು ಹೊರಟಿದ್ದಾರೆ. ಯಾರಿಗೆ ಬೇಕು ಈ ವೈಟ್ ಟ್ಯಾಪಿಂಗ್? ಎಂದು ಪ್ರಶ್ನಿಸುತ್ತಿದ್ದಾರೆ.ಪಡಿಸ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv