ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ (BMTC Bus Stand) ಮುಖ್ಯರಸ್ತೆಗೆ ವೈಟ್ ಟಾಪಿಂಗ್ (White Topping) ಭಾಗ್ಯ ಒದಗಿ ಬಂದಿದೆ.
ಇತ್ತೀಚಿಗೆ ಬೆಂಗಳೂರಿನಲ್ಲಿ ಗುಂಡಿಗಳ ಸಮಸ್ಯೆ ಕೇಳಿ ಬರುತ್ತಿರುವುದು ಸಾಮಾನ್ಯವಾಗಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಮುಖ್ಯರಸ್ತೆ ಗುಂಡಿಮಯ ಆಗಿದೆ. ಇದರಿಂದ ಜನರಿಗೆ ಓಡಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಬೃಹತ್ ಗಾತ್ರದ ಗುಂಡಿಗಳಿಂದ ವಾಹನಗಳು ಓಡಾಡುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಬಿಬಿಎಂಪಿ (BBMP) ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಾ ಇದ್ದಾರೆ: ಪೇಜಾವರ ಶ್ರೀ
ಸದ್ಯ ವೈಟ್ ಟಾಪಿಂಗ್ ಮಾಡಲು ಸಿದ್ಧವಾಗಿದ್ದು, ವೈಟ್ ಟಾಪಿಂಗ್ ಕಾಮಗಾರಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಆರಂಭ ಆಗಲಿದೆ. ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ಕಾಮಗಾರಿ ಆರಂಭ ಮಾಡಲಿದ್ದು, ಮತ್ತೊಂದು ಭಾಗದಲ್ಲಿ ರಸ್ತೆ ಸಂಚಾರ ಇರಲಿದೆ. ವೈಟ್ ಟ್ಯಾಪಿಂಗ್ ಕೆಲಸದಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಓಡಾಟಕ್ಕೆ ಸಮಸ್ಯೆ ಆಗಲಿದೆ. ರೈಲ್ವೆ ಸ್ಟೇಷನ್, ಆನಂದ್ ರಾವ್ ಸರ್ಕಲ್, ಚಿಕ್ಕಪೇಟೆ, ಉಪ್ಪಾರಪೇಟೆ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಕಾಮಗಾರಿ ಆರಂಭವಾದ ನಾಲ್ಕು ತಿಂಗಳುಗಳ ಕಾಲ ಈ ಸಮಸ್ಯೆ ಇರಲಿದೆ.
ಮೆಜೆಸ್ಟಿಕ್‌ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡುವುದು ಒಳ್ಳೆಯ ವಿಚಾರವಾದರೆ ಕಾಮಗಾರಿ ಆರಂಭ ಮಾಡಿ ಬೇಗ ಕೆಲಸ ಮುಗಿಸುತ್ತಾರಾ ಎನ್ನುವುದೇ ಸದ್ಯದ ಕುತೂಹಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 28-10-2024