– 1,700 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಯೋಜನೆ
ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು (Brand Bengaluru) ಸುಗಮ ಸಂಚಾರ ಯೋಜನೆ ಅಡಿಯಲ್ಲಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷಗಳ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ 1,700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದರು.
Advertisement
ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ವೈಟ್ ಟ್ಯಾಪಿಂಗ್ ಕಾಮಗಾರಿಗಳ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯೋಜನೆಯಲ್ಲಿ 14 ಪ್ಯಾಕೇಜ್‌ಗಳ ಮೂಲಕ ಬೆಂಗಳೂರಿನ 150 ಕಿ.ಮೀ ಉದ್ದದ 97 ರಸ್ತೆಗಳಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ನಡೆಯುತ್ತಿದೆ. ಬಿಡಬ್ಲ್ಯೂಎಸ್‌ಎಸ್‌ಬಿ, ಬಿಬಿಎಂಪಿ, ಬಿಡಿಎ, ಬೆಸ್ಕಾಂಗಳ ನಡುವೆ ಸಮನ್ವಯತೆ ಸಾಧಿಸಿ ಶಾಶ್ವತ ರಸ್ತೆ ನಿರ್ಮಿಸಲಾಗುತ್ತಿದೆ. ಕೇಬಲ್, ಪವರ್ ವೈಯರ್‌ಗಳಿಗೆ ಅವಕಾಶ ಕಲ್ಪಿಸಿ, ಯಾವುದೇ ಕಾರಣಕ್ಕೂ ರಸ್ತೆ ಅಗೆಯಲು ಅವಕಾಶ ನೀಡದೆ, ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿ ಈ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: 422 ವಸ್ತುಗಳನ್ನು ಗುರುತಿಸಿ, ನೊಬೆಲ್ ವರ್ಲ್ಡ್ ರೆಕಾರ್ಡ್ ಪುಟ ಸೇರಿದ 9 ತಿಂಗಳ ಐರಾ
Advertisement
Advertisement
ನಮಗೆ ಗುಣಮಟ್ಟದ ಕಾಮಗಾರಿ ಮುಖ್ಯ. ಕಾಮಗಾರಿ ಶೀಘ್ರಗತಿಯಲ್ಲಿ ಸಾಗಬೇಕು ಎಂದು ಇಂದು ಪರಿಶೀಲನೆ ಮಾಡಿದ್ದೇನೆ. ಈ ಯೋಜನೆ ಕಾಮಗಾರಿ ಪೂರ್ಣಗೊಳಿಸಲು 11 ತಿಂಗಳು ಕಾಲಮಿತಿ ನಿಗದಿಪಡಿಸಲಾಗಿದೆ. ಈ ಯೋಜನೆಯ ಎರಡನೇ ಹಂತದಲ್ಲಿ 450 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮಾಡಲಾಗುವುದು. ಈ ಎಲ್ಲಾ ಹಂತಗಳ ಕಾಮಗಾರಿ ಮುಕ್ತಾಯವಾದರೆ ಬೆಂಗಳೂರಿನಲ್ಲಿ ಒಟ್ಟಾರೆ 1,700 ಕಿ.ಮೀ ಉದ್ದದ ರಸ್ತೆ ವೈಟ್ ಟ್ಯಾಪಿಂಗ್ ಮುಕ್ತಾಯಗೊಳ್ಳಲಿದೆ ಎಂದರು. ಇದನ್ನೂ ಓದಿ: IPL 2025 Schedule | ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ KKR vs RCB ಕಾದಾಟ – ಪಂದ್ಯ ಯಾವಾಗ?
Advertisement
ರಸ್ತೆ ಗುಣಮಟ್ಟ ಪರೀಕ್ಷೆಗೆ ನಾನು ಇಂದು ಭೇಟಿ ನೀಡಿದ್ದೇನೆ. ಪಾದಚಾರಿ ಮಾರ್ಗಗಳನ್ನು ನೋಡಿದ್ದೇನೆ. ಭಾನುವಾರ ವಾಹನ ದಟ್ಟಣೆ ಕಡಿಮೆ ಇರುವ ಕಾರಣ ಇಂದು ಕಾಮಗಾರಿ ಪರಿಶೀಲನೆ ಮಾಡುತ್ತಿದ್ದು, ಕಾಮಗಾರಿ ನಡೆಯುತ್ತಿರುವ ಎಲ್ಲಾ ಭಾಗಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ: ಕೊತ್ತೂರು ಮಂಜುನಾಥ್
ಇದರ ಜೊತೆಗೆ ಬೆಂಗಳೂರಿನಾದ್ಯಂತ ಸಂಪೂರ್ಣವಾಗಿ ಮಳೆನೀರುಗಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದೇವೆ. ನಾವು ಒಂದೇ ದಿನದಲ್ಲಿ ಎಲ್ಲಾ ಬದಲಾವಣೆ ಮಾಡುತ್ತೇವೆ ಎಂದು ಹೇಳುವುದಿಲ್ಲ. ಹಂತ ಹಂತವಾಗಿ ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಯೋಜನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru| ಅರಮನೆ ಮೈದಾನದಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ
ಈ ಯೋಜನೆಗೆ ಮೀಸಲಿಟ್ಟಿರುವ 1,700 ಕೋಟಿ ಹಣ ರಸ್ತೆಗೆ ವೆಚ್ಚವಾಗಬೇಕಲ್ಲವೇ. ಈ ರಸ್ತೆ ನಿರ್ದಿಷ್ಟ ಪ್ರಮಾಣದಲ್ಲಿ ದಪ್ಪ ಇರಬೇಕು, ಈ ರಸ್ತೆಗಳಲ್ಲಿ ಬಿಡಬ್ಲೂಎಸ್‌ಎಸ್‌ಬಿ ಕೆಲಸಗಳು ಒಟ್ಟಿಗೆ ಮುಗಿಯಬೇಕು. ಹೀಗಾಗಿ ಪರಿಶೀಲನೆ ಮಾಡಿದ್ದೇನೆ. ಕಾಮಗಾರಿ ಮುಗಿದ ನಂತರವೂ ಗುಣಮಟ್ಟ ಪರಿಶೀಲನೆ ಮಾಡಲಾಗುವುದು. ಎಲ್ಲಾ ಕಡೆಗಳಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ನಡೆಯುತ್ತಿದೆ. ಒಂದು ಕಡೆ ನನಗೆ ಸ್ವಲ್ಪ ವ್ಯತ್ಯಾಸ ಕಂಡುಬಂದಿದೆ. ತಾಂತ್ರಿಕ ತಂಡವನ್ನು ಅಲ್ಲಿಗೆ ಕಳುಹಿಸಿ ಮತ್ತೊಮ್ಮೆ ಪರಿಶೀಲನೆ ನಡೆಸುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದರ್ಶನ್ ಬರ್ತ್‌ಡೇ ಸಂಭ್ರಮ; ಆಪ್ತರಿಗಷ್ಟೇ ಆಹ್ವಾನ ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ಟನಲ್ ರಸ್ತೆ ಸರಿಯಿಲ್ಲ ಎಂಬ ಕೇಂದ್ರ ರೈಲ್ವೆ ಸಚಿವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹಾಗಿದ್ದರೆ ಅವರು ಮಹಾರಾಷ್ಟ್ರದಲ್ಲಿ ಯಾಕೆ ಟನಲ್ ರಸ್ತೆ ಮಾಡಿಸುತ್ತಿದ್ದಾರೆ? ಅವರಿಗೂ ಇದಕ್ಕೂ ಏನು ಸಂಬಂಧ? ಅವರ ಇಲಾಖೆ ಕೆಲಸ ಅವರು ಮಾಡಲಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ
ಬೆಂಗಳೂರಿನಲ್ಲಿ ನೀರಿನ ಅಭಾವ ಎದುರಾಗಬಾರದು ಎಂಬ ಕಾರಣಕ್ಕೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿದ್ದೇವೆ. ಜನರು ಮುಂದೆ ಬಂದು ನೀರಿನ ಸಂಪರ್ಕ ಪಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್