ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.
ಇಡೀ ಜಗತ್ತು ಕೋವಿಡ್-19 ವೈರಸ್‍ನಿಂದ ಬಳಲುತ್ತಿರುವ ಸಮಯದಲ್ಲಿ ಡಾ.ಹರ್ಷ್ ವರ್ಧನ್ ಅವರು ನೇಮಕಾತಿಯಾಗಿದ್ದಾರೆ. ಬಂದಿದೆ. ಜಪಾನ್‍ನ ಡಾ. ಹಿರೊಕಿ ನಕಟನಿ ಅವರು ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯಕಾರಿ ಮಂಡಳಿಯ ಅಧ್ಯಕ್ಷರಾಗಿ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದರು. ಅವರ ಸ್ಥಾನವನ್ನು ಡಾ.ಹರ್ಷವರ್ಧನ್ ವಹಿಸಿಕೊಂಡಿದ್ದು, 34 ಮಂದಿ ಸದಸ್ಯರನ್ನು ಈ ಕಾರ್ಯಕಾರಿ ಮಂಡಳಿ ಹೊಂದಿದೆ. ಭಾರತದ ಪ್ರತಿನಿಧಿಯನ್ನು ಕಾರ್ಯಕಾರಿ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಬೇಕೆಂಬ ಪ್ರಸ್ತಾವನೆಗೆ 194 ದೇಶಗಳು ಮಂಗಳವಾರದ ಸಭೆಯಲ್ಲಿ ಸಹಿ ಮಾಡಿದ್ದವು.
Advertisement
Delhi: Union Health Minister Dr Harsh Vardhan takes charge as the chairman of the World Health Organisation (WHO) Executive Board pic.twitter.com/fz3ervSEYZ
— ANI (@ANI) May 22, 2020
Advertisement
ಇದು ಪೂರ್ಣ ಪ್ರಮಾಣದ ಹುದ್ದೆಯಲ್ಲ, ಅಧ್ಯಕ್ಷರಾದವರು ಕಾರ್ಯಕಾರಿ ಮಂಡಳಿಯ ಸಭೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಮೇ 22ರಿಂದ 3 ವರ್ಷಗಳವರೆಗೆ ಭಾರತದ ಪ್ರತಿನಿಧಿಯನ್ನು ನಾಮಾಂಕಿತ ಮಾಡುವುದಕ್ಕೆ ಕಳೆದ ವರ್ಷ ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ-ಪೂರ್ವ ಏಷ್ಯಾ ಗ್ರೂಪ್ ಅವಿರೋಧವಾಗಿ ತೀರ್ಮಾನಿಸಿತ್ತು.
Advertisement
ಅಧಿಕಾರ ಸ್ವೀಕರಿಸಿ ಮಾತನಾಡಿದ ಡಾ. ಹರ್ಷ್ ವರ್ಧನ್, “ನನ್ನ ವೈಯಕ್ತಿಕ ಧ್ಯೇಯವಾಕ್ಯವೆಂದರೆ ಸಂಪತ್ತು ಇಲ್ಲದವರ ಆರೋಗ್ಯವನ್ನು ಕಾಪಾಡುವುದು” ಎಂದು ಹೇಳಿದ್ದಾರೆ.
Advertisement
I am aware I am entering this office at a time of global crisis on account of this pandemic. At a time, when we all understand that there will be many health challenges in the next 2 decades. All these challenges demand a shared response: Union Health Minister Dr Harsh Vardhan pic.twitter.com/UjECPuNHgr
— ANI (@ANI) May 22, 2020
“ಹೆಮ್ಮಾರಿ ಕೊರೊನಾ ವೈರಸ್‍ನಿಂದ ವಿಶ್ವಾದ್ಯಂತ 3.30 ಲಕ್ಷಕ್ಕೂ ಹೆಚ್ಚು ಮೃತಪಟ್ಟಿದ್ದು ದುಃಖ ತಂದಿದೆ. ಅಷ್ಟೇ ಅಲ್ಲದೆ ಪ್ರಪಂಚದಾದ್ಯಂತ ಆರ್ಥಿಕ ಹೊಡೆತ ಉಂಟಾಗಿದೆ. ಈ ಸಾಂಕ್ರಾಮಿಕ ರೋಗದಿಂದಾಗಿ ವಿಶ್ವ ಜಾಗತಿಕ ಬಿಕ್ಕಟ್ಟು ಎದುರಿಸುತ್ತಿರುವ ಸಮಯದಲ್ಲಿ ಈ ಕಚೇರಿಗೆ ಪ್ರವೇಶಿಸುತ್ತಿದ್ದೇನೆ. ಮುಂದಿನ 2 ದಶಕಗಳಲ್ಲಿ ಅನೇಕ ಆರೋಗ್ಯ ಸವಾಲುಗಳು ಎದುರಾಗುತ್ತವೆ ಎನ್ನುವುದನ್ನ ನಾವು ಅರ್ಥಮಾಡಿಕೊಂಡಿದ್ದೇವೆ. ಎಲ್ಲಾ ಸವಾಲುಗಳನ್ನ ಹಂಚಿಕೆಕೊಂಡು ಪರಿಹಾರ ಕಂಡುಕೊಳ್ಳಬೇಕಿದೆ” ಎಂದು ತಿಳಿಸಿದರು.
‘ಬಡತನದ ಸಮಯದಲ್ಲೇ ನಾವು ನಮ್ಮ ದೇಶದಲ್ಲಿ ಸಿಡುಬು ಮತ್ತು ಪೋಲಿಯೊವನ್ನು ನಿರ್ಮೂಲನೆ ಮಾಡಿದ್ದೇವೆ. ತೀರಾ ಇತ್ತೀಚೆಗೆ ಕೊರೊನಾ ವಿರುದ್ಧದ ಹೋರಾಟದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಭಾರೀ ಪ್ರಯಾಣದ ಸಾವು ನೋವು ತಡೆದಿದ್ದೇವೆ. ಸದ್ಯದ ಮಾಹಿತಿ ಪ್ರಕಾರ ಭಾರತದಲ್ಲಿ ಕೇವಲ ಶೇ.3ರಷ್ಟು ಜನ ಸೋಂಕಿತರು ಮೃತಪಟ್ಟಿದ್ದಾರೆ. 135 ಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿ ಕೇವಲ 1 ಲಕ್ಷಕ್ಕೂ ಅಧಿಕ ಜನರಿಗೆ ಮಾತ್ರ ಸೋಂಕು ದೃಢಪಟ್ಟಿದೆ. ಈ ಪೈಕಿ ಶೇ.40ಕ್ಕಿಂತ ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ” ಎಂದು ಮಾಹಿತಿ ನೀಡಿದರು.