ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇದೇ ಏಪ್ರಿಲ್ 19ರಿಂದ ಆರಂಭಗೊಂಡಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ, ತಮಿಳುನಾಡು ಸೇರಿದಂತೆ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಅದರಲ್ಲೂ ಭಾರೀ ಕುತೂಹಲ ಕೆರಳಿಸಿರುವ ಕರ್ನಾಟಕದಲ್ಲಿ ಇದೇ ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದೆ. ಮೇ 7 ರಂದು 2ನೇ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಹೊರ ಬೀಳಲಿದೆ.
ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಬಲಿಷ್ಠ ಹುರಿಯಾಳುಗಳನ್ನು ಕಣಕ್ಕಿಳಿಸಿವೆ. ಅದರಲ್ಲೂ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ತವರು ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್‌ನಿಂದ ಗೀತಾ ಶಿವರಾಜ್‌ಕುಮಾರ್ ಕಣದಲ್ಲಿದ್ದಾರೆ. ಆದ್ರೆ ಬಿಜೆಪಿ ಕಟ್ಟಾಳುವಾಗಿದ್ದ ಕೆ.ಎಸ್ ಈಶ್ವರಪ್ಪ ಅವರೇ ಬಂಡಾಯ ಅಭ್ಯರ್ಥಿಯಾಗಿ ರಾಘವೇಂದ್ರ ಅವರ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ. ಮೊದಲ ಮತ್ತು 2ನೇ ಹಂತದ ಚುನಾವಣೆಗಳಿಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಯಾರೆಲ್ಲಾ ಅಭ್ಯರ್ಥಿಗಳಾಗಿ ನಿಂತಿದ್ದಾರೆ? ಯಾರ ನಡುವೆ ನೇರ ಹಣಾ-ಹಣಿ ಏರ್ಪಟ್ಟಿದೆ ಎಂಬುದನ್ನು ತಿಳಿಯುವ ಕುತುಹಲ ನಿಮಗಿದ್ದರೆ ಮುಂದೆ ನೋಡಿ…..