ಚಿಕ್ಕಮಗಳೂರು: ಟಿ20 ವಿಶ್ವಕಪ್ (T20 WorldCup) ಸೆಮಿಫೈನಲ್‌ನಲ್ಲಿ ಕಿವೀಸ್ ವಿರುದ್ಧ ಗೆದ್ದು ಪಾಕಿಸ್ತಾನ (Pakistan) ಫೈನಲ್ ಪ್ರವೇಶಿಸಿದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನದ ಗೆಲುವು ಸಂಭ್ರಮಿಸಿದ ನಾಲ್ವರು ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.
Advertisement
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಕಾಫಿತೋಟದಲ್ಲಿ ಘಟನೆ ನಡೆದಿದ್ದು, ಅಸ್ಸಾಂ ಮೂಲದ ಅಜರ್ ಅಲಿ, ಆಹಿಲ್ ಉದ್ದಿನ್, ಸೇರಿದಂತೆ ಮತ್ತಿಬ್ಬರು ಅಪ್ರಾಪ್ತರನ್ನು ವಶಕ್ಕೆ ಪಡೆಯಲಾಗಿದೆ. ಇವರ ವಿರುದ್ಧ ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದವರು ಅಕ್ರಮವಾಗಿ ಬಂದಿರೋ ಆರೋಪವಿದೆ. ಇದನ್ನೂ ಓದಿ: ಕಿವೀಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – 3ನೇ ಬಾರಿ ಫೈನಲ್‍ಗೇರಿದ ಪಾಕ್
Advertisement
Advertisement
ಪಾಕಿಸ್ತಾನ ಕಿವೀಸ್ (NewZealand) ವಿರುದ್ಧ ಗೆದ್ದು ಫೈನಲ್ ಪ್ರವೇಶಿಸುತ್ತಿದ್ದಂತೆ ಸಂಭ್ರಮಿಸತೊಡಗಿದ್ದಾರೆ. ಕಿಡಿಗೇಡಿಗಳು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಸಹ ಕೂಗಿದ್ದಾರೆ. ಈ ವಿಷಯವನ್ನು ಸ್ಥಳೀಯರು ಹಾಗೂ ಕಾರ್ಮಿಕರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ. ನಂತರ ಎಸ್ಟೇಟ್ ಮ್ಯಾನೇಜರ್ ನಾರಾಯಣಮೂರ್ತಿ ಅವರಿಂದ ಪೊಲೀಸರಿಗೆ (Police) ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಭಯಂಕರವಾಗಿ ಆಡಿದ್ರೂ ಭಾರತ ಸೋಲೋದಕ್ಕೆ ಅರ್ಹವಾಗಿತ್ತು- ಅಖ್ತರ್ ಟೀಕೆ
Advertisement
ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ನಡೆಸುತ್ತಿದ್ದಾರೆ.
ಬುಧವಾರ ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ವಿಶ್ವಕಪ್ ಸೆಮಿ ಫೈನಲ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ಕಿವೀಸ್ ಪಡೆ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 152 ರನ್‌ಗಳಿಸಿತ್ತು. ಈ ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನ 3 ವಿಕೆಟ್ ನಷ್ಟಕ್ಕೆ 19.1 ಓವರ್‌ಗಳಲ್ಲೇ 153 ರನ್ ಸಿಡಿಸಿ ಗೆಲುವು ಸಾಧಿಸಿತು.