ಬೆಂಗಳೂರು: ಮಾಜಿ ಸಚಿವ, ಶಾಸಕ ಅಂಬರೀಶ್ ಗೆ ಕಾಂಗ್ರೆಸ್‍ನ ಬಿ ಫಾರಂ ಸಿಕ್ಕರೂ ಅದನ್ನು ಸ್ವೀಕರಿಸದೇ ಪಕ್ಷಕ್ಕೆ ರೆಬಲ್ ಆಗಿ ಉಳಿದುಕೊಂಡಿದ್ದಾರೆ. ಅಂಬರೀಶ್ ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಅನುಮಾನ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಂಬರೀಶ್ ಸ್ಥಾನಕ್ಕೆ ಯಾರು ಬರುತ್ತಾರೆಂದು ಮಂಡ್ಯದ ಜನರಲ್ಲಿ ತೀವ್ರ ಕೂತುಹೂಲ ಹುಟ್ಟುಹಾಕಿದೆ.
ಸಿಎಂ ಸಿದ್ದರಾಮಯ್ಯ ಸಹ ಅಂಬರೀಶ್ ಜೊತೆ ಮಾತನಾಡಲು ಮುಂದಾಗದೆ ಮಂಡ್ಯದಲ್ಲಿ ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದ್ದಾರಂತೆ. ಮಾಜಿ ಸಚಿವ ಜಯರಾಂ ಪುತ್ರ ಅಶೋಕ್ ಜಯರಾಂ ಅವರನ್ನ ಜೆಡಿಎಸ್ ನಿಂದ ಪಕ್ಷಕ್ಕೆ ಕರೆ ತಂದು ಅಖಾಡಕ್ಕೆ ಇಳಿಸಲು ಕಾಂಗ್ರೆಸ್ ನಾಯಕರುಗಳು ಸಿದ್ಧತೆ ಆರಂಭಿಸಿದ್ದಾರೆ. ಆದ್ರೆ ಅಶೋಕ್ ಜಯರಾಂ ಇನ್ನು ತಮ್ಮ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿಲ್ಲ.
Advertisement
Advertisement
ಅಶೋಕ್ ಜಯರಾಂ ಜೊತೆಗೆ ಉಳಿದ ಇಬ್ಬರು ನಾಯಕರ ಜೊತೆ ನೇರವಾಗಿ ಪರಮೇಶ್ವರ್ ಹಾಗೂ ಸಿಎಂ ಸಿದ್ದರಾಮಯ್ಯ ಸಂಪರ್ಕದಲ್ಲಿದ್ದಾರೆ. ಇದೀಗ ಮಂಡ್ಯದಲ್ಲಿ ಅಂಬರೀಶ್ ಇಲ್ಲದಿದ್ದರೆ ಈ ಮೂವರಲ್ಲಿ ಒಬ್ಬರನ್ನ ಅಭ್ಯರ್ಥಿಯಾಗಿಸುವ ಸಾಧ್ಯತೆಗಳಿವೆ ಎಂಬ ಮಾಹಿತಿಗಳು ಲಭ್ಯವಾಗಿವೆ.
Advertisement
ಅಂಬಿ ಹೇಳಿದ್ದು ಏನು?
ಈ ಬಾರಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ಸ್ಪರ್ಧೆ ಬೇಡ ಎಂದು ನಿರ್ಧಾರಕ್ಕೆ ಬಂದಿದ್ದು, ಇಂದು ಸಂಜೆ ವೇಳೆ ಅಧಿಕೃತವಾಗಿ ಈ ವಿಚಾರಕ್ಕೆ ಸ್ಪಷ್ಟನೆ ನೀಡುತ್ತೇನೆ. ನಾನು ಯಾರ ಪರವಾಗಿ ಟಿಕೆಟ್ ಕೇಳುವುದಿಲ್ಲ. ಕೇಳಿದರೆ ಅವರನ್ನು ಗೆಲ್ಲಿಸುವ ಜವಾಬ್ದಾರಿ ನನ್ನದೇ ಆಗುತ್ತದೆ. ಯಾರ ಪರವಾಗಿಯೂ ಪ್ರಚಾರ ಮಾಡುವುದಿಲ್ಲ. ಇನ್ನು, ನಾನು ಪಕ್ಷ ಬಿಡಲ್ಲ. ಯಾವುದೇ ಪಕ್ಷ ಸೇರುವುದಿಲ್ಲ. ಸಿಎಂ ಅವರನ್ನು ಭೇಟಿ ಮಾಡಲು ಆಗುವುದಿಲ್ಲ ಎಂದು ಹೇಳಿ ಬೆಂಗಳೂರಿನತ್ತ ಹೊರಟಿದ್ದಾರೆ ಎಂದು ಹೋಟೆಲ್ ನಲ್ಲಿ ನಡೆದ ಮಾತುಕತೆಯ ಸಾರವನ್ನು ಸಂದೇಶ್ ನಾಗರಾಜ್ ಅವರು ಮಾಧ್ಯಮಗಳಿಗೆ ತಿಳಿಸಿದರು.
Advertisement
ಈ ಎಲ್ಲಾ ವಿದ್ಯಮಾನಗಳ ಮಧ್ಯೆ, ಅಂಬರೀಶ್ ಅವರೇ ಸ್ಪರ್ಧೆ ಮಾಡಬೇಕು. ಒಂದು ವೇಳೆ ಅಂಬರೀಶ್ ಒಪ್ಪದೇ ಇದ್ದರೆ ಅವರ ಸೂಚನೆಯಂತೆ ನಾನೇ ಸ್ಪರ್ಧೆ ಮಾಡ್ತೇನೆ ಎಂದು ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್ ತಿಳಿಸಿದ್ದಾರೆ.