Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ.. ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ.. ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Bengaluru City

ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ.. ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ?- ಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Public TV
Last updated: February 5, 2024 5:22 pm
Public TV
Share
4 Min Read
HDK SIDDU
SHARE

– ಅನ್ನ ಸಿಗದೇ ಜೀವ ಬಲಿಕೊಟ್ಟ ಬಡಪಾಯಿ ಯುವಕನ ಕುರಿತ ವರದಿ ಹಂಚಿಕೊಂಡು ಟೀಕೆ

ಬೆಂಗಳೂರು: ತುತ್ತು ಅನ್ನಕ್ಕೂ ಕಷ್ಟಪಡುತ್ತಿದ್ದ ಬೆಳಗಾವಿಯ ಖಾನಾಪುರ ತಾಲೂಕಿನ ಯುವಕ ಆತ್ಮಹತ್ಯೆಗೆ ಶರಣಾಗಿರುವ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಯನ್ನು ಹಂಚಿಕೊಂಡು ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಕಿಡಿಕಾರಿದ್ದಾರೆ.

ಅನ್ನಭಾಗ್ಯ, ಗೃಹಲಕ್ಷ್ಮೀ ಹೆಸರಿನಲ್ಲಿ ಲೋಕೋದ್ಧಾರ ಮಾಡಿದ್ದೇವೆ ಎಂದು ಸುಳ್ಳು ಲೆಕ್ಕ ಕೊಟ್ಟು ಜನರ ತೆರಿಗೆ ಹಣದಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿರುವ ನಿಮ್ಮ ಲೊಳಲೊಟ್ಟೆ ಬಯಲಾಗಿದೆ ಸಿದ್ದರಾಮಯ್ಯ ನವರೇ. ನುಡಿದಂತೆ ನಡೆದಿದ್ದೇವೆ ಎಂದರೆ ಇದೇನಾ ಮುಖ್ಯಮಂತ್ರಿಗಳೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸಂಸದರು ಗಂಡಸರಲ್ಲ, ಶೋ ಪೀಸ್‌ಗಳು: ಹೆಚ್‌ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ

HDK 1

ಗ್ಯಾರಂಟಿಗಳ ಮೂಲಕವೇ ಗತಿಗೆಟ್ಟ ಕಾಂಗ್ರೆಸ್ ಪಕ್ಷದ ಹೊಟ್ಟೆ ಹೊರೆಯುತ್ತಿರುವ ಮತಿಗೆಟ್ಟ ನಿಮ್ಮ ಸರ್ಕಾರವು ಕಲ್ಯಾಣ ಕಾರ್ಯಕ್ರಮಗಳ ಕಪಟ ಪೋಷಾಕಿನಿಂದ ಮೆರೆಯುತ್ತಿದೆ. ಆ ಪೋಷಾಕು, ನಿಮ್ಮ ಢೋಂಗಿಧೀರತ್ವದ ಮುಖವಾಡ ಕಳಚಿ ನೆಲಕ್ಕೆ ಬಿದ್ದಿದೆ ಇನ್ನಾದರೂ ಎಚ್ಚೆತ್ತುಕೊಳ್ಳಿ ಎಂದು ತಿಳಿಸಿದ್ದಾರೆ.

ಅಧಿಕಾರದ ಮದವೇರಿ ಮಂಪರು ಬಿದ್ದಿರುವ ನಿಮ್ಮ ಕಂಗಳು ಆ ನತದೃಷ್ಟನ ಪ್ರಾಣಾರ್ಪಣೆಯಿಂದಲಾದರೂ ತೆರೆದುಕೊಳ್ಳಲಿ. ಇಲ್ಲವಾದರೆ, ಆ ಯುವಕನ ಸಾವಿನ ಶಾಪ ನಿಮಗೆ ತಟ್ಟದೇ ಬಿಡದು. ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ? ಇದ್ದರೆ ಈ ಧಾರುಣಕ್ಕೆ ರಾಜ್ಯ ಸಾಕ್ಷಿಯಾಗುತ್ತಿತ್ತಾ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರದ ಮದವೇರಿ ಮಂಪರು ಬಿದ್ದಿರುವ ನಿಮ್ಮ ಕಂಗಳು ಆ ನತದೃಷ್ಟನ ಪ್ರಾಣಾರ್ಪಣೆಯಿಂದಲಾದರೂ ತೆರೆದುಕೊಳ್ಳಲಿ. ಇಲ್ಲವಾದರೆ, ಆ ಯುವಕನ ಸಾವಿನ ಶಾಪ ನಿಮಗೆ ತಟ್ಟದೇ ಬಿಡದು.
ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ? ಇದ್ದರೆ ಈ ಧಾರುಣಕ್ಕೆ ರಾಜ್ಯ ಸಾಕ್ಷಿಯಾಗುತ್ತಿತ್ತಾ?3/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 5, 2024

ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರ್ಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು ಎಂದಿದ್ದಾರೆ. ಇದನ್ನೂ ಓದಿ: ಲೋಕಸಭೆಗೆ ಅಲ್ಲ, ರಾಜ್ಯಸಭೆಗೆ ದೆಹಲಿಯಲ್ಲಿ ವಿ.ಸೋಮಣ್ಣ ಲಾಬಿ!

ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಾಹುತಿ ಆಘಾತಕಾರಿ. ನಿಮ್ಮ ಪ್ರಚಾರಪ್ರಿಯ, ಖೊಟ್ಟಿ ಗ್ಯಾರಂಟಿಗಳ ಸರಕಾರದ ಆತ್ಮಸಾಕ್ಷಿಗೆ ಎದುರಾದ ದೊಡ್ಡ ಸವಾಲು. 4/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 5, 2024

ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು ದಿನ ತಾಯಿ ಮಗ ಇಬ್ಬರೂ ಅನ್ನಕ್ಕಾಗಿ ಪರಿತಪಿಸಿದ್ದಾರೆ. 5/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 5, 2024

ಈ ತಾಯಿಯ ಕುಟುಂಬಕ್ಕೆ ಅನ್ನಭಾಗ್ಯ ಏಕೆ ತಲುಪಿಲ್ಲ? ಗೃಹಲಕ್ಷ್ಮೀ ಅವರ ಮನೆ ಬಾಗಿಲಿಗೆ ಹೋಗಿಲ್ಲವೇಕೆ? ಇದಕ್ಕೆ ನೀವೇ ಹೊಣೆ ಸಿದ್ದರಾಮಯ್ಯನವರೇ. 15ನೇ ಬಜೆಟ್ ಮಂಡಿಸುವ ಉಮೇದಿನಲ್ಲಿರುವ ನೀವು ಈ ‘ಸತ್ತ ಸರ್ಕಾರದ ಸಾಹುಕಾರ’ನಷ್ಟೇ. ನಿಮ್ಮ ಸೋಗಲಾಡಿ ಸಮಾಜವಾದ ಬೆತ್ತಲಾಗಿದೆ. ಅನ್ನಕ್ಕಾಗಿ ಸಂಭವಿಸಿದ ಈ ಆತ್ಮಹತ್ಯೆ ಇಡೀ ನಾಡಿಗೇ ಕಪ್ಪುಚುಕ್ಕೆ ಎಂದು ಹೇಳಿದ್ದಾರೆ.

ಈ ತಾಯಿಯ ಕುಟುಂಬಕ್ಕೆ ಅನ್ನಭಾಗ್ಯ ಏಕೆ ತಲುಪಿಲ್ಲ? ಗೃಹಲಕ್ಷ್ಮೀ ಅವರ ಮನೆ ಬಾಗಿಲಿಗೆ ಹೋಗಿಲ್ಲವೇಕೆ? ಇದಕ್ಕೆ ನೀವೇ ಹೊಣೆ ಸಿದ್ದರಾಮಯ್ಯನವರೇ. 15ನೇ ಬಜೆಟ್ ಮಂಡಿಸುವ ಉಮೇದಿನಲ್ಲಿರುವ ನೀವು ಈ ‘ಸತ್ತ ಸರಕಾರದ ಸಾಹುಕಾರ’ನಷ್ಟೇ. ನಿಮ್ಮ ಸೋಗಲಾಡಿ ಸಮಾಜವಾದ ಬೆತ್ತಲಾಗಿದೆ. ಅನ್ನಕ್ಕಾಗಿ ಸಂಭವಿಸಿದ ಈ ಆತ್ಮಹತ್ಯೆ ಇಡೀ ನಾಡಿಗೇ ಕಪ್ಪುಚುಕ್ಕೆ.6/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 5, 2024

ಈ ವರದಿ ನಿಮ್ಮ ಸರ್ಕಾರದ ಮತ್ತು ನಿಮ್ಮನ್ನು ಕಟಕಟೆಯಲ್ಲಿ ನಿಲ್ಲಿಸಿದೆ. ಸ್ವತಃ ನೀವೇ ಈ ಯುವಕನ ಸಾವಿಗೆ ಕಾರಣ ಮತ್ತು ನೇರ ಹೊಣೆ. ರಾಜ್ಯಕ್ಕೆ ನೀವೇ ಸಮಜಾಯಿಷಿ ಕೊಡಬೇಕು ಹಾಗೂ ಶಾಂತವ್ವನಿಗೆ ತಕ್ಷಣವೇ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಂಧ ಭಕ್ತರು ಹೆಚ್ಚಿರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡಿ ಮತಬ್ಯಾಂಕ್ ಗಟ್ಟಿ ಮಾಡಿಕೊಳ್ಳುವ ಹುನ್ನಾರ: ಹರಿಪ್ರಸಾದ್ ವಾಗ್ದಾಳಿ

ಇನ್ನೊಂದು ಸಲಹೆ; ಹಳ್ಳ ಹಿಡಿದಿರುವ ನಿಮ್ಮ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ. ಅವುಗಳ ವೈಫಲ್ಯವನ್ನು ಪರಾಮರ್ಶೆ ಮಾಡಿ. ಅಧಿಕಾರಿಗಳ ಕಿವಿ ಹಿಂಡಿ ಕೆಲಸ ಮಾಡಿಸಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದ್ದರೆ ಮೊದಲು ಈ ಕೆಲಸ ಮಾಡಿ.

ಅನ್ನಕ್ಕಾಗಿ ಜೀವತೆತ್ತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ತಾಯಿಯ ಆರೋಗ್ಯ ಸುಧಾರಿಸಲಿ.8/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) February 5, 2024

ಇನ್ನೊಂದು ಸಲಹೆ ಹಳ್ಳ ಹಿಡಿದಿರುವ ನಿಮ್ಮ ಗ್ಯಾರಂಟಿಗಳನ್ನು ಸರಿದಾರಿಗೆ ತನ್ನಿ. ಅವುಗಳ ವೈಫಲ್ಯವನ್ನು ಪರಾಮರ್ಶೆ ಮಾಡಿ. ಅಧಿಕಾರಿಗಳ ಕಿವಿ ಹಿಂಡಿ ಕೆಲಸ ಮಾಡಿಸಿ. ನಿಮಗೆ ಆತ್ಮಸಾಕ್ಷಿ ಎನ್ನುವುದು ಇದ್ದರೆ ಮೊದಲು ಈ ಕೆಲಸ ಮಾಡಿ. ಅನ್ನಕ್ಕಾಗಿ ಜೀವತೆತ್ತ ಯುವಕನ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಆ ತಾಯಿಯ ಆರೋಗ್ಯ ಸುಧಾರಿಸಲಿ ಎಂದು ಎಕ್ಸ್‌ನಲ್ಲಿ ಹೆಚ್‌ಡಿಕೆ ಪೋಸ್ಟ್‌ ಹಾಕಿದ್ದಾರೆ.

TAGGED:congressh d kumaraswamyjdssiddaramaiahಕಾಂಗ್ರೆಸ್ಜೆಡಿಎಸ್ಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Chikkamagaluru marriage
Chikkamagaluru

ಕಾಫಿನಾಡಲ್ಲೊಂದು ಅಪರೂಪದ ಮದ್ವೆ – ATMನಿಂದ ಲವ್ ಶುರು, ಈಗ ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ

Public TV
By Public TV
13 minutes ago
Chinnaswamy Stadium RCB
Bengaluru City

ಚಿನ್ನಸ್ವಾಮಿಯಲ್ಲಿ ಇಂದು ಬಿಗ್ ಫೈಟ್ – ಆರ್‌ಸಿಬಿ ತವರು ನೆಲದ ಕೊನೆಯ ಲೀಗ್ ಪಂದ್ಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌

Public TV
By Public TV
14 minutes ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
34 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
51 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
1 hour ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?