ಚಿಕ್ಕಬಳ್ಳಾಪುರ: ಯೋಗ ಇರೋರು ಮಾತ್ರ ಯೋಗ ಮಾಡುತ್ತಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಅಭಿಪ್ರಾಯಪಟ್ಟಿದ್ದಾರೆ.
ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಯುಷ್ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಮತ್ತು 4ನೇ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಅಂಗವಾಗಿ ಉದ್ಯೋಗಸ್ಥರಿಗೆ ಯೋಗ ತರಬೇತಿ ಕಾರ್ಯಕ್ರಮವನ್ನು ಆರ್.ಲತಾ ಉದ್ಘಾಟಿಸಿದರು. ಇದನ್ನೂ ಓದಿ: ಫ್ಲೈಓವರ್ ಮೇಲಿಂದ ಬಿದ್ದು ಅಪಘಾತವಾದ ಸ್ಥಳದಲ್ಲೇ ಮತ್ತೊಂದು ಅಪಘಾತ
Advertisement
Advertisement
ಈ ವೇಳೆ ವೇದಿಕೆ ಮೇಲೆ ಮಾತನಾಡಿದ ಅವರು, ಈವರೆಗೆ ಯಾರು ಯೋಗ ಮಾಡುತ್ತಿಲ್ಲವೋ ಅಥವಾ ಯೋಗಾಭ್ಯಾಸ ಮಾಡಲು ಆರಂಭಿಸಿಲ್ಲವೊ ಅವರು ಜೀವನದಲ್ಲಿ ಏನೋ ಒಂದನ್ನು ಕಳೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಯೋಗಾಭ್ಯಾಸದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುತ್ತದೆ. ಎಷ್ಟೇ ಕಾರ್ಯ ಒತ್ತಡಗಳನ್ನು ನಿಭಾಯಿಸುವ ಶಕ್ತಿಯನ್ನು ಯೋಗ ಮಾತ್ರ ನೀಡಬಲ್ಲದು. ಯೋಗ ಮಾಡಿದರೆ ದಿನ ಪೂರ್ತಿ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ ಹಾಗೂ ಅಂದಿನ ಕಾರ್ಯಕ್ಷಮತೆಯನ್ನು ಇಮ್ಮಡಿಗೊಳಿಸುತ್ತೆ ಎಂದರು.
Advertisement
108 ಸೂರ್ಯ ನಮಸ್ಕಾರ ಮಾಡುತ್ತೇನೆ!
ಯೋಗ ಇರೋರು ಮಾತ್ರ ಯೋಗ ಮಾಡುತ್ತಾರೆ. ಯೋಗ ಮಾಡಿದರೆ ರೋಗ ಬರುವುದಿಲ್ಲ ಎಂಬ ನಾಣ್ಣಡಿ ಅಕ್ಷರಶಃ ಸತ್ಯ ಇಷ್ಟೆಲ್ಲಾ ಮಹತ್ವಗಳು ನನಗೆ ತಿಳಿದಿರುವುದು ನನ್ನ ಯೋಗಾಭ್ಯಾಸದ ಸ್ವಂತ ಅನುಭವದಿಂದ ಎಂದು ಹೇಳಲು ಇಚ್ಚಿಸುತ್ತೇನೆ. ಕಳೆದ 5 ವರ್ಷಗಳಿಂದ ಪ್ರತಿ ದಿನ ಮುಂಜಾನೆ ನಾನು ಸಹ ಎರಡು ತಾಸು ಯೋಗಾಭ್ಯಾಸ ಮಾಡುತ್ತೇನೆ. 108 ಸೂರ್ಯ ನಮಸ್ಕಾರ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಮಾಡುತ್ತೇನೆ. ಪ್ರತಿಯೊಬ್ಬರೂ ಒತ್ತಡದಿಂದ ಪಾರಾಗಲು ದಿನನಿತ್ಯ ಯೋಗಾಭ್ಯಾಸ ಮಾಡಿ. ಯಾರು ಇವರೆಗೆ ಯೋಗ ಆರಂಭಿಸಿಲ್ಲವೋ ಅಂತಹವರು ಯೋಗವನ್ನು ಕಲಿತು ಅಭ್ಯಾಸದಲ್ಲಿ ತೊಡಗಿಸಿಕೊಳ್ಳುವಂತೆ ನೆರೆದಿದ್ದ ಉದ್ಯೋಗಸ್ಥ ಸರ್ಕಾರಿ ನೌಕರರಿಗೆ ಕರೆ ನೀಡಿದರು. ಇದನ್ನೂ ಓದಿ: ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ
Advertisement
ಸಂಭಾವ್ಯ ಕೋವಿಡ್ ನ 3ನೇ ಅಲೆ ಬರುತ್ತದೋ ಇಲ್ಲವೋ ಗೊತ್ತಿಲ್ಲ ಆದರೂ ಕೂಡ ಜಿಲ್ಲೆಯಲ್ಲಿ ಅಪೌಷ್ಟಿಕತೆಯನ್ನು ನಿವಾರಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಅನುಷ್ಠಾನ ಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಸಾಮಾನ್ಯ ಅಪೌಷ್ಟಿಕತೆಯಿಂದ 5,200 ಮತ್ತು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 87 ಮಕ್ಕಳಿದ್ದಾರೆ. ಈ ಮಕ್ಕಳಿಗೆ ಪೌಷ್ಟಿಕ ಆಹಾರಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ವಿತರಿಸಲಾಗುತ್ತಿದೆ. ಇಂತಹ ಮಕ್ಕಳ ಮನೆಗೆ ಇಲಾಖೆಯಿಂದ ಪೌಷ್ಟಿಕ ಆಹಾರ ಪೂರೈಕೆ ಆಗುತ್ತಿದ್ದೆಯೇ ಇಲ್ಲವೇ ಎಂಬುದನ್ನು ಶಿಶು ಅಭಿವೃದ್ಧಿ ಅಧಿಕಾರಿಗಳು ಪರಿಶೀಲಿಸಬೇಕು. ಮಕ್ಕಳನ್ನು ಬಲಪಡಿಸುವ ಮತ್ತು ಕೋವಿಡ್ ನಿಂದ ಬಾಧಿತರಾಗದಂತೆ ತಡೆಗಟ್ಟುವ ಕೆಲಸವನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರು.
ಪೌಷ್ಠಿಕ ಪೌಡರ್ ವಿತರಿಸಲಾಗಿದೆ!
ಸತ್ಯಸಾಯಿ ಟ್ರಸ್ಟ್ ಇವರ ಸಹಯೋಗದಲ್ಲಿ ಸಾಯಿ ಶೂರ್ ಪೌಷ್ಠಿಕ ಪೌಡರ್ ಅನ್ನು ಜಿಲ್ಲೆಯಾದ್ಯಂತ ವಿತರಿಸಲಾಗಿದೆ. ಶಿಶು ಮತ್ತು ಚಿಕ್ಕ ಮಕ್ಕಳ ಆಹಾರ ಪದ್ಧತಿಗಳ ಹಾಗೂ ಎದೆ ಹಾಲಿನ ಮಹತ್ವದ ಕುರಿತು ಜಾಗೃತಿ ಮೂಡಿಸುವ ಕರಪತ್ರಗಳನ್ನು ಬಿಡುಗಡೆ ಮಾಡಿದರು. ಇದನ್ನೂ ಓದಿ: ಅಮ್ಮ ನೀವು ಸೂಪರ್ ವುಮೆನ್ – ಹಾಡಿ ಹೊಗಳಿದ ರಾಧಿಕಾ ಪಂಡಿತ್
ಮಹಿಳೆಯರು ತಮ್ಮ ಕುಟುಂಬ ಸದಸ್ಯರ ಆರೋಗ್ಯದ ಕುರಿತು ಕಾಳಜಿ ವಹಿಸುತ್ತಾರೆ. ಆದರೆ ಸ್ವಂತ ಆರೋಗ್ಯವನ್ನು ನಿರ್ಲಕ್ಷಿಸುತ್ತಾರೆ. ಯಾವಾಗಲೂ ಮನೆ ಕೆಲಸದಲ್ಲಿಯೇ ತಲ್ಲೀನರಾಗುತ್ತಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಮನೆಯಲ್ಲಿಯೇ ಸಿದ್ಧಪಡಿಸುವ ಆಹಾರವನ್ನು ಸಯಮಕ್ಕೆ ಸರಿಯಾಗಿ ಸೇವಿಸಬೇಕು. ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸಬೇಕು. ಮಕ್ಕಳಲ್ಲಿ, ಗರ್ಭಣಿಯರು ಮತ್ತು ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಒಂದು ತಿಂಗಳ ಕಾಲ ಪೋಷಣ್ ಮಾಸಾಚರಣೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಯುಷ್ ಇಲಾಖೆಯ ಮುಖಾಂತರ ಹಮ್ಮಿಕೊಂಡಿರುವುದನ್ನು ಅರ್ಥ ಪೂರ್ಣವಾಗಿ ಆಚರಿಸಬೇಕು.
ಈ ಮಾಸಾಚರಣೆಯ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಈ ವೇಳೆ ಯೋಗ ಗುರುಗಳಾದ ಗೋವಿಂದರಾಜು ಅವರು ನೆರೆದಿದ್ದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳಿಗೆ ಯೋಗದ ವಿವಿಧ ಆಸನಗಳನ್ನು ಮಾಡಿಸಿ ಯೋಗದ ಉಪಯೋಗಗಳನ್ನು ತಿಳಿಸಿಕೊಟ್ಟರು. ಇದನ್ನೂ ಓದಿ: ಪ್ರಿಯತಮೆ ಜೊತೆ ಸೇರಿ 2 ತಿಂಗಳಲ್ಲಿ 21 ಮನೆಗೆ ಕನ್ನ
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರಾದ ನಟರಾಜು, ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ತಬೀಬಾ ಬಾನು ಹಾಗೂ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಭಾಗಿಯಾಗಿದ್ದರು.