DharwadDistrictsKarnatakaLatestMain Post

ಕಾಳಿ ಸ್ವಾಮಿಗೆ ಮಸಿ ಬಳೆದಿದ್ದು ಅಕ್ಷಮ್ಯ ಅಪರಾಧ: ಮುತಾಲಿಕ್

ಧಾರವಾಡ: ಕಾಳಿ ಸ್ವಾಮೀಜಿ ಕನ್ನಡ ವಿರೋಧಿಯಾಗಿ ಮಾತನಾಡಿಲ್ಲ. ನಾನು ಅವರ ಜೊತೆ ಮಾತನಾಡಿದ್ದೇನೆ, ಕಾಳಿ ಸ್ವಾಮೀಜಿ ಕೆಂಪೇಗೌಡರಿಗೆ ಹಾಗೂ ಕುವೆಂಪು ಅವರಿಗೆ ಬೈದಿದ್ದಾರೆ ಎನ್ನಲಾಗಿದೆ, ಆದರೆ ಅವರು ಯಾವ ಸಂದರ್ಭದಲ್ಲೂ ಬೈದಿಲ್ಲ, ಈ ಸಂಬಂಧ ಏನಾದರೂ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಕಾಳಿ ಸ್ವಾಮೀಜಿಗೆ ಮಸಿ ಬಳೆದು ಅವರ ಮೇಲೆ ದಾಳಿ ಮಾಡಿದವರ ದಾಖಲೆಗಳಿದ್ದರೆ ಬಿಡುಗಡೆ ಮಾಡಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಸನ್ಯಾಸಿಗಳ ಮೇಲೆ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ. ಇದನ್ನೂ ಓದಿ: ರಮ್ಯಾಗೆ ಕೋಪ ಇದ್ರೆ ಬೈಯಲಿ ಆದ್ರೆ ಟ್ವೀಟ್‍ನಲ್ಲಿ ಬೇಡ: ನಲಪಾಡ್

ಕಾಳಿ ಸ್ವಾಮೀಜಿ ಏನಾದರೂ ತಪ್ಪು ಮಾಡಿದ್ದರೆ ಕೇಸ್ ಹಾಕಬೇಕಿತ್ತು. ಅದನ್ನು ಬಿಟ್ಟು ಈ ರೀತಿ ಖಾವಿಧಾರಿಗಳಿಗೆ ಮಸಿ ಬಳೆಯುವುದು ಸರಿಯಲ್ಲ. ಇದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಸ್ವಾಮೀಜಿ ಮೇಲೆ ದಾಳಿ ಮಾಡಿದವರು ಕೂಡಲೇ ಕ್ಷಮೆ ಕೇಳಬೇಕು. ಸರ್ಕಾರ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇವತ್ತು ಕಾಳಿ ಸ್ವಾಮೀಜಿ ಮೇಲೆ ಈ ರೀತಿ ಹಲ್ಲೆ ನಡೆಯುತ್ತದೆ. ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತದೆ. ಇದನ್ನು ಸರ್ಕಾರ ಹದ್ದು ಬಸ್ತಿನಲ್ಲಿಡಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಸಿ ಬಳಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ: ಕಾಳಿಸ್ವಾಮಿ

Leave a Reply

Your email address will not be published.

Back to top button