‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರದಲ್ಲಿ ಚಂದನ್ ಶೆಟ್ಟಿಗೆ ನಾಯಕಿ ಯಾರು?

Public TV
2 Min Read
Chandan Shetty

ರುಣ್ ಅಮುಕ್ತ (Arun Amukta) ನಿರ್ದೇಶನದ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಚಿತ್ರ ಚಿತ್ರೀಕರಣ ಪೂರ್ಣಗೊಳಿಸಿಕೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರು, ಚಿಕ್ಕಮಗಳೂರು ಮುಂತಾದೆಡೆಗಳಲ್ಲಿ ಅವ್ಯಾಹತವಾಗಿ ಐವತ್ತು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಇದೀಗ ಕುಂಬಳಕಾಯಿ ಒಡೆದ ನಂತರದಲ್ಲಿ ಚಿತ್ರತಂಡ ಪತ್ರಿಕಾ ಗೋಷ್ಠಿಯ ಮೂಲಕ ಮಾಧ್ಯಮದವರನ್ನು ಮುಖಾಮುಖಿಯಾಗಿದೆ. ಈ ಸಂದರ್ಭದಲ್ಲಿ ನಾಯಕ ನಟ ಚಂದನ್ ಶೆಟ್ಟಿ (Chandan Shetty) ಸೇರಿದಂತೆ, ಒಂದಿಡೀ ಚಿತ್ರತಂಡ ಹಾಜರಿದ್ದು, ಒಂದಷ್ಟು ಕುತೂಹಲಕರವಾದ ವಿಚಾರಗಳನ್ನು ಹಂಚಿಕೊಂಡಿದೆ.

Vidyarthi Vidyarthiniyare 2 2

ಚಂದನ್ ಶೆಟ್ಟಿ ರಾಪ್ ಸಾಂಗ್ ಮೂಲಕವೇ ಸಂಚಲನ ಸೃಷ್ಟಿಸಿದ್ದವರು. ಕಳೆದ ವರ್ಷದಿಂದ ನಾಯಕ ನಟನಾಗಿಯೂ ರೂಪಾಂತರ ಹೊಂದಿರುವ ಚಂದನ್, ಈಗಾಗಲೇ ಒಂದೆರಡು ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಇದೇ ಹೊತ್ತಿನಲ್ಲಿ ಅವರ ನಾಯಕನಾಗಿ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈ ನಿಮಿತ್ತವಾಗಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತಾಡಿದ ಚಂದನ್ ಶೆಟ್ಟಿ, ತಮ್ಮ ಪಾತ್ರದ ಬಗ್ಗೆ, ಚಿತ್ರೀಕರಣದ ಅನುಭವಗಳ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ.

Vidyarthi Vidyarthiniyare 1 2

ಚಂದನ್ ಶೆಟ್ಟಿ ಇಲ್ಲಿ ನಾಯಕನಾಗಿ ನಟಿಸಿದ್ದರೂ ಅವರಿಗೆ ನಾಯಕಿ ಇಲ್ಲವಂತೆ. ಆರಂಭದಲ್ಲಿ ಈ ವಿಚಾರ ತಿಳಿದಾಗ ಕೊಂಚ ಬೇಸರವಾದ, ಕಥೆ ಚೆನ್ನಾಗಿದ್ದದ್ದರಿಂದ ಆ ಕೊರತೆ ಕಾಡಲಿಲ್ಲ ಅಂತ ಚಂದನ್ ಹಾಸ್ಯದ ಧಾಟಿಯಲ್ಲಿ ಹೇಳಿಕೊಂಡಿದ್ದಾರೆ. ನಿರ್ದೇಶಕ ಅರುಣ್ ಅಮುಕ್ತ ಅವರ ಕಸುಬುದಾರಿಕೆಯನ್ನು ಮೆಚ್ಚಿಕೊಳ್ಳುತ್ತಲೇ, ತಮ್ಮ ಆಸುಪಾಸಿನ ಪಾತ್ರಗಳಲ್ಲಿ ನಟಿಸಿರುವ ಇತರೇ ಕಲಾವಿದರನ್ನೂ ಕೂಡಾ ಚಂದನ್ ಕೊಂಡಾಡಿದ್ದಾರೆ. ಅದಕ್ಕೂ ಮಿಗಿಲಾಗಿ, ಪ್ರತಿ ಹಂತದಲ್ಲಿಯೂ ಯಾವುದಕ್ಕೂ ತತ್ವಾರವಾಗದಂತೆ ಪೊರೆದಿರುವ, ಕಾರ್ಪೊರೇಟ್ ಶೈಲಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡಿರುವ ನಿರ್ಮಾಪಕರ ಬಗ್ಗೆ ಚಂದನ್ ಅಡಿಗಡಿಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಅವರಾಡಿದ ಅಷ್ಟೂ ಮಾತುಗಳಲ್ಲಿಯೂ ಕೂಡಾ ಈ ಸಿನಿಮಾ ನಾಯಕನಾಗಿ ತನ್ನ ವೃತ್ತಿ ಬದುಕಿನ ದಿಕ್ಕು ಬದಲಾಯಿಸುತ್ತದೆ ಎಂಬಂಥ ಗಾಢ ನಂಬಿಕೆ ಇಣಕಿ ಹಾಕುತ್ತಿತ್ತು.

 

ತಾರಾ ಬಳಗ, ತಾಂತ್ರಿಕತೆ ಸೇರಿದಂತೆ ಎಲ್ಲ ದಿಕ್ಕಿನಲ್ಲಿಯೂ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಭಿನ್ನವಾಗಿ ಮೂಡಿ ಬಂದಿವೆ ಎಂಬುದು ಚಿತ್ರತಂಡದ ಭರವಸೆ. ಸುಬ್ರಮಣ್ಯ ಕುಕ್ಕೆ ಮತ್ತು ಎ.ಸಿ ಶಿವಲಿಂಗೇಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ಮನೋಜ್ ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

Share This Article