ಸೇನಾ ಹೆಲಿಕಾಪ್ಟರ್ ಪತನ – ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಯಾರು ಗೊತ್ತಾ?

Advertisements

ಚೆನ್ನೈ: ಭಾರತದ ಸೇನಾ ಪಡೆಗಳ ದಂಡನಾಯಕರಾಗಿದ್ದ ಬಿಪಿನ್ ರಾವತ್ ಸೇರಿ 13 ಮಂದಿ Mi-17V5 ಸೇನಾ ಹೆಲಿಕಾಪ್ಟರ್ ಪತನಗೊಂಡು ಹುತಾತ್ಮರಾಗಿದ್ದಾರೆ. ಆದರೆ ಅದೇ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisements

ಗಂಭೀರವಾಗಿ ಗಾಯಗೊಂಡಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‍ಗೆ ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಪ್ಟನ್ ವರುಣ್ ಸಿಂಗ್ ಶೇಕಡಾ 95%ಕ್ಕೂ ಹೆಚ್ಚು ಸುಟ್ಟ ಗಾಯಗಳೊಂದಿಗೆ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಅವರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸಿಡಿಎಸ್ ರಾವತ್ ಸೇರಿ 13 ಮಂದಿ ಹುತಾತ್ಮ – ಬೆಳಗ್ಗೆಯಿಂದ ಏನೇನಾಯ್ತು?

Advertisements

ಶೌರ್ಯ ಚಕ್ರ
14 ಮಂದಿಯಲ್ಲಿ ಬದುಕುಳಿದ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಈ ವರ್ಷದ ಸ್ವಾತಂತ್ರ್ಯ ದಿನದಂದು 2020 ರಲ್ಲಿ ವೈಮಾನಿಕ ತುರ್ತು ಪರಿಸ್ಥಿಸಿ ಸಂದರ್ಭದಲ್ಲಿ ಎಲ್‍ಸಿಎ ತೇಜಸ್ ಯುದ್ಧ ವಿಮಾನವನ್ನು ಸಮರ್ಥವಾಗಿ ಲ್ಯಾಂಡಿಂಗ್ ಮಾಡಿ ಅದರಲ್ಲಿದ್ದ ಯೋಧರ ಪ್ರಾಣ ಉಳಿಸಿದಕ್ಕಾಗಿ ಶೌರ್ಯ ಚಕ್ರವನ್ನು ನೀಡಿ ಗೌರವಿಸಲಾಗಿತ್ತು. ಲೈಟ್ ಕಾಂಬ್ಯಾಟ್ ಏರ್‍ಕ್ರಾಫ್ಟ್ ಸ್ಕ್ವಾಡ್ರನ್‍ನಲ್ಲಿ ಪೈಲಟ್ ಆಗಿದ್ದ ವಿಂಗ್ ಕಮಾಂಡರ್ ವರುಣ್ ಸಿಂಗ್, ಅವರ ಅಸಾಧಾರಣ ಶೌರ್ಯಕ್ಕಾಗಿ ಭಾರತದ ಮೂರನೇ ಅತ್ಯುನ್ನತ ಶೌರ್ಯ ಪ್ರಶಸ್ತಿಯನ್ನು ಈ ವರ್ಷದ ಆಗಸ್ಟ್ 15 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೀಡಿ ಗೌರವಿಸಿದ್ದರು. ಇದನ್ನೂ ಓದಿ: 2015ರಲ್ಲಿ ಹೆಲಿಕಾಪ್ಟರ್ ಪತನಗೊಂಡಾಗ ಪಾರಾಗಿದ್ದರು ಬಿಪಿನ್ ರಾವತ್

Advertisements

ಹುತಾತ್ಮರಾದವರು:
ಬಿಪಿನ್ ರಾವತ್ ಸಿಡಿಎಸ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್‍ಎಸ್ ಲಿದ್ದರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿತೇಜಾ, ಹವಾಲ್ದಾರ್ ಸತ್ಪಾಲ್ ಸಿಂಗ್, ವಿಂಗ್ ಕಮಾಂಡರ್ ಪೃಥ್ವಿ ಸಿಂಗ್ ಚೌಹಾಣ್, ಪೈಲಟ್ ಮತ್ತು ಸೂಳೂರಿನ ಇಬ್ಬರು ಅಧಿಕಾರಿಗಳು.  ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು – ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು

Advertisements
Exit mobile version