ಬೆಂಗಳೂರು: ಕಾಂಗ್ರೆಸ್ (Congress) ಗೆದ್ದರೆ ಸಿಎಂ ಯಾರಾಗ್ತಾರೆ ಎಂಬ ಚರ್ಚೆ ‘ಕೈ’ ಪಾಳಯದಲ್ಲಿ ಇನ್ನೂ ನಡೆಯುತ್ತಿದೆ. ಇತ್ತ ಮುಂದಿನ ಸಿಎಂ ನಾನೇ ಅಂತಾ ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿರುವವರಂತೆ ಮಾತನಾಡುತ್ತಲೇ ಇದ್ದಾರೆ. ಈ ಎಲ್ಲದರ ನಡುವೆ ಮಾಜಿ ಸಚಿವ ಎಂ.ಬಿ.ಪಾಟೀಲ್ (M.B.Patil) ಶಾಕಿಂಗ್ ಸುದ್ದಿ ಕೊಟ್ಟಿದ್ದಾರೆ.
ಸಿಎಂ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನೇ ಮುಂದಿಟ್ಟಿರುವ ಎಂ.ಬಿ.ಪಾಟೀಲ್, ಯಾರು ಎಷ್ಟನೇ ಸ್ಥಾನದಲ್ಲಿದ್ದಾರೆ ಎಂಬುದನ್ನೂ ತಿಳಿಸಿದ್ದಾರೆ. ಆ ಮೂಲಕ ಕೈ ಪಾಳಯದಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ. ಇದನ್ನೂ ಓದಿ: ಸಿದ್ದುಗೆ ಕೋಲಾರ ಟಿಕೆಟ್ ಮಿಸ್ – ವರುಣಾ ಒಂದೇ ಫಿಕ್ಸ್
ಈ ಕುರಿತು ಮಾತನಾಡಿರುವ ಅವರು, ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಹಲವು ನಾಯಕರು ಸಮರ್ಥರಿದ್ದಾರೆ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಎಲ್ಲ ರಾಜ್ಯಗಳ ಕಾಂಗ್ರೆಸ್ ಮುಖ್ಯಮಂತ್ರಿಗಳ ಮುಖ್ಯಸ್ಥರು ಖರ್ಗೆ. ಸಿಎಂ ಆಗುವ ಮೊದಲ ಸಾಲಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ದೇಶಪಾಂಡೆ (R.V.Deshpande) ಇದ್ದಾರೆ. ಎರಡನೇ ಸಾಲಿನಲ್ಲಿ ನಾನು, ಡಿಕೆಶಿ (D.K.Shivakumar), ಹೆಚ್.ಕೆ.ಪಾಟೀಲ್, ಪರಮೇಶ್ವರ್ (Parameshwar), ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ರಾಮಲಿಂಗರೆಡ್ಡಿ ಇದ್ದೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಲಿಂಗಾಯತ ಸಮುದಾಯ ಬಿಟ್ಟು ಬೇರೆ ಸಮುದಾಯಕ್ಕೆ ಮನ್ನಣೆ ಕೊಡಲು ತಯಾರಿ ನಡೆಯುತ್ತಿದೆ. ಯಾಕೆ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಡೆ ಇಳಿಸಿದ್ರು? ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಅವರನ್ನು ಸೈಡ್‌ಲೈನ್ ಮಾಡಿದ್ದಾರೆ. ಲಿಂಗಾಯತ ಸಮುದಾಯದವನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಂದಲೇ ಕಾಂಗ್ರೆಸ್ ಸೇರುವ ವಾತಾವರಣ ನಿರ್ಮಾಣ: ಲಕ್ಷ್ಮಣ ಸವದಿ