ನವದೆಹಲಿ: ಕೇರಳದ ವಯನಾಡ್ (Wayanad) ಲೋಕಸಭಾ ಉಪಚುನಾವಣೆಗೆ (Lok Sabha Election) ಕಾಂಗ್ರೆಸ್‌ನ ಪ್ರಿಯಾಂಕಾ ವಾದ್ರಾ (Priyanka Gandhi Vadra) ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ (Navya Haridas) ಅವರನ್ನು ಕಣಕ್ಕೆ ಇಳಿಸಿದೆ.
36 ವರ್ಷದ ನವ್ಯಾ ಹರಿದಾಸ್ ಅವರು ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಓದಿದ್ದು ,ಕ್ಯಾಲಿಕಟ್ ವಿಶ್ವವಿದ್ಯಾಲಯದ ಕೆಎಂಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಸದ್ಯ ಅವರು ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಟ್ವಿಟ್ಟರ್ ಪ್ರೊಫೈಲ್ ಪ್ರಕಾರ ಅವರು ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ.
Advertisement
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಾರ ನವ್ಯಾ ಅವರ ಮೇಲೆ ಯಾವುದೇ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿಲ್ಲ ಮತ್ತು 1,29,56,264 ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಇದನ್ನೂ ಓದಿ: ಶಿಗ್ಗಾವಿ ಉಪಚುನಾವಣೆ| ಭರತ್ ಬೊಮ್ಮಾಯಿಗೆ ಬಿಜೆಪಿ ಟಿಕೆಟ್ ನೀಡಿದ್ದು ಯಾಕೆ?
Advertisement
Advertisement
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ (Rahul Gandhi) ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಈ ಹಿನ್ನೆಲೆಯಲ್ಲಿ ವಯನಾಡ್ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯೇ ಅಂತಿಮ: ಸುರೇಶ್ ಬಾಬು
Advertisement
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಹಿರಿಯ ನಾಯಕ ಸತ್ಯನ್ ಮೊಕೇರಿ ಅವರನ್ನು ವಯನಾಡ್ ಲೋಕಸಭಾ ಉಪಚುನಾವಣೆಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಅಭ್ಯರ್ಥಿಯಾಗಿ ಹೆಸರಿಸಿದೆ.
2009 ರಿಂದ ನಡೆದ ಸತತ 4 ಚುನಾವಣೆಯಲ್ಲಿ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಜಯಗಳಿಸಿದ್ದಾರೆ. ಇದನ್ನೂ ಓದಿ: ಸಂಡೂರು ಉಪಚುನಾವಣೆ| ಬಿಜೆಪಿ ಟೆಕೆಟ್ ಪಡೆದ ಬಂಗಾರು ಹನುಮಂತು ಯಾರು?
2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ 7,06,367 ಮತಗಳನ್ನು ಪಡೆದು 4,31,770 ಮತಗಳಿಂದ ಜಯಗಳಿಸಿದ್ದರು. ಸಮೀಪದ ಸಿಪಿಐ ಅಭ್ಯರ್ಥಿ 2,74,597 ಮತಗಳನ್ನು ಪಡೆದಿದ್ದರು.
2024ರ ಚುನಾವಣೆಯಲ್ಲಿ ರಾಹುಲ್ ಗಾಂಧಿ 6,47,445 ಮತಗಳನ್ನು ಪಡೆದು 3,64,445 ಮತಗಳ ಅಂತರದಿಂದ ಜಯಗಳಿಸಿದ್ದರು. ಸಮೀಪದ ಸಿಪಿಐ ಅಭ್ಯರ್ಥಿ ಅನ್ನಿ ರಾಜಾ 2,83,023 ಮತಗಳನ್ನು ಪಡೆದರೆ ಬಿಜೆಪಿಯ ಸುರೇಂದ್ರನ್ 1,41,045 ಮತಗಳನ್ನು ಗಳಿಸಿದ್ದರು.