ಅಹಮದಾಬಾದ್: ಏಕದಿನ ವಿಶ್ವಕಪ್ ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್ ಪಡೆಗೆ ಭರ್ಜರಿ ಗೆಲುವು ತಂದುಕೊಟ್ಟ ರಚಿನ್ ರವೀಂದ್ರ (Rachin Ravindra) ಈಗ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ. 23 ವರ್ಷದ ರಚಿನ್ ರವೀಂದ್ರ ಅವರಿಗೆ ರಚಿನ್ ಎಂಬ ಹೆಸರು ಬಂದಿದ್ದು ಹೇಗೆ? ಎನ್ನುವ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಕೊಂಡಿದೆ.
Named after two absolute legends, and both Rahul & Sachin will be proud of the knock #RachinRavindra played today!
Sensational ???? on World Cup debut by the youngster! ????
Tune-in to #WorldCupOnStar
5th Oct to 19th Nov | Star Sports Network#CWC23 #Cricket pic.twitter.com/gGgMB5OTs5
— Star Sports (@StarSportsIndia) October 5, 2023
Advertisement
ಹೌದು. ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ 82 ಎಸೆತಗಳಲ್ಲಿಯೇ ಶತಕ (9 ಬೌಂಡರಿ, 4 ಸಿಕ್ಸರ್) ಪೂರೈಸಿದ ರಚಿನ್ ಒಟ್ಟಾರೆ 96 ಎಸೆತಗಳಲ್ಲಿ 5 ಸಿಕ್ಸರ್, 11 ಬೌಂಡರಿಗಳೊಂದಿಗೆ ಅಜೇಯ 123 ರನ್‌ಗಳನ್ನ ಸಿಡಿಸಿದ್ದಾರೆ. ಮುರಿಯದ 2ನೇ ವಿಕೆಟಿಗೆ 273 ರನ್‌ಗಳ ಜೊತೆಯಾಟದೊಂದಿಗೆ ನ್ಯೂಜಿಲೆಂಡ್‌ಗೆ (New Zealand) ಗೆಲುವು ತಂದುಕೊಟ್ಟಿದ್ದಾರೆ. ಇದಕ್ಕೂ ಮುನ್ನ ಹೈದರಾಬಾದ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲೂ ರಚಿನ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದರು. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್; ಇಂಗ್ಲೆಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ
Advertisement
Well played rachin ravindra 97(72)
???????? pic.twitter.com/bO7FrgDHQr
— INDIAN_JADEJA ⁰⁸ ???????? (@indian_jadeja08) September 29, 2023
Advertisement
ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್‌ವೇರ್ ಎಂಜಿನೀಯರ್‌ಗಳಾಗಿದ್ದು, ಉದ್ಯೋಗ ಅರಿಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್ ರವೀಂದ್ರ ಅವರ ತಂದೆ, ಸಾಫ್ಟ್‌ವೇರ್ ಎಂಜಿನೀಯರ್ ಆಗಿದ್ದರೂ ಅಪ್ಪಟ ಕ್ರಿಕೆಟ್ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ ಪಕ್ಕಾ ಫ್ಯಾನ್. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ (Rahul Dravid) ಹೆಸರಿನಿಂದ ʻರʼ ಮತ್ತು ಸಚಿನ್ ತೆಂಡೂಲ್ಕರ್ (Sachin Tendulkar) ಹೆಸರಿನಿಂದ ʻಚಿನ್ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್ ಎಂದು ಹೆಸರಿಟ್ಟಿದ್ದರು.
Advertisement
ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್ ಪರ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದಾರೆ. 2016 ಮತ್ತು 2018ರಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರು ನ್ಯೂಜಿಲೆಂಡ್ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಅಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದರು. ಇದರ ಫಲವಾಗಿ 2021ರಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಬಾರಿ ಆಯ್ಕೆಯಾಗಿದ್ದರು. ನಂತರ ಇದೇ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್
ಈ ಕುರಿತು ಮಾತನಾಡಿರುವ ರಚಿನ್ ರವೀಂದ್ರ, 2019ರ ವಿಶ್ವಕಪ್ ಟೂರ್ನಿ ವೇಳೆ ಅಭಿಮಾನಿಯಾಗಿ ವೀಕ್ಷಿಸುತ್ತಿದ್ದೆ. ಅಂದು ನನ್ನ ತಂದೆ ಭಾರತಕ್ಕೆ ಪ್ರವಾಸ ಕೈಗೊಂಡಿದ್ದರು, ನಾನೂ ಸಹ ಪ್ರವಾಸದಲ್ಲಿ ಬೆಂಗಳೂರಿನಲ್ಲಿದ್ದೆ. ಸಂಪೂರ್ಣ ಫೈನಲ್ ಪಂದ್ಯ ವೀಕ್ಷಿಸಿದೆ. ಆಗ ಇಂಗ್ಲೆಂಡ್ ವಿರುದ್ಧ ವಿರೋಚಿತ ಸೋಲನುಭವಿಸಿದ್ದನ್ನು ಕಂಡಿದ್ದೆ. ಆಗ ನನಗೆ 19 ವರ್ಷ ವಯಸ್ಸಾಗಿತ್ತು. ಆ ವಿರೋಚಿತ ಸೋಲನ್ನು ನಾನು ಇಂದಿಗೂ ಮರೆತಿಲ್ಲ. ಆ ನಂತರ ನಾನು ತಂಡದಲ್ಲಿ ಪಾಲ್ಗೊಳ್ಳಬೇಕು ನಿರ್ಧರಿಸಿದೆ ಎಂದು ಹೇಳಿಕೊಂಡಿದ್ದಾರೆ.
ಅಂದುಕೊಂಡಂತೆ 2023ರ ವಿಶ್ವಕಪ್‌ನಲ್ಲಿ ಪಾಲ್ಗೊಂಡಿರುವ ರಚಿನ್ ಇಂದು ಮೊದಲ ಪಂದ್ಯದಲ್ಲಿ 3ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು ಗೆಲುವು ತಂದುಕೊಟ್ಟಿದ್ದಾರೆ. ಇದನ್ನೂ ಓದಿ: ICC World Cup 2023: ಇಂದಿನಿಂದ ವಿಶ್ವಕಪ್ ಮಹಾಸಮರ – ಇಂದು ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಸೆಣಸಾಟ
Web Stories