ಸಂಗೀತ ನಿರ್ದೇಶಕ ಅರ್ಜುನ್ ಜನ್ಯ (Arjun Janya) ಚೊಚ್ಚಲ ನಿರ್ದೇಶನದ ಸಿನಿಮಾದ ಟೈಟಲ್ (Title) ಬಗ್ಗೆ ಗೊಂದಲ ಮೂಡಿತ್ತು. ಇದೀಗ ಗೊಂದಲಕ್ಕೆ ತೆರೆ ಎಳೆದಿದೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ. ಈ ಕುರಿತು ನಿರ್ಮಾಣ ಸಂಸ್ಥೆಗೆ ಅಧಿಕೃತ ಪತ್ರವೊಂದನ್ನು ನೀಡಿದೆ.
Advertisement
ಸೂರಜ್ ಪ್ರೊಡಕ್ಷನ್ಸ್ ಲಾಂಛನದ ಮೂಲಕ ‘ರೋಸಿ 45’ (Rosy 45) ಶೀರ್ಷಿಕೆಯನ್ನು ನೊಂದಾಯಿಸಲಾಗಿತ್ತು. ಈಗ ಡಿ.ವೈ.ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಚಿತ್ರಕ್ಕೂ ‘ರೋಸಿ’ ಎಂದು ಶೀರ್ಷಿಕೆ ಇಡಲಾಗಿತ್ತು. ಈ ವಿಷಯವನ್ನು ಕರ್ನಾಟಕ ವಾಣಿಜ್ಯ ಮಂಡಳಿ ಗಮನಕ್ಕೆ ತರಲಾಗಿತ್ತು. ಇದನ್ನೂ ಓದಿ:ಸಲ್ಮಾನ್ ಖಾನ್ ನಂಬರ್ ಬ್ಲಾಕ್ ಮಾಡಿದ್ದರಂತೆ ಸಿದ್ಧಾರ್ಥ್ ಶುಕ್ಲಾ ಪ್ರೇಯಸಿ!
Advertisement
Advertisement
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಮೊದಲು ಶೀರ್ಷಿಕೆ ನೊಂದಾಯಿಸಿದವರು ಮಾತ್ರ ಶೀರ್ಷಿಕೆ ಬಳಸಿಕೊಳ್ಳಬಹುದು ಎಂದು ವಾಣಿಜ್ಯ ಮಂಡಳಿ ಹೇಳಿದೆ. ಹಾಗಾಗಿ ಸೂರಜ್ ಪ್ರೊಡಕ್ಷನ್ಸ್ ಗೆ ರೋಸಿ 45(Rosy 45) ಶೀರ್ಷಿಕೆ ಸೇರಿದೆ.
Advertisement
ಇನ್ನು ಮುಂದೆ ಯಾರು ಕೂಡ ‘ರೋಸಿ’ ಶೀರ್ಷಿಕೆ ಬಳಸುವ ಹಾಗಿಲ್ಲ ಹಾಗೂ ಶೀರ್ಷಿಕೆ ಪಕ್ಕದಲ್ಲಿ ಬೇರೆ ಪದ ಹಾಗೂ ನಂಬರ್ ಗಳನ್ನಾಗಲಿ ಸೇರಿಸಿಕೊಂಡು ಸಹ ಬಳಸುವ ಹಾಗಿಲ್ಲ ಎಂದು ರೋಸಿ 45 ಚಿತ್ರದ ನಿರ್ಮಾಪಕ ರಮೇಶ್ ರೆಡ್ಡಿ (Ramesh Reddy) ಹಾಗೂ ನಿರ್ದೇಶಕ ಅರ್ಜುನ್ ಜನ್ಯ ತಿಳಿಸಿದ್ದಾರೆ.