ವಾಷಿಂಗ್ಟನ್: ಅಮೆರಿಕದ ರಾಷ್ಟ್ರೀಯ ಗುಪ್ತಚರ (National Intelligence) ವಿಭಾಗದ ನಿರ್ದೇಶಕಿಯಾಗಿ ತುಳಸಿ ಗಬ್ಬಾರ್ಡ್ (Tulsi Gabbard) ಅವರನ್ನು ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಆಯ್ಕೆ ಮಾಡಿದ್ದಾರೆ.
ತುಳಸಿ ಗಬ್ಬಾರ್ಡ್ ಅಮೆರಿಕದ ಮೊದಲ ಹಿಂದೂ ಸಂಸದೆಯಾಗಿದ್ದು ಈ ಮೊದಲು ಡೆಮಾಕ್ರಟಿಕ್ ಪಕ್ಷದಲ್ಲಿದ್ದರು. 2022 ರಲ್ಲಿ ರಿಪಬ್ಲಿಕನ್ ಪಕ್ಷ ಸೇರಿದ ಇವರು ಡೊನಾಲ್ಡ್ ಟ್ರಂಪ್ ಅವರನ್ನು ಅಧ್ಯಕ್ಷ ಸ್ಪರ್ಧೆಗೆ ಅನುಮೋದಿಸಿದ್ದರು.
Advertisement
Advertisement
ನ್ಯೂಯಾರ್ಕ್‌ನಲ್ಲಿರುವ ವಿಶ್ವ ವಾಣಿಜ್ಯ ಕೇಂದ್ರದ ಮೇಲೆ ಸೆಪ್ಟೆಂಬರ್ 11 , 2001 ರಂದು ದಾಳಿ ನಡೆದ ಬಳಿಕ ಅಮೆರಿಕದ ಗುಪ್ತಚರ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಲು ಮತ್ತು ವೈಫಲ್ಯಗಳನ್ನು ತಡೆಯಲು ಸಹಾಯ ಮಾಡಲು ರಾಷ್ಟ್ರೀಯ ಗುಪ್ತಚರ ವಿಭಾಗವನ್ನು 2004 ರಲ್ಲಿ ರಚಿಸಲಾಯಿತು. ವಿದೇಶಿ ಚುನಾವಣಾ ಹಸ್ತಕ್ಷೇಪ, ಸೈಬರ್ ಸಮಸ್ಯೆಗಳು, ಭಯೋತ್ಪಾದನೆ ಮತ್ತು ಬೇಹುಗಾರಿಕೆಯಂತಹ ಬೆದರಿಕೆಗಳ ಮೇಲೆ ಕೇಂದ್ರೀಕರಿಸಿ ಕೆಲಸ ಮಾಡುತ್ತದೆ. ಇದನ್ನೂ ಓದಿ: ಅಮೆರಿಕದಲ್ಲಿ ತೆರಿಗೆ ಹಣ ವೆಚ್ಚಕ್ಕೆ ನಿಯಂತ್ರಣ: ಮಸ್ಕ್‌ಗೆ ಸಿಕ್ತು ಮಹತ್ವದ ಹುದ್ದೆ
Advertisement
Advertisement
ಯಾರು ತುಳಸಿ ಗಬ್ಬಾರ್ಡ್?
ಸುಮಾರು 20 ವರ್ಷದಗಳ ಸೈನ್ಯದ ಶಾಖೆಯಾದ ನ್ಯಾಷನಲ್ ಗಾರ್ಡ್‌ನಲ್ಲಿ ಸೇವೆ ಸಲ್ಲಿಸಿರುವ ಇವರಿಗೆ ಭಾರತದ ಜೊತೆ ನೇರವಾದ ಸಂಬಂಧ ಇಲ್ಲ. ಆದರೆ ಇವರ ತಾಯಿ ಹಿಂದೂ (Hindu) ಧರ್ಮವನ್ನು ಪಾಲಿಸುತ್ತಿದ್ದ ಹಿನ್ನೆಲೆಯಲ್ಲಿ ಪುತ್ರಿಗೆ ತುಳಸಿ ಎಂದು ಹೆಸರನ್ನು ಇರಿಸಿದ್ದರು.
ಬಾಲ್ಯದಲ್ಲಿ ಯೋಗ ಅಭ್ಯಾಸ ಮಾಡುತ್ತಿದ್ದ ಇವರು ಭಗವದ್ಗೀತೆಯಿಂದ ಆಧ್ಯಾತ್ಮಿಕ ವಿಷಯಗಳನ್ನು ಕಲಿತ್ತಿದ್ದಾರೆ. ವೈಷ್ಣವ ಹಿಂದೂ ಸಂಘಟನೆಯಾದ ಸೈನ್ಸ್ ಆಫ್ ಐಡೆಂಟಿಟಿ ಫೌಂಡೇಶನ್ ಮತ್ತು ಇಸ್ಕಾನ್ ಸಂಸ್ಥೆಯ ಪ್ರಭಾವದಿಂದಾಗಿ ತುಳಸಿ ಅವರು ಹಿಂದೂ ಜೀವನ ಪದ್ದತಿಯಂತೆ ಜೀವಿಸುತ್ತಿದ್ದಾರೆ.
2015ರಲ್ಲಿ ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಿರುವ ಅಬ್ರಹಾಂ ವಿಲಿಯಮ್ಸ್ ಅವರನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾದರು. ಪತಿಯೂ ಹಿಂದೂ ಧರ್ಮವನ್ನು ಪಾಲಿಸುತ್ತಿದ್ದಾರೆ. ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಭಗವತ್ ಗೀತೆಯ ಮೇಲೆ ಕೈಯಿಟ್ಟು ತುಳಸಿ ಪ್ರಮಾಣ ವಚನ ಸ್ವೀಕರಿಸಿದ್ದರು.
2014ರ ಅಮೆರಿಕ ಪ್ರವಾಸದ ಸಂದರ್ಭದಲ್ಲಿ ತುಳಸಿ ಗಬ್ಬಾರ್ಡ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಭಗವದ್ಗೀತೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದರು. ಅಷ್ಟೇ ಅಲ್ಲದೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಧಾನಿಯವರ ಪ್ರಸ್ತಾವನೆಗೆ ಅವರು ಬೆಂಬಲ ವ್ಯಕ್ತಪಡಿಸಿದ್ದರು.