ಬೆಂಗಳೂರು/ನೆಲಮಂಗಲ: ನೆಲಮಂಗಲದ ಸ್ನೇಕ್ ಲೋಕೇಶ್ ಎಂದು ರಾಜ್ಯಾದ್ಯಂತ ಹೆಸರು ಮಾಡಿದ್ದ ಉರಗ ರಕ್ಷಕ, ಸ್ನೇಕ್ ಲೋಕೇಶ್ ಹಾವು ಕಡಿತದಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಸ್ನೇಕ್ ಲೋಕೇಶ್ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ಇದನ್ನೂ ಓದಿ: ಪಬ್ಲಿಕ್ ಪ್ಲೇಸ್‍ನಲ್ಲಿ ಸ್ನಾನ ಮಾಡುವಂತೆ ಪತ್ನಿಗೆ ಕಿರುಕುಳ – ಪತಿ ವಿರುದ್ಧ ಕೇಸ್
Advertisement
Advertisement
ಕೂಡಲೇ ಲೋಕೇಶ್ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಮಣಿಪಾಲ್‍ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ವಿಧಿಯಾಟ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೂ ಸ್ನೇಕ್ ಲೋಕೇಶ್ ಅವರು, 35 ಸಾವಿರಕ್ಕೂ ಹೆಚ್ಚು ವಿವಿಧ ಜಾತಿಯ ಉರಗಗಳು, ಪ್ರಾಣಿ, ಪಕ್ಷಿಗಳನ್ನು ರಕ್ಷಣೆ ಮಾಡಿದ್ದಾರೆ.
Advertisement
Advertisement
ಸಂಗೀತದಲ್ಲಿ ಸಾಕಷ್ಟು ಆಸಕ್ತಿ ಹೊಂದಿದ್ದ ಅವರು, ಕೆಲವು ಧಾರವಾಹಿ, ಕೆಲ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ನೆಲಮಂಗಲದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಆದರೆ ದುರದೃಷ್ಟವಶಾತ್ ಹಾವು ಕಡಿತದಿಂದ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನಪ್ಪಿದ್ದಾರೆ. ಇದನ್ನೂ ಓದಿ: ಮಡಿಕೇರಿಯಲ್ಲಿ ನಡೆದ ಮೊಟ್ಟೆ ಎಸೆತ ಪ್ರಕರಣ ನನಗೆ ಗೊತ್ತಿಲ್ಲ: ಅಪ್ಪಚ್ಚು ರಂಜನ್