ಬೆಂಗಳೂರು: ರಾಮ ಮಂದಿರದ (Ram Mandir) ಬೀಗ ತೆಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು ರಾಜೀವ್ ಗಾಂಧಿಯಾದರೆ ರಾಮ ಮಂದಿರದ ವಿರುದ್ಧವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲು ಕಪಿಲ್ ಸಿಬಲ್‌ರನ್ನು (Kapil Sibal) ಕಳುಹಿಸಿದ್ದು ಯಾರು ಎಂದು ಪ್ರಶ್ನಿಸುವ ಮೂಲಕ ಬಿಜೆಪಿ (BJP) ಕಾಂಗ್ರೆಸ್‌ಗೆ ತಿರುಗೇಟು ನೀಡಿದೆ.
ನಾವು ರಾಮ ಭಕ್ತರೇ, ರಾಮ ಮಂದಿರದ ಬಾಗಿಲು ತೆಗೆಸಿದ್ದೇ ನಾವು ಎಂದು ಕಾಂಗ್ರೆಸ್ (Congress) ಹೇಳಿದ್ದಕ್ಕೆ ಬಿಜೆಪಿ ಈಗ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದೆ. ಇದನ್ನೂ ಓದಿ: ಅಯೋಧ್ಯೆ ರಾಮ ಮಂತ್ರಾಕ್ಷತೆ ಅಂದ್ರೆ ಏನು?, ಯಾಕಿಷ್ಟು ಮಹತ್ವ?, ಹೇಗೆಲ್ಲಾ ಬಳಸಬಹುದು?
Advertisement
ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅದರಿಂದ ಬರುವ ಆದಾಯವನ್ನು ದೋಚಿದ್ದು ನೀವು!
ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್, ಆದರೆ ಇಂದು ರಾಮ ಮಂದಿರ ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು ಮೋದಿ ಸರ್ಕಾರ!
— BJP Karnataka (@BJP4Karnataka) January 9, 2024
Advertisement
ಪೋಸ್ಟ್‌ನಲ್ಲಿ ಏನಿದೆ?
ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅದರಿಂದ ಬರುವ ಆದಾಯವನ್ನು ದೋಚಿದ್ದು ನೀವು!
Advertisement
ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್, ಆದರೆ ಇಂದು ರಾಮ ಮಂದಿರ ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು ಮೋದಿ ಸರ್ಕಾರ!
Advertisement
ಸ್ವಾತಂತ್ರ್ಯ ದೊರಕಿದಾಗಿನಿಂದ ರಾಮ ಮಂದಿರದ ಕಲ್ಪನೆ ದೇಶದ ಜನರಲ್ಲಿತ್ತು, ಅಂದಿನಿಂದ ಇಂದಿನವರೆಗೂ ನಿರ್ಮಾಣವಾಗದ ರಾಮ ಮಂದಿರ ನಿಮ್ಮ ರಾಜೀವ್ ಗಾಂಧಿ ಕಾಲಘಟ್ಟದಲ್ಲಿ ಯಾಕೆ ಆಗಲಿಲ್ಲ? ತಡೆದವರು ಯಾರು? ರಾಮ ಮತ್ತು ರಾಮನ ಆದೇಶವನ್ನು ಪಾಲಿಸುತ್ತಾ ಬಂದಿದ್ದರೆ ಕಾಂಗ್ರೆಸ್ ಪಕ್ಷ ರಾಮನನ್ನು ಕೇವಲ ಕಾಲ್ಪನಿಕ ಎಂದು ಏಕೆ ವ್ಯಂಗ್ಯ ಮಾಡುತ್ತಿತ್ತು ?
ಕಳೆದ 70 ವರ್ಷಗಳಿಂದಲೂ ಹಿಂದುಗಳ ಆದರ್ಶ ಪುರುಷನಾದ ಶ್ರೀ ರಾಮನ ಮಂದಿರ ನಿರ್ಮಾಣ ಮಾಡಲು ಮೀನಾಮೇಷ ಎಣಿಸಿದ್ದು ಕಾಂಗ್ರೆಸ್ಸಿನಿಂದ ಜನರ ನಂಬಿಕೆಗೆ ಆದ ದುರಂತ!. ರಾಮಾಯಣ ಹೇಗೆ ಜನರ ಮನದಲ್ಲಿದೆಯೋ ಹಾಗೆಯೇ ಕಾಂಗ್ರೆಸ್ಸಿಗರ ಸುಳ್ಳಿನ ಸರಪಳಿ ದೇಶದ ಜನತೆಯ ಮನಸ್ಸಿನಲ್ಲಿ ಆಳವಾಗಿದೆ. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?