ಜಿನೇವಾ: ಕೊರೊನಾ ಮಹಾಮಾರಿ ವಿರುದ್ಧ ಹೈದರಾಬಾದ್ ಭಾರತ್ ಬಯೋಟೆಕ್ ತಯಾರಿಸಿದ ಕೋವಿಡ್-19 ಲಸಿಕೆ ಕೋವಾಕ್ಸಿನ್ ಪೂರೈಕೆಯನ್ನು ಸ್ಥಗಿತಗೊಳಿಸಲು ವಿಶ್ವ ಆರೋಗ್ಯ ಸಂಸ್ಥೆ (WHO) ನಿರ್ಧರಿಸಿದೆ.
ಲಸಿಕೆ ತಯಾರಾಗುತ್ತಿರುವ ಸ್ಥಳಗಳಲ್ಲಿ ಸೌಲಭ್ಯಗಳನ್ನು ಮೇಲ್ದರ್ಜೆಗೆ ಏರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ವಿಶ್ವಸಂಸ್ಥೆಯ ಮೂಲಕ ನೀಡಲಾಗುತ್ತಿರುವ ಕೋವ್ಯಾಕ್ಸಿನ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಡಬ್ಲ್ಯೂಎಚ್‍ಒ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಭಾರತದಲ್ಲಿ ಕೊವಿಶೀಲ್ಡ್, ಕೋವ್ಯಾಕ್ಸಿನ್ ತುರ್ತು ಬಳಕೆಗೆ ಗ್ರೀನ್ ಸಿಗ್ನಲ್
ಕೊರೊನಾ ವಿರುದ್ಧ ಈಗಾಗಲೇ ನೀಡಲಾಗಿರುವ ಕೋವ್ಯಾಕ್ಸಿನ್ ಲಸಿಕೆ ಪರಿಣಾಮಕಾರಿಯಾಗಿದೆ. ಯಾವುದೇ ಸುರಕ್ಷತೆಯ ಬಗ್ಗೆ ಭಯ ಬೇಡ. ಲಸಿಕೆ ತೆಗೆದುಕೊಳ್ಳುವ ದೇಶಗಳು ಈ ನಿಟ್ಟಿನಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೇಳಿಕೊಳ್ಳಲಾಗಿದೆ. ಆದರೆ, ಸೂಕ್ತ ಕ್ರಮ ಏನು ಎಂಬುದನ್ನು ನಿರ್ಧರಿಸಿಲ್ಲ. ಪ್ರಸ್ತುತ ರಫ್ತಿಗೆ ಉತ್ಪಾದನೆಯನ್ನು ಸ್ಥಗಿತಗೊಳಿಸುವುದರಿಂದ ಕೋವ್ಯಾಕ್ಸಿನ್ ಪೂರೈಕೆಗೆ ಅಡ್ಡಿಯಾಗುತ್ತದೆ. ಮಾರ್ಚ್ 14 ರಿಂದ 22 ರವರೆಗೆ ಪೋಸ್ಟ್ ಎಮರ್ಜೆನ್ಸಿ ಯೂಸ್ ಲಿಸ್ಟಿಂಗ್ (EUL) ತಪಾಸಣೆಯ ನಂತರ ಅಮಾನತು ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಭಾರತ್ ಬಯೋಟೆಕ್, ಕೋವ್ಯಾಕ್ಸಿನ್ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಭಯ ಬೇಡ. ಈವರೆಗೆ ಲಕ್ಷಾಂತರ ಮಂದಿ ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದಾರೆ. ಕೋವ್ಯಾಕ್ಸಿನ್ ಲಸಿಕೆ ಪಡೆದವರ ಪ್ರಮಾಣ ಪತ್ರ ಮಾನ್ಯತೆ ಹೊಂದಿದೆ ಎಂದು ಮಾಹಿತಿಹಂಚಿಕೊಂಡಿದೆ. ಇದನ್ನೂ ಓದಿ: ಮತ್ತೆ ಶಾಕ್ ಕೊಟ್ಟ ಕೋವಿಡ್- ಇಂಗ್ಲೆಂಡ್‌ನಲ್ಲಿ ʻXEʼ ಹೊಸ ರೂಪಾಂತರಿ ಪತ್ತೆ
#COVAXIN #bharatbiotech pic.twitter.com/EsmQOnsfX4
— Bharat Biotech (@BharatBiotech) April 1, 2022
ಆತ್ಮನಿರ್ಭರ್ ಭಾರತ ಅಭಿಯಾನಕ್ಕೆ ಪುಷ್ಟಿ ಎಂಬಂತೆ ಐಸಿಎಂಆರ್ ಸಹಯೋಗದಲ್ಲಿ ಹೈದ್ರಾಬಾದ್‍ನ ಶಮೀರ್‍ಪೇಟ್‍ನ ಜಿನೋಂ ವ್ಯಾಲಿಯಲ್ಲಿ ಸ್ವದೇಶಿ ಲಸಿಕೆ ಸಿದ್ಧವಾಗುತ್ತಿದೆ. ಕೊವ್ಯಾಕ್ಸಿನ್ ಲಸಿಕೆ ನವೆಂಬರ್ ಮಧ್ಯಭಾಗದಿಂದ 3ನೇ ಹಂತದ ಪ್ರಯೋಗಕ್ಕೆ ಒಳಪಡಿಸಲಾಗಿದೆ. ಸುರಕ್ಷತೆ, ಪರಿಣಾಮಕಾರಿ ಬಗ್ಗೆ ಸದ್ಯಕ್ಕೆ ಅಸ್ಪಷ್ಟವಾಗಿದ್ದು, ಅಗತ್ಯ 26 ಸಾವಿರ ಅಭ್ಯರ್ಥಿಗಳ ಪೈಕಿ 23 ಸಾವಿರ ಜನರ ಮೇಲೆ ಪ್ರಯೋಗ ನಡೆಸಿದ ಬಳಿಕ ಕೋವ್ಯಾಕ್ಸಿನ್ ಬಳಕೆಗೆ ಭಾರತೀಯ ಔಷಧ ನಿಯಂತ್ರಣ ನಿರ್ದೇಶನಾಲಯ (ಡಿಸಿಜಿಐ) ಷರತ್ತು ಬದ್ಧ ಅನುಮತಿ ನೀಡಿತ್ತು. 2021ರ ಮಾರ್ಚ್‍ನಲ್ಲಿ ಲಸಿಕೆ ಬಳಕೆಗೆ ಗೀನ್ ಸಿಗ್ನಲ್ ಸಿಕ್ಕ ಬಳಿಕ ಭಾರತ ಸೇರಿದಂತೆ ಹಲವು ದೇಶಗಳು ಕೋವ್ಯಾಕ್ಸಿನ್‍ಗೆ ಅನುಮೋದನೆ ನೀಡಿದ್ದವು.