ಪಂಜಾಬ್ ಸಿಎಂ ಅಭ್ಯರ್ಥಿಯನ್ನು ಜನರೇ ಆಯ್ಕೆ ಮಾಡಲಿ – ನಂಬರ್ ಕೊಟ್ಟ ಕೇಜ್ರಿವಾಲ್

Public TV
1 Min Read
Punjab Chandigarh Arvind Kejriwal 1

ಚಂಡೀಗಢ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ(ಎಎಪಿ) ಸಿಎಂ ಅಭ್ಯರ್ಥಿಯನ್ನು ಪಂಜಾಬ್‍ನ ಜನರು ನಿರ್ಧರಿಸುತ್ತಾರೆ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

ಪಂಜಾಬ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಅವರು, ಎಎಪಿ ಮುಂದಿನ ಸಿಎಂ ಅಭ್ಯರ್ಥಿಯನ್ನು ಜನರೇ ಆಯ್ಕೆ ಮಾಡುತ್ತಾರೆ. ಈ ಬಗ್ಗೆ ಜನರು ಮುಕ್ತವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು. ಜನರಿಗಾಗಿಯೇ ಮೊಬೈಲ್ ನಂಬರ್ ಅನ್ನು ಬಿಡುಗಡೆ ಮಾಡಲಾಗುತ್ತೆ. ಆ ಮೂಲಕ ಜನರು ತಮ್ಮ ಅಭಿಪ್ರಾಯವನ್ನು ನೇರವಾಗಿ ತಿಳಿಸಬಹುದು ಎಂದು ನಂಬರ್ ಬಿಡುಗಡೆ ಮಾಡಿದರು. ಇದನ್ನೂ ಓದಿ: ಖಾಸಗಿ ಲ್ಯಾಬ್‍ಗಳಲ್ಲೂ ಉಚಿತ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಎಎಪಿ ಆಗ್ರಹ

Punjab Chandigarh Arvind Kejriwal

ಈ ವೇಳೆ ಕೇಜ್ರಿವಾಲ್ ಅವರು 70748 70748 ನಂಬರ್ ಅನ್ನು ಬಿಡುಗಡೆ ಮಾಡಿದ್ದು, ಈ ನಂಬರ್ ಗೆ ಜನರು ಕರೆ ಮಾಡಿ ಜನವರಿ 17 ಸಂಜೆ 5 ಗಂಟೆಯವರೆಗೆ ತಮ್ಮ ಅಭಿಪ್ರಾಯವನ್ನು ತಿಳಿಸಬಹುದು. ಜನರು ಮುಕ್ತವಾಗಿ ಕರೆ ಮಾಡಿ ತಮ್ಮ ಸಲಹೆಗಳನ್ನು ನೀಡಬಹುದು ಎಂದು ತಿಳಿಸಿದರು.

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪಕ್ಷವೊಂದು ರಾಜ್ಯದ ಜನರನ್ನು ಸಿಎಂ ಆಯ್ಕೆಗಾಗಿ ಕೇಳುತ್ತಿದೆ ಎಂದು ಪ್ರಶಂಸಿಕೊಂಡರು. ನಾನು ಭಗವಂತ್ ಮಾನ್ ಅವರನ್ನು ಕೇಳಿದೆ, ನಿಮ್ಮ ಹೆಸರನ್ನು ಘೋಷಿಸಬೇಕೇ? ಎಂದು ಆದರೆ ಅವರು ನಿರಾಕರಿಸಿದರು. ಈ ಬಗ್ಗೆ ಸಾರ್ವಜನಿಕರನ್ನು ಕೇಳಲು ಸೂಚಿಸಿದರು ಎಂದು ತಿಳಿಸಿದರು.

Punjab Chandigarh Arvind Kejriwal 2

ಚುನಾವಣೆಯಲ್ಲಿ ಎಎಪಿಯ ಅವಕಾಶಗಳ ಬಗ್ಗೆ ಮಾತನಾಡುತ್ತಾ, 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ 57-60 ಸ್ಥಾನಗಳನ್ನು ನಾವು ಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಎಪಿಯ ಪಂಜಾಬ್ ಘಟಕದ ಮುಖ್ಯಸ್ಥ ಭಗವಂತ್ ಮಾನ್ ಮತ್ತು ಪಕ್ಷದ ರಾಘವ್ ಚಡ್ಡಾ ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರಕ್ಕೆ ನಿಷೇಧ

ಪಂಜಾಬ್ ನಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತಗಳ ಎಣಿಕೆ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *