ಯಾರೇ ಕೈಮುಗಿದರೂ ಮೋದಿ ವಾಪಸ್ ಕೈಮುಗಿಯುತ್ತಾರೆ- ಕೋಟ ಶ್ರೀನಿವಾಸ ಪೂಜಾರಿ

Public TV
2 Min Read
KOTA SRINIVAS POOJARI

ಉಡುಪಿ: ಫೈಟರ್ ರವಿ (Fighter Ravi) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಪರಸ್ಪರ ನಮಸ್ಕಾರ ಮಾಡಿಕೊಂಡ ಫೋಟೊ ಬಹಳಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ಮನಮೋಹನ್ ಸಿಂಗ್ (Manmohan Singh) ಫೋಟೋವನ್ನು ಹೋಲಿಕೆ ಮಾಡಿ ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಬೆಳವಣಿಗೆಗೆ ಸಂಬಂಧಪಟ್ಟಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಪ್ರತಿಕ್ರಿಯೆ ನೀಡಿದ್ದಾರೆ.

ಮೋದಿಗೆ ಕೈ ಮುಗಿಯಬಾರದು ಎಂದು ನಾವು ಹೇಳಲು ಆಗುವುದಿಲ್ಲ. ರಾಜಕೀಯ ಪಕ್ಷದ ಕಾರ್ಯಕರ್ತನಾಗಿ ಪ್ರಧಾನ ಮಂತ್ರಿಗೆ ಕೈಮುಗಿಯುತ್ತಾರೆ. ಯಾರೇ ಕೈಮುಗಿದರೂ ವಾಪಾಸ್ ಕೈಮುಗಿಯುವುದು ಪ್ರಧಾನ ಮಂತ್ರಿಗಳು ಇಟ್ಟುಕೊಂಡ ಸಂಪ್ರದಾಯ. ಆತ ಯಾವ ವ್ಯಕ್ತಿ? ಆತನ ಹೆಸರೇನು? ಯಾವ ಸೀಟು ಎನ್ನುವುದು ಪ್ರಧಾನಿಗೆ ಗೊತ್ತಿರುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಅಪ್ಪು ಹೆಸರಿನಲ್ಲಿ ಜೆಡಿಎಸ್, ಕಾಂಗ್ರೆಸ್ ರಾಜಕೀಯ – PSI ಮೇಲೆ ಹಲ್ಲೆ 

kota srinivas poojari copy

ಭಾರತೀಯನೊಬ್ಬ ಪ್ರಧಾನಿಗೆ ಕೈಮುಗಿದಿದ್ದಾನೆ. ಆತ ರೌಡಿಶೀಟರ್ ಆಗಿದ್ದರೆ ಯಾವ ರಕ್ಷಣೆಯೂ ಇಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಏನಾದರು ಅಪರಾಧ ಮಾಡಿದರೆ ಸಂವಿಧಾನದ ಪ್ರಕಾರ ಕ್ರಮ ಆಗುತ್ತದೆ. ಬಿಜೆಪಿ (BJP) ಪಕ್ಷದ ವಿಜಯ ಸಂಕಲ್ಪ ರಥಯಾತ್ರೆಗೆ (Vijaya Sankalpa Yatra) ಅಭೂತಪೂರ್ವ ಸ್ಪಂದನೆಯನ್ನು ಜನತೆ ನೀಡಿದ್ದಾರೆ. ಯುವಕರ ರಣೋತ್ಸವ, ಕಾಯಕರ್ತರ ಉತ್ಸಾಹದಿಂದಾಗಿ ಸಾವಿರಾರು ಜನರು ರಥಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಇದರ ಆಧಾರದಲ್ಲಿ ಬಿಜೆಪಿ ಪಕ್ಷವು ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುಬ್ಬಿ ಶ್ರೀನಿವಾಸ್‌ಗೆ ಆಹ್ವಾನ – ಇಬ್ರಾಹಿಂ ವಿರುದ್ಧ ಹೆಚ್‌ಡಿಕೆ ಗರಂ

ಹಳೇ ಮೈಸೂರು (Mysuru) ಭಾಗದಲ್ಲಿ ಅಭ್ಯರ್ಥಿಯ ಆಯ್ಕೆಗೂ ತಡಕಾಡುತ್ತಿದ್ದ ಕಾಲವಿತ್ತು. ಆದರೆ ಈಗ ನೂರಕ್ಕೆ ನೂರು ಶಕ್ತಿ ವೃದ್ಧಿಸಿದೆ. ಪ್ರಧಾನಿ ಮೋದಿಯವರ ಮಂಡ್ಯ (Mandya) ಭೇಟಿ ವೇಳೆ ಜನರು ತೋರಿದ ಪ್ರೀತಿಯೇ ಇದಕ್ಕೆ ಸಾಕ್ಷಿ ಎಂದರು. ಲೋಕಾಯುಕ್ತಕ್ಕೆ ಹಲ್ಲು ಕೊಟ್ಟದ್ದು ಬಿಜೆಪಿ ಸರ್ಕಾರ. ಶಾಸಕ ವಿರೂಪಾಕ್ಷಪ್ಪ ಮಾಡಾಳ್ (Madal Virupakshappa) ವಿರುದ್ಧ ದಾಖಲಾಗಿರುವ ಲೋಕಾಯುಕ್ತ ಪ್ರಕರಣವು ಚುನಾವಣಾ ಸನಿಹದಲ್ಲಿರುವುದರಿಂದ ಸ್ವಾಭಾವಿಕವಾಗಿ ಚರ್ಚೆಯಾಗುತ್ತದೆ. ಆದರೆ ಲೋಕಾಯುಕ್ತವನ್ನು ಸಂಪೂರ್ಣ ನಿಷ್ಕ್ರಿಯ ಮಾಡಿ, ಎಸಿಬಿ ರಚಿಸಿದ್ದು ಯಾರು ಎಂಬುದು ರಾಜ್ಯದ ಜನರಿಗೆ ತಿಳಿದಿದೆ. ಲೋಕಾಯುಕ್ತಕ್ಕೆ ಮರುಜೀವ ನೀಡಿ, ಶಕ್ತಿ ಕೊಟ್ಟು, ಹಲ್ಲು ಕೊಟ್ಟಿರುವುದು ಬೊಮ್ಮಾಯಿ (Basavaraj Bommai) ನೇತೃತ್ವದ ಬಿಜೆಪಿ ಸರ್ಕಾರ ಎಂದರು. ಇದನ್ನೂ ಓದಿ: ಬಡವರಿಗೆ ಮನೆ, ಅನಾಥಾಶ್ರಮಗಳಿಗೆ ಮಧ್ಯಾಹ್ನದ ಭೋಜನ – ಇದು ದಿನಗೂಲಿ ನೌಕರರಿಂದಲೇ ರಚನೆಯಾದ ಟ್ರಸ್ಟ್‌ 

kota srinivas poojari copy.png 2

ಪಾರದರ್ಶಕ ಆಡಳಿತ ಮತ್ತು ಭ್ರಷ್ಟಾಚಾರ ನಿಯಂತ್ರಣಕ್ಕೆ ತರುವ ಸಲುವಾಗಿ ಲೋಕಾಯುಕ್ತವನ್ನು ಜಾರಿಗೆ ತಂದಿದೆ. ನಮ್ಮ ಸರ್ಕಾರ ಬಿಟ್ಟು ಬೇರೆ ಯಾವ ಸರ್ಕಾರ ಇದ್ದರೂ, ಆಡಳಿತ ಪಕ್ಷದ ಶಾಸಕನ ಮೇಲೆ ಪ್ರಕರಣ ದಾಖಲಾಗಲು ಸಾಧ್ಯವಿತ್ತೆ? ಆರೋಪವಿದೆ, ಅದಕ್ಕೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಸುದ್ದಿಗೋಷ್ಠಿಯಲ್ಲಿ ಸೋಮಣ್ಣ ಕಣ್ಣೀರು – ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ

Share This Article
Leave a Comment

Leave a Reply

Your email address will not be published. Required fields are marked *