– ರಾಮನೇ ಇಲ್ಲ ಎಂದಿದ್ದ ಕಾಂಗ್ರೆಸ್ ರಾಮ ಭಕ್ತರಿಗೆ ಅವಮಾನ ಅಂತ ನಾಟಕವಾಡ್ತಿದೆ
ಲಕ್ನೋ: ಅಯೋಧ್ಯೆಯ ರಾಮ ಮಂದಿರದ (Ayodhya Ram Mandir) ದೇಣಿಗೆ ಕಳ್ಳತನ ಪ್ರಕರಣದಲ್ಲಿ ಅಪರಾಧಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ಅವರನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಎಚ್ಚರಿಕೆ ನೀಡಿದ್ದಾರೆ.
VIDEO | Addressing a public gathering in Rudauli, Ayodhya, Chief Minister Yogi Adityanath (@myogiadityanath) said, “Look at their double standards. The same Congress party that tried every possible way to prevent the construction of Lord Ram’s temple in Ayodhya is now pretending… pic.twitter.com/MPqAcpW38M
— Press Trust of India (@PTI_News) June 19, 2026
ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿರುವ ಕೋಟ್ಯಂತರ ರೂ. ದೇಣಿಗೆ ಹಣ ಕಳ್ಳತನದ ಬಗ್ಗೆ ಮಾತನಾಡಿ, ಪ್ರಭು ಶ್ರೀರಾಮನ ಆದರ್ಶಗಳಾದ ಘನತೆ ಮತ್ತು ತಾಳ್ಮೆಯನ್ನು ಎಲ್ಲರೂ ಪಾಲಿಸಬೇಕು. ಜೊತೆಗೆ ಅಯೋಧ್ಯೆ ಅಥವಾ ರಾಮ ಜನ್ಮಭೂಮಿ ಮಂದಿರದ ಹೆಸರಿಗೆ ಮಸಿ ಬಳಿಯಲು ಯತ್ನಿಸುತ್ತಿರುವವರ ಮಾತುಗಳಿಗೆ ಯಾರೂ ಮರುಳಾಗಬಾರದು. ಈ ದೇಣಿಗೆ ಅಕ್ರಮಕ್ಕೆ ಸಂಬಂಧಿಸಿದಂತೆ ಯಾರ ಬಳಿಯಾದರೂ ಲಿಖಿತ ದಾಖಲೆಗಳು ಅಥವಾ ಸಾಕ್ಷ್ಯಗಳಿದ್ದರೆ ತಕ್ಷಣವೇ ವಿಶೇಷ ತನಿಖಾ ತಂಡಕ್ಕೆ ಕೊಡಿ. ಮಂದಿರದ ಟ್ರಸ್ಟ್ ನೀಡಿದ ವಿನಂತಿಯ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಎಸ್‌ಐಟಿ ಎಲ್ಲಾ ಸತ್ಯಾಂಶಗಳನ್ನ ಶೀಘ್ರದಲ್ಲೇ ಬಯಲಿಗೆಳೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆಗೆ ವಿರೋಧ – ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಸಮಾಜವಾದಿ – ಕಾಂಗ್ರೆಸ್ ವಿರುದ್ಧ ಆಕ್ರೋಶ:
ಅಯೋಧ್ಯೆ ವಿಷಯದಲ್ಲಿ ಕಾಂಗ್ರೆಸ್ ಪಕ್ಷವು ದ್ವಿಮುಖ ನೀತಿ ಪ್ರದರ್ಶಿಸುತ್ತಿದೆ. ಯಾವ ಕಾಂಗ್ರೆಸ್ ಪಕ್ಷ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರ ನಿರ್ಮಾಣವಾಗದಂತೆ ತಡೆಯಲು ಪ್ರಯತ್ನಿಸಿತ್ತೋ, ಅದೇ ಕಾಂಗ್ರೆಸ್ ಇಂದು ಅಯೋಧ್ಯೆಯ ಬಗ್ಗೆ ತೀವ್ರ ಕಳಕಳಿ ಇರುವಂತೆ ನಟಿಸುತ್ತಿದೆ. ಕಾಂಗ್ರೆಸ್ ಪಕ್ಷ ರಾಮ ಮಂದಿರ ನಿರ್ಮಾಣವನ್ನು ನ್ಯಾಯಾಲಯದಲ್ಲೂ ವಿರೋಧಿಸಿತ್ತು. ಅಷ್ಟೇ ಅಲ್ಲದೇ, ಸುಪ್ರೀಂ ಕೋರ್ಟ್‌ನಲ್ಲಿ ಶ್ರೀರಾಮನೇ ಇರಲಿಲ್ಲ ಎಂದು ಪ್ರಮಾಣಪತ್ರ ಸಲ್ಲಿಸಿತ್ತು. ಆದರೆ ಇಂದು ಅದೇ ಕಾಂಗ್ರೆಸ್ ರಾಮನ ಭಕ್ತರಿಗೆ ಅವಮಾನವಾಗಿದೆ ಎಂದು ನಾಟಕವಾಡುತ್ತಿದೆ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನೀಟ್‌ಗಾಗಿ ಟೆಲಿಗ್ರಾಂ ನಿಷೇಧ – ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್
ಇನ್ನೊಂದು ಕಡೆ ಸಮಾಜವಾದಿ ಪಕ್ಷ ರಾಮನ ಭಕ್ತರಿಗೆ ಅವಮಾನವಾಗಿದೆ ಎಂದು ಕಣ್ಣೀರು ಸುರಿಸುತ್ತಿದೆ. ಈ ಹಿಂದೆ ಇದೇ ಸಮಾಜವಾದಿ ಪಕ್ಷದವರು ಕರಸೇವಕರ ಮೇಲೆ ಗುಂಡು ಹಾರಿಸಲು ಆದೇಶ ನೀಡಿದ್ದರು. ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದವರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು. ಇಂತಹವರು ಇಂದು ನಮಗೆ ಬಂದು ಪಾಠ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಏನಿದು ರಾಮ ಮಂದಿರ ದೇಣಿಗೆ ವಿವಾದ?
ರಾಮ ಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂ. ದೇಣಿಗೆ ಹಣ ದುರುಪಯೋಗವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಈ ವಿಚಾರದಲ್ಲಿ ನ್ಯಾಯಾಲಯವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪ್ರಕರಣವನ್ನು ಕೈಗೆತ್ತಿಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಆಪರೇಷನ್ ಟೈಗರ್ 2.0 – 16 ಶಾಸಕರನ್ನ ಸೆಳೆಯಲು ಶಿಂಧೆ ಗ್ಯಾಂಗ್ ಪ್ರಯತ್ನ
ಈ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿರುವ ಮಂದಿರದ ಟ್ರಸ್ಟ್, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿತ್ತು. ಇದರ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರವು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದೆ. ಪ್ರಸ್ತುತ ಎಸ್‌ಐಟಿ ತನಿಖೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ತನಿಖಾ ತಂಡವು ಈಗಾಗಲೇ ಹಲವು ಜನರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದೆ.
