ಕೊಪ್ಪಳ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರದಿಂದಲೇ ಸ್ಪರ್ಧಿಸಬೇಕೆಂದಿಲ್ಲ. ಇಡೀ ರಾಜ್ಯವೇ ನನ್ನ ಕ್ಷೇತ್ರ. ಜನರು ಬಯಸಿದ್ದಲ್ಲಿ ಹಾಗೂ ಪಕ್ಷ ಟಿಕೆಟ್ ನೀಡಿದ್ದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕೊಪ್ಪಳ ನಗರದ ಗವಿಮಠಕ್ಕೆ ಇಂದು ಭೇಟಿ ನೀಡಿ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಇದನ್ನೂ ಓದಿ: ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ RSS ಕಚೇರಿ ಮೇಲೆಯೇ ಭಾರತದ ಬಾವುಟ ಹಾರಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Advertisement
Advertisement
ಶಿಕಾರಿಪುರದೊಂದಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಅವಿನಾಭಾವ ಸಂಬಂಧ ಹೊಂದಿದ್ದಾರೆ. ಪಕ್ಷ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ. ಯಡಿಯೂರಪ್ಪ 40 ವರ್ಷ ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷವೂ ಅವರಿಗೆ ಎಲ್ಲ ಸ್ಥಾನಮಾನ ನೀಡಿದೆ. ಶಿಕಾರಿಪುರ ಕ್ಷೇತ್ರದ ಜನರ ಅಭಿಪ್ರಾಯದಂತೆ ನನಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದಾಗಿ ಹೇಳಿದ್ದಾರೆ. ಹೈಕಮಾಂಡ್ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
Advertisement
Advertisement
ನಾನು ಅಲ್ಲಿ – ಇಲ್ಲಿ ಸ್ಪರ್ಧಿಸಬೇಕೆಂದಿಲ್ಲ. ಇಡೀ ರಾಜ್ಯವಿದೆ. ಜನರು ಬಯಸಿದಲ್ಲಿ ಹಾಗೂ ಪಕ್ಷ ಟಿಕೆಟ್ ನೀಡಿದಲ್ಲಿ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಮುಫ್ತಿ ಅಪಮಾನ- ಖರ್ಗೆಗೆ ಆಸನ ನಿಗದಿಯಲ್ಲಿ ಶಿಷ್ಟಾಚಾರ ಉಲ್ಲಂಘನೆ
ಚುನಾವಣೆಗೆ ಇನ್ನೂ 8 ತಿಂಗಳು ಬಾಕಿಯಿದೆ. ಈಗಲೇ ಕೈ ನಾಯಕರು ಸಿಎಂ ಗಾದಿಗಾಗಿ ಕಿತ್ತಾಡುತ್ತಿರುವುದು ಹಾಸ್ಯಾಸ್ಪದ. ಅವರು ಕಿತ್ತಾಡಿಕೊಳ್ಳಲಿ. ಅದರಿಂದ ಬಿಜೆಪಿಗೆ ಲಾಭವಾಗುತ್ತದೆ ಎಂಬುದು ಸುಳ್ಳು. ನಮ್ಮ ಸಂಘಟನೆ ನಿರಂತರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.