ಕೋಲಾರ: ಟೊಮೆಟೋ ಬೆಳೆ ಕೋಲಾರ (Kolara) ಜಿಲ್ಲೆಯ ರೈತರ ಪಾಲಿಗೆ ಜೂಜಾಟದ ಬೆಳೆಯಾಗಿ ಪರಿಣಮಿಸಿದೆ. ಬೆಳೆ ಇದ್ದಾಗ ಬೆಲೆ ಇರಲ್ಲ, ಬೆಲೆ ಇದ್ದಾಗ ಬೆಳೆ ಬರಲ್ಲ ಇದು ಟೊಮೆಟೋ ಬೆಳೆಗಾರರ ಸ್ಥಿತಿ. ಕಳೆದ ನಾಲ್ಕು ದಿನಗಳಲ್ಲಿ ಟೊಮೆಟೋ (Tomato) ಬೆಲೆ 900 ರಿಂದ 1000 ರೂಪಾಯಿವರೆಗೆ ಇಳಿಕೆಯಾಗಿದೆ. ಬೆಳೆ ಇಳಿಕೆಯಾದ ಬೆನ್ನಲ್ಲೇ ರೈತರಿಗೆ ಆತಂಕ ಶುರುವಾಗಿದ್ದರೆ ಗ್ರಾಹಕರು ಕೊಂಚ ನಿರಾಳವಾಗುತ್ತಿದ್ದಾರೆ.
Advertisement
ಕಳೆದ 2 ತಿಂಗಳಿನಿಂದ ಕೋಲಾರ ಎಪಿಎಂಸಿ ಮಾರುಕಟ್ಟೆ (Kolara APMC Market) ಷೇರು ಮಾರುಕಟ್ಟೆಯಂತಾಗಿ ರೈತರು ಹಾಗೂ ವ್ಯಾಪಾರಿಗಳಿಗೆ ಹೂಡಿಕೆ ಮಾಡುವ ಕೇಂದ್ರವಾಗಿ ಪರಿಣಮಿಸಿತ್ತು. ಆದರೆ ನಾಲ್ಕು ದಿನಗಳಿಂದ ಟೊಮೆಟೋ ಬೆಲೆ ನಿರಂತರವಾಗಿ ಕುಸಿಯುವ ಮೂಲಕ ರೈತರ ಆತಂಕಕ್ಕೆ ಕಾರಣವಾಗಿದೆ. ನಾಲ್ಕು ದಿನದ ಮೊದಲು ಸರಾಸರಿ 15 ಕೆಜಿಯ ಟೊಮೆಟೋ ಬಾಕ್ಸ್ 2,500- 2,800 ರೂ.ಗೆ ಮಾರಾಟವಾಗುತ್ತಿತ್ತು. ಭಾನುವಾರ ಅತಿ ಹೆಚ್ಚು ಗುಣಮಟ್ಟ ಇರುವ ಸರಾಸರಿ 15 ಕೆಜಿಯ ಟೊಮೆಟೋ ಬಾಕ್ಸ್ ಬೆಲೆ ಕೇವಲ 1,500 ರೂಪಾಯಿಗೆ ಮಾರಾಟವಾಗಿದೆ. ಶನಿವಾರ, ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ 900 ರಿಂದ 1000 ರೂ. ಕಡಿಮೆಯಾಗಿದೆ. ಸದ್ಯ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ತಮಿಳುನಾಡು, ಆಂಧ್ರಪ್ರದೇಶದಿಂದಲೂ ಟೊಮೆಟೋ ಬರುತ್ತಿದ್ದು, ಬೆಲೆ ಇಳಿಮುಖವಾಗುತ್ತಿದೆ.
Advertisement
ಅಷ್ಟೇ ಅಲ್ಲದೇ ಟೊಮೆಟೋ ಖರೀದಿಗೆ ಹೊರ ರಾಜ್ಯದ ವ್ಯಾಪಾರಿಗಳು ಮುಂದಕ್ಕೆ ಬರುತ್ತಿಲ್ಲ. ಇದರೊಂದಿಗೆ ಏಷ್ಯಾದಲ್ಲೇ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆ ನಾಸಿಕ್‌ನಲ್ಲೂ ಟೊಮೆಟೋ ಹೆಚ್ಚಾಗಿ ಆವಕ ಬಂದಿದೆ. ಅಲ್ಲದೆ ಬೇರೆ ಬೇರೆ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿ ಅಲ್ಲಿನ ವ್ಯಾಪಾರಿಗಳು ಟೊಮೆಟೋ ಖರೀದಿ ಮಾಡುತ್ತಿಲ್ಲ. ಪರಿಣಾಮ ಟೊಮೆಟೋ ಬೆಲೆ ಒಂದೇ ಸಮನೆ ಕುಸಿಯುತ್ತಿದೆ.
Advertisement
Advertisement
ವಿಶೇಷವಾಗಿ ಇದು ಆಗಸ್ಟ್ ತಿಂಗಳಾಗಿರುವುದರಿಂದ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗೆ ಆಫ್ಘಾನಿಸ್ತಾನ ಹಾಗೂ ಪಾಕಿಸ್ತಾನಕ್ಕೆ ಕಳುಹಿಸುವ ಟೊಮೆಟೋ ಕೂಡ ಬಂದ್ ಆಗಿದೆ. ಇವೆಲ್ಲದರ ಮಧ್ಯೆ ಕೋಲಾರ ಜಿಲ್ಲೆಯಲ್ಲಿ ರೈತರು ಹೆಚ್ಚಾಗಿ ಟೊಮೆಟೋ ಬೆಳೆಯಲು ಮುಂದಾಗಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಟೊಮೆಟೋ ಬೆಲೆ ಮತ್ತಷ್ಟು ಕುಸಿಯುವ ಸಾಧ್ಯತೆಯಿದೆ.
Web Stories