ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ (Delhi liquor Policy) ತಮ್ಮ ಬಂಧನದ ಅವಧಿಯನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ಮುಂದಿನ ವಿಚಾರಣೆ ವೇಳೆಗೆ ಐದು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಲು ತಯಾರಾಗಿ ಬರುವಂತೆ ಇಡಿ ಪರ ವಕೀಲರಿಗೆ ಸೂಚನೆ ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ, ಪ್ರಕರಣದಲ್ಲಿ ಕೇಜ್ರಿವಾಲ್ ಹೇಗೆ ಸಂಬಂಧ ಹೊಂದಿದ್ದಾರೆ? ಮನೀಶ್ ಸಿಸೋಡಿಯಾ ಪ್ರಕರಣದಲ್ಲಿ ಎರಡು ಭಾಗಗಳಿವೆ. ಆ ಪೈಕಿ ಒಂದು ಅವರ ಪರವಾಗಿ ಮತ್ತೊಂದು ಅವರ ವಿರುದ್ಧವಾಗಿದೆ. ಇದರ ಯಾವ ಭಾಗದಲ್ಲಿ ಕೇಜ್ರಿವಾಲ್ ಇದ್ದಾರೆ ಇದಕ್ಕೆ ಉತ್ತರಿಸಬೇಕು ಎಂದು ಪೀಠ ಸೂಚಿಸಿದೆ. ಇದನ್ನೂ ಓದಿ: ವಿದೇಶದ ಮತದಾರರಿಗೆ ಭಟ್ಕಳ ಜಮಾತ್‍ಗಳಿಂದ ಗಾಳ- ವಿಮಾನ ಟಿಕೆಟ್ ಆಫರ್
ಜಾಮೀನಿಗೆ ಅರ್ಜಿ ಸಲ್ಲಿಸುವ ಬದಲು ಕೇಜ್ರಿವಾಲ್ ಬಂಧನ ಮತ್ತು ರಿಮಾಂಡ್ ವಿರುದ್ಧ ಬರುತ್ತಿರುವ ಕಾರಣ ಪಿಎಂಎಲ್‍ಎ ಕಾಯ್ದೆಯ ಸೆಕ್ಷನ್ 19 ಅನ್ನು ಹೇಗೆ ಅರ್ಥೈಸಬೇಕು? ವಿಶೇಷವಾಗಿ ಸೆಕ್ಷನ್ 8ರ ತೀರ್ಪು ಪ್ರಕ್ರಿಯೆಗೆ 365 ದಿನಗಳ ಗರಿಷ್ಠ ಸಮಯದ ಮಿತಿಯನ್ನು ಸೂಚಿಸುತ್ತದೆ. ಸ್ವಾತಂತ್ರ್ಯವು ಅತ್ಯಂತ ಮಹತ್ವದ್ದಾಗಿದೆ. ನಾವು ಅದನ್ನು ನಿರಾಕರಿಸಲು ಸಾಧ್ಯವಿಲ್ಲ ಈ ಬಗ್ಗೆ ನಿಲುವೇನು? ಎಲ್ಲಕ್ಕಿಂತ ಮುಖ್ಯವಾಗಿ ಚುನಾವಣೆ ಮುಂಚಿತವಾಗಿ ಅವರನ್ನು ಬಂಧಿಸಿದ್ದೇಕೆ ಎಂದು ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಪ್ರಶ್ನಿಸಿದೆ.
ಇಡಿ ಪ್ರಶ್ನೆಗಳಿಗೂ ಮುನ್ನ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಕೇಜ್ರಿವಾಲ್ ಪರ ಎರಡು ಗಂಟೆಗೂ ಅಧಿಕ ಕಾಲ ಸುಧೀರ್ಘವಾಗಿ ವಾದ ಮಂಡಿಸಿದರು. ವಾದ ಆಲಿಸಿದ ಬಳಿಕ ನ್ಯಾಯಾಲಯ ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ ಕಾಂಗ್ರೆಸ್ ಪತನ; ಮೊದಲ ಕಾಂಗ್ರೆಸ್ಸೇತರ ಸರ್ಕಾರ ತಂದ ಚುನಾವಣೆಯಲ್ಲಿ ಏನಾಯ್ತು?