ಧಾರವಾಡ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಗೆ ಸೇನೆ ಸೇರ ಬಯಸುವ ಅಭ್ಯರ್ಥಿಗಳಿಂದ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಇದೀಗ ಈ ಯೋಜನೆಗೆ ರೈತ ಮುಖಂಡರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡರು ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಗ್ನಿಪಥ್ ಯೋಜನೆ ಮೂಲಕ ಸೇನೆಗೆ ಅಭ್ಯರ್ಥಿಗಳನ್ನು ಸೇರಿಸಿಕೊಂಡು ಕೇವಲ ಎರಡೂವರೆ ವರ್ಷಗಳ ಕಾಲ ಮಾತ್ರ ಅವರನ್ನು ಬಳಸಿಕೊಂಡು, ನಂತರ ಅವರನ್ನು ಸೇನೆಯಿಂದ ಕೈಬಿಡುವುದು ಯಾವ ನ್ಯಾಯ ಎಂದು ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಹಳ್ಳದಲ್ಲಿ ತೇಲಿ ಬಂದ ಏಳು ಭ್ರೂಣಗಳ ಮೃತದೇಹ
Advertisement
Advertisement
ಈ ಯೋಜನೆ ಯುವಕರನ್ನು ದಾರಿ ತಪ್ಪಿಸುವ ಯೋಜನೆಯಾಗಿದೆ. ಕೂಡಲೇ ಈ ಯೋಜನೆಯನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು. ಅಗ್ನಿಪಥ್ ಯೋಜನೆ ಒಳ್ಳೆಯ ಯೋಜನೆ ಎಂದು ಅದನ್ನು ಸಮರ್ಥಿಸಿಕೊಳ್ಳುತ್ತಿರುವ ಬಿಜೆಪಿ ಹಾಗೂ ಆರ್‌ಎಸ್‍ಎಸ್ ನಾಯಕರು ತಮ್ಮ ಮಕ್ಕಳನ್ನು ಯಾಕೆ ಈ ಯೋಜನೆಯಡಿ ಸೈನ್ಯಕ್ಕೆ ಸೇರಿಸುತ್ತಿಲ್ಲ ಎಂದು ಕಿಡಿಕಾರಿದರು.
Advertisement
Advertisement
ಈ ನಾಯಕರ ಮಕ್ಕಳು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಅಗ್ನಿಪಥ್ ಎಂದು ಈ ದೇಶದ ಯುವ ಜನರ ದಿಕ್ಕು ತಪ್ಪಿಸುವುದನ್ನು ಕೂಡಲೇ ಬಿಡಬೇಕು ಎಂದು ಆಗ್ರಹಿಸಿದರು.