ಬೆಂಗಳೂರು: ನೆರೆ ಹಾವಳಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಕೇಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರ ಬಳಿ ಯಾರೊಬ್ಬರೂ ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ತುಟಿ ಬಿಚ್ಚಲಿಲ್ಲ, ಪರಿಹಾರ ಕೇಳಲಿಲ್ಲ ಏಕೆ ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದೆ. ಇದನ್ನೂ ಓದಿ: ನನ್ನನ್ನು ಕಂಡ್ರೆ ಬಿಜೆಪಿಯವರಿಗೆ ಭಯವೋ ಭಯ: ಸಿದ್ದರಾಮಯ್ಯ
Advertisement
◆ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದಾರೆ
◆ಕರ್ನಾಟಕದಿಂದ 6 ಕೇಂದ್ರ ಸಚಿವರಿದ್ದಾರೆ
◆ಡಬಲ್ ಇಂಜಿನ್ ಸರ್ಕಾರವಿದೆ
ಇಷ್ಟೆಲ್ಲ ಇರುವುದು 'ಊಟಕ್ಕೆ ಸಿಗದ ಉಪ್ಪಿನಕಾಯಿಯಂತೆ'!
ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರ ಬಳಿ ಯಾರೊಬ್ಬರೂ ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ತುಟಿ ಬಿಚ್ಚಲಿಲ್ಲ, ಪರಿಹಾರ ಕೇಳಲಿಲ್ಲ ಏಕೆ @BJP4Karnataka?
— Karnataka Congress (@INCKarnataka) August 6, 2022
Advertisement
ಟ್ವೀಟ್‌ನಲ್ಲೇನಿದೆ?
ಮಳೆ ಅಬ್ಬರಕ್ಕೆ ಹಲವು ಮಂದಿ ಜೀವ ಬಿಟ್ಟಿದ್ದಾರೆ, ಅಪಾರ ಬೆಳೆ ಹಾನಿಯಾಗಿದೆ. ಸಿಎಂ ಬೊಮ್ಮಾಯಿ ಅವರೇ, ನೆರೆ ಪರಿಹಾರ ಕೇಳಲು ದೆಹಲಿಗೆ ಹೋಗುವ ಅಗತ್ಯವಿರಲಿಲ್ಲ, NDRF ಮುಖ್ಯಸ್ಥ ಅಮಿತ್ ಶಾ ಅವರೇ ಬಂದಿದ್ದರು. ಪ್ರವಾಹ ವೀಕ್ಷಣೆಗೆ ಕರೆದೊಯ್ಯಲಿಲ್ಲ ಏಕೆ? ಪರಿಹಾರದ ಬಗ್ಗೆ ಮಾತಾಡಲಿಲ್ಲ ಏಕೆ? ಕೇಳಲು ಭಯವೇ, ಪರಿಹಾರ ಸಿಗದು ಎಂಬ ತಾತ್ಸಾರವೇ!?
Advertisement
Advertisement
ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದಾರೆ. ಕರ್ನಾಟಕದಿಂದ 6 ಕೇಂದ್ರ ಸಚಿವರಿದ್ದಾರೆ. ಡಬಲ್ ಇಂಜಿನ್ ಸರ್ಕಾರವಿದೆ. ಇಷ್ಟೆಲ್ಲ ಇರುವುದು ‘ಊಟಕ್ಕೆ ಸಿಗದ ಉಪ್ಪಿನಕಾಯಿಯಂತೆ’! ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರ ಬಳಿ ಯಾರೊಬ್ಬರೂ ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ತುಟಿ ಬಿಚ್ಚಲಿಲ್ಲ, ಪರಿಹಾರ ಕೇಳಲಿಲ್ಲ ಏಕೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಇದನ್ನೂ ಓದಿ: ಮಹದಾಯಿ ವಿಷಯದಲ್ಲಿ ಮತ್ತೆ ಗೋವಾ ಕ್ಯಾತೆ – ಕರ್ನಾಟಕದ ವಿರುದ್ಧ ತುರ್ತು ತನಿಖೆಗೆ ಶಾಸಕ ಮನವಿ