ತೆಂಗಿನ ಕಾಯಿಯನ್ನು ಚಟ್ನಿ, ಸಾಂಬಾರ್, ಸಿಹಿತಿಂಡಿಗಳಿಗೆ ಬಳಸುತ್ತಾರೆ. ಇದರಿಂದ ಅಡುಗೆಯ ರುಚಿಯನ್ನು ಹೆಚ್ಚಿಸುತ್ತದೆ. ಜೊತೆಗೆ ದಣಿವಾದಾಗ ಅದನ್ನು ನೀಗಿಸಲು ಅದರ ನೀರನ್ನು ಕುಡಿಯುತ್ತಾರೆ. ಇದು ಕೇವಲ ಅಡುಗೆಯ ರುಚಿಯನ್ನು ಹೆಚ್ಚಿಸಲಷ್ಟೇ ಅಲ್ಲ ಆರೋಗ್ಯಕ್ಕೂ ಅಷ್ಟೇ ಒಳ್ಳೆಯದಾಗಿದೆ.
ಥೈರಾಯ್ಡ್ ಸಮಸ್ಯೆಗೆ ಪರಿಹಾರ: ಇಂದಿನ ಯುಗದಲ್ಲಿ ಸರಿಯಾದ ಪೋಷಕಾಂಶಯುಕ್ತ ಆಹಾರವನ್ನು ಸೇವಿಸದೇ ಇರುವುದು, ಒತ್ತಡ ಮತ್ತು ಇತರ ಸಮಸ್ಯೆಗಳಂತಹ ಕಳಪೆ ಜೀವನಶೈಲಿಯಿಂದಾಗಿ ಬಹಳಷ್ಟು ಜನರಿಗೆ ಚಿಕ್ಕ ವಯಸ್ಸಿನಲ್ಲೇ ಥೈರಾಯ್ಡ್ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಆದರೆ ಇದನ್ನು ಕಡಿಮೆ ಮಾಡಿಕೊಳ್ಳಲು ತೆಂಗಿನಕಾಯಿ ಸೇವನೆ ಅತ್ಯುತ್ತಮ ಥೈರಾಯ್ಡ್ ಆಹಾರವಾಗಿದೆ. ಇದನ್ನು ಪ್ರತಿನಿತ್ಯ ನಿಮ್ಮ ಆಹಾರದಲ್ಲಿ ಬಳಸುವುದರಿಂದ ಥೈರಾಯ್ಡ್ ಗ್ರಂಥಿಯು ದೇಹದ ಚಯಾಪಚಯ ಪ್ರಕ್ರಿಯೆಗಳ ಮೇಲೆ ನಿಗಾ ಇಡಲು ಸಹಾಯ ಮಾಡುತ್ತದೆ.
Advertisement
Advertisement
3 ಬಾರಿಯಾದ್ರೂ ಎಳನೀರು ಕುಡಿಯಿರಿ: ಬೇಸಿಗೆಗಾಲ ಬಂತೆಂದರೆ ಸಾಕು ಜನರು ಸಾಧ್ಯವಾದಷ್ಟು ಎಳನೀರನ್ನು ಕುಡಿಯುತ್ತಾರೆ. ಇದರಿಂದ ತಮ್ಮ ದಣಿವನ್ನು ಕಡಿಮೆ ಮಾಡಿಕೊಳ್ಳುತ್ತಾರೆ. ಜೊತೆಗೆ ಆರೋಗ್ಯಕ್ಕೂ ಉತ್ತಮವಾಗಿದೆ. ವಾರಕ್ಕೆ 3 ರಿಂದ 4 ಬಾರಿ ಎಳೆನೀರನ್ನು ಕುಡಿಯುವುರಿಂದ ನಿಮ್ಮ ಆರೋಗ್ಯವೂ ಸುಧಾರಿಸುತ್ತದೆ. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು
Advertisement
Advertisement
ಆರೋಗ್ಯಕ್ಕೆ ಉತ್ತಮ ತೆಂಗಿನ ಎಣ್ಣೆ: ನಮ್ಮ ದೇಹವನ್ನು ಕಾಂತಿಯುತವಾಗಿ ಮಾಡಲು ತೆಂಗಿನ ಎಣ್ಣೆ ಸಹಾಯಮಾಡುತ್ತದೆ. ಜೊತೆಗೆ ಇದು ನಿಮ್ಮ ಕೂದಲನ್ನು ಗಟ್ಟಿ ಮುಟ್ಟಾಗಿ ಬೆಳೆಯಲು ಸಹಾಯ ಮಾಡುತ್ತದೆ. ನಮ್ಮ ದೇಹದಲ್ಲಿ ಕೊಬ್ಬಿನಾಂಶವನ್ನು ಕಡಿಮೆ ಮಾಡುವುದರ ಜೊತೆಗೆ ದೇಹದಲ್ಲಿ ಶಾಖವನ್ನು ಹೆಚ್ಚಿಸುತ್ತದೆ. ಇದು ಬಹುಬೇಗ ಜೀರ್ಣವೂ ಆಗುತ್ತದೆ. ಜೊತೆಗೆ ತೆಂಗಿನ ಎಣ್ಣೆಯನ್ನು ಸೇವಿಸುವುದರಿಂದ ತೂಕವು ಗಣನೀಯವಾಗಿ ಇಳಿಯುತ್ತದೆ. ಇದನ್ನೂ ಓದಿ: ಒಡೆದ ಹಿಮ್ಮಡಿಯ ಆರೈಕೆಗೆ ಏನು ಮಾಡಬೇಕು ಗೊತ್ತಾ?
ಕೊಲೆಸ್ಟ್ರಾಲ್ ನಿಯಂತ್ರಣ: ಸ್ಯಾಚುರೇಟೆಡ್ ಕೊಬ್ಬು ತೆಂಗಿನಕಾಯಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುವುದರಿಂದ ಪ್ರತಿದಿನ ತೆಂಗಿನಕಾಯಿ ಸೇವಿಸಿದರೆ ಕೊಲೆಸ್ಟ್ರಾಲ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ. ತೆಂಗಿನ ಕಾಯಿಯಲ್ಲಿ ಹೇರಳವಾಗಿ ವಿಟಮಿನ್ ಅಂಶಗಳಿವೆ.
ರೋಗ ನಿರೋಧಕ ಶಕ್ತಿ ಹೆಚ್ಚಳ: ಆಂಟಿಫಂಗಲ್, ಆಂಟಿಬ್ಯಾಕ್ಟಿರಿಯಲ್ ಮತ್ತು ಆಂಟಿ ವೈರಲ್ ಅಂಶಗಳು ತೆಂಗಿನ ಕಾಯಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವದೆ. ಇದು ರೋಗಗಳ ವಿರುದ್ಧ ಹೋರಾಡುವ ಸಾಮಥ್ರ್ಯವನ್ನು ಹೆಚ್ಚಿಸುತ್ತದೆ. ತೆಂಗಿನಕಾಯಿ ಸೇವಿಸುವುದರಿಂದದೇಹದ ರೋಗ ನಿರೋಧಕ ಶಕ್ತಿ ಅಧಿಕವಾಗುತ್ತದೆ. ತೆಂಗಿನ ಕಾಯಿಯ ಹಾಲನ್ನು ಮಕ್ಕಳಿಗೆ ನೀಡುವುದರಿಂದ ಮಕ್ಕಳ ಮೂಳೆಗಳು ಬಲಿಷ್ಠವಾಗುತ್ತದೆ.