ಬಲಿ ಪಾಡ್ಯಮಿಯಂದೇ ಗೋವರ್ಧನ ಪೂಜೆಯನ್ನು ಮಾಡಿ, ಗೋವುಗಳನ್ನು ಅಲಂಕರಿಸಿ, ಹಾಲು ಹಿಂಡುವ ಪಾತ್ರೆಗಳನ್ನು ಪೂಜಿಸಲಾಗುತ್ತದೆ. ಗೋಶಾಲೆಯನ್ನು ದೀಪದಿಂದ ಬೆಳಗಿ, ಹಸುಗಳಿಗೆ ಅಕ್ಕಿ, ಬೆಲ್ಲ, ಹಿಂಡಿ, ತಿನಿಸುಗಳನ್ನು ನೀಡಲಾಗುತ್ತದೆ. ಗೋಪೂಜೆಯನ್ನ ಯಾಕೆ ಮಾಡಲಾಗುತ್ತದೆ ಎನ್ನುವುದಕ್ಕೂ ಪುರಾಣ ಕಥೆಯಿದೆ.
ಕೃಷ್ಣ ನಂದಗೋಕುಲದಲ್ಲಿದ್ದಾಗ ಅಲ್ಲಿದ್ದ ಗೋಪ, ಗೋಪಿಯರು ಪ್ರತಿವರ್ಷ ಮಳೆ ಬರಲಿ ಎಂದು ಎಲ್ಲರು ಇಂದ್ರದೇವನ ಪೂಜೆಯನ್ನು ಮಾಡುತ್ತಿದ್ದರು. ಇದರಿಂದಾಗಿ ಇಂದ್ರನಿಗೆ ನಾನು ಮಳೆ ಬರಿಸುವುದರಿಂದಲೇ ಪ್ರಪಂಚದಲ್ಲಿ ಎಲ್ಲವೂ ನಡೆಯುತ್ತಿದೆ ಎಂದು ಗರ್ವದಿಂದ ಬೀಗಿದ. ಇದನ್ನೂ ಓದಿ:ದೀಪಾವಳಿಯಂದು ಬಲೀಂದ್ರ ಪೂಜೆಯನ್ನು ಯಾಕೆ ಮಾಡುತ್ತಾರೆ? ರೈತರು ಹೇಗೆ ಬಲಿಯನ್ನು ಸ್ವಾಗತಿಸುತ್ತಾರೆ?
Advertisement
Advertisement
ಇಂದ್ರ ತಾನು, ತನ್ನಿಂದ ಎಂದು ಗರ್ವದಲ್ಲಿ ಬೀಗುತ್ತಿರುವ ವಿಚಾರ ಕೃಷ್ಣನಿಗೆ ತಿಳಿಯುತ್ತದೆ. ಈ ಕಾರಣಕ್ಕೆ ಈತನ ಗರ್ವ ಇಳಿಸಲು ಇಂದ್ರನಿಗೆ ಪೂಜೆ ಮಾಡದೇ ಗೋವರ್ಧನ ಪರ್ವತಕ್ಕೆ ಪೂಜೆ ಮಾಡಬೇಕೆಂದು ಗೋಪಾಲಕರಿಗೆ ಸೂಚಿಸಿದ. ನಮಗೆ ಮಳೆ ಗೋವರ್ಧನ ಪರ್ವತದಿಂದ ಬರುತ್ತಿದೆ, ಅದಕ್ಕಾಗಿ ನಾವು ಇನ್ನು ಮುಂದೆ ಗೋವರ್ಧನ ಪರ್ವತವನ್ನು ಪೂಜೆ ಮಾಡಬೇಕೇ ವಿನಾಃ ಇಂದ್ರದೇವನ ಪೂಜೆ ಮಾಡುವುದು ಬೇಡ ಎಂದು ಸೂಚಿಸಿದ. ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಮಾಡಿ ಗರಿಗರಿಯಾದ ಶಂಕರಪೊಳೆ
Advertisement
Advertisement
ಕೃಷ್ಣನ ಸೂಚನೆಯ ಹಿನ್ನೆಲೆಯಲ್ಲಿ ಗೋವರ್ಧನ ಪರ್ವತದ ಪೂಜೆ ಮಾಡಲು ಶುರು ಮಾಡಿದರು. ನನಗೆ ಪೂಜೆ ಮಾಡುವುದನ್ನು ಬಿಟ್ಟು ಗೋವರ್ಧನ ಪರ್ವತಕ್ಕೆ ಪೂಜೆ ಮಾಡುವುದನ್ನು ನೋಡಿ ಇಂದ್ರನಿಗೆ ಕೋಪ ಬಂತು. ಗೋಪಾಲರಿಗೆ ಪಾಠ ಕಲಿಸಲು ಇಂದ್ರನು ತುಂಬಾ ರಭಸವಾಗಿ ಮಳೆಯನ್ನು ಸುರಿಸಲು ಪ್ರಾರಂಭಿಸಿದನು. ಇದರಿಂದಾಗಿ ನದಿಯು ತುಂಬಿ ಹರಿಯಲಾರಂಭಿಸಿತು. ಎಲ್ಲ ಜನರು ಗಾಬರಿಯಿಂದ ಶ್ರೀಕೃಷ್ಣನ ಬಳಿಗೆ ಸಹಾಯ ಕೇಳಲು ಓಡಿದರು. ಇದನ್ನೂ ಓದಿ: ದೀಪಾವಳಿಯಂದು ಎಣ್ಣೆ ಸ್ನಾನ ಮಾಡೋದು ಯಾಕೆ? ನರಕಕ್ಕೆ ಹೋಗಲ್ಲ ಯಾಕೆ?
ಆಗ ಶ್ರೀಕೃಷ್ಣನು, ನೀವು ಯಾರು ಭಯ ಪಡುವ ಅಗತ್ಯವಿಲ್ಲ. ಎಲ್ಲರು ಒಟ್ಟು ಸೇರೋಣ. ನಾವು ಪೂಜಿಸಿದ ಗೋವರ್ಧನ ಪರ್ವತವೇ ನಮ್ಮನ್ನು ರಕ್ಷಿಸುತ್ತದೆ ಎಂದು ಅಭಯವನ್ನು ಇತ್ತ. ಎಲ್ಲ ಜನ ಸೇರಿದ ನಂತರ ಕೃಷ್ಣ ತನ್ನ ಕಿರು ಬೆರಳಿನಿಂದ ಗೋವರ್ಧನ ಪರ್ವತವನ್ನು ಎತ್ತಿ ಹಿಡಿದು ಗ್ರಾಮಸ್ಥರನ್ನು ರಕ್ಷಿಸಿದ. ಬಲಿ ಪಾಡ್ಯಮಿಯಂದು ಕೃಷ್ಣ ಗೋವರ್ಧನ ಪರ್ವತವನ್ನು ಎತ್ತಿದ ಹಿನ್ನೆಲೆಯಲ್ಲಿ ಈ ದಿನ ಈಗಲೂ ಗೋವುಗಳಿಗೆ ವಿಶೇಷ ಪೂಜೆ ಮಾಡಲಾಗುತ್ತದೆ.
https://www.youtube.com/watch?v=bdq-b9Difjs