ಯಾದಗಿರಿ: ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿಯೇ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ (Baburao Chinchansur) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಹಾಗೂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಕೋಲಿ ಸಮುದಾಯ ಹೆಚ್ಚಾಗಿರುವ ಕಲ್ಯಾಣ ಕರ್ನಾಟಕ ಭಾಗದ ಕೆಲ ಕ್ಷೇತ್ರಗಳನ್ನು ಸುಲಭವಾಗಿ ಗೆಲ್ಲುವ ಕನಸು ಕಂಡಿದ್ದ ಬಿಜೆಪಿ (BJP) ಪಾಳಯಕ್ಕೆ, ಚಿಂಚನಸೂರ್ ಬಹುದೊಡ್ಡ ಶಾಕ್ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಕೋಲಿ ಸಮಾಜದ ಏಕೈಕ ಪ್ರಭಾವಿ ಮುಖಂಡ ಸಪ್ತ ಖಾತೆಗಳ ಸಚಿವನೆಂದೇ ಖ್ಯಾತಿ ಹೊಂದಿದ್ದ ಬಾಬುರಾವ್ ಚಿಂಚನಸೂರ್ ಸೋಮವಾರ ಸಂಜೆ ಏಕಾಏಕಿ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಚಿಂಚನಸೂರ್ ಕಮಲಕ್ಕೆ ಕೈಕೊಟ್ಟು ʼಕೈʼ ಹಿಡಿಯಲು ಮುಂದಾಗಿದ್ದಾರೆ.
Advertisement
Advertisement
ಬಿಜೆಪಿಗೆ ರಾಜೀನಾಮೆ ನೀಡಿದ್ಯಾಕೆ?: ಬಿಜೆಪಿಯಲ್ಲಿ ಬಾಬುರಾವ್ ಚಿಂಚನಸೂರ್ ಅವರನ್ನು ಕಡೆಗಣಿಸಲಾಗಿತ್ತು. ಸರ್ಕಾರಿ ಕಾರ್ಯಾಕ್ರಮಗಳಿಗೆ ಆಹ್ವಾನ ನೀಡುತ್ತಿಲ್ಲ ಎಂದು ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಈ ಹಿಂದೆ ತಮ್ಮನ್ನು ಬಿಟ್ಟು ವಸತಿ ಶಾಲೆ ಉದ್ಘಾಟನೆ ಮಾಡಲು ಮುಂದಾಗಿದ್ದ ಸಚಿವ ರಾಮುಲುಗೆ ಘೇರಾವ್ ಹಾಕಿ ಪ್ರತಿಭಟನೆಯನ್ನು ಮಾಡಿದ್ದರು. ನಿಗಮ ಮಂಡಳಿ ಅಧ್ಯಕ್ಷ ಹಾಗೂ ಎಮ್‌ಎಲ್ಸಿ ಆಗಿದ್ದರೂ ಕಡೆಗಣಿಸುತ್ತಿರುವುದಕ್ಕೆ ಅಸಮಾಧಾನಗೊಂಡಿದ್ದ ಚಿಂಚನಸೂರ್, ಇದೇ ಕಾರಣಕ್ಕೆ ಫೆ. 13ರಂದು ರಾಜೀನಾಮೆ ನೀಡಲು ಮುಂದಾಗಿದ್ದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಬಿ.ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರಿಂದ ಮನವೊಲಿಕೆ ಮಾಡಲಾಗಿತ್ತು. ಹೀಗಾಗಿ ಚುನಾವಣೆ ಘೋಷಣೆ ಆದಮೇಲೆ ರಾಜೀನಾಮೆ ನೀಡುವ ಪ್ಲ್ಯಾನ್ ಮಾಡಿದ್ದರು. ಆದರೆ ನಿನ್ನೆ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಎಮ್ಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Advertisement
ಮಾ. 8ರಂದು ಗುರುಮಠಕಲ್‌ನಲ್ಲಿ ನಡೆದಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ರೋಡ್ ಶೋನಲ್ಲಿ ಮಾಜಿ ಸಿಎಂ ಬಿಎಸ್‌ವೈ ಅವರಿಂದಲೇ ಚಿಂಚನಸೂರ್ ಗುರುಮಠಕಲ್ ಅಭ್ಯರ್ಥಿ ಎಂದು ಘೋಷಿಸಿದ್ದರು. ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ 12 ದಿನಕ್ಕೆ ರಾಜೀನಾಮೆ ನೀಡಿದ್ದಾರೆ. ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದರೇ ಸೋಲು ಖಚಿತ ಎನ್ನುವುದನ್ನು ಅರಿತ ಚಿಂಚನಸೂರ ಈ ನಿರ್ಧಾರ ಮಾಡಿದ್ದಾರೆ. ಬಿಜೆಪಿ ಆಂತರಿಕ ಸರ್ವೆ ಪ್ರಕಾರ ಗುರುಮಠಕಲ್‌ನಲ್ಲಿ ಚಿಂಚನಸೂರ್ 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲು ಖಚಿತ ಎನ್ನಲಾಗುತ್ತಿತ್ತು. ಇದೇ ಕಾರಣಕ್ಕೆ ಟಿಕೆಟ್ ಡೌಟ್ ಎನ್ನುವ ಊಹಾಪೋಹವೂ ಎದ್ದಿತ್ತು. ಈ ಎಲ್ಲಾ ಬೆಳವಣಿಗೆಗಳನ್ನು ಕಂಡು ಬಿಜೆಪಿಗೆ ಚಿಂಚನಸೂರ್ ಗುಡ್ ಬೈ ಹೇಳಿದ್ದಾರೆ.
Advertisement
ಚಿಂಚನಸೂರ್ ಅವಶ್ಯಕತೆ ಕೈ ಪಾಳಯಕ್ಕೆ ಅನಿವಾರ್ಯ?: ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಕೋಲಿ ಸಮಾಜದ ಮತಗಳೇ ನಿರ್ಣಾಯಕ. ಅದರಲ್ಲೂ ವಿಶೇಷವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಖರ್ಗೆ (Priyank Kharge) ಸ್ಪರ್ಧೆ ಮಾಡಲಿರುವ ಚಿತ್ತಾಪುರದಲ್ಲಿ ಕೋಲಿ ಸಮುದಾಯವೇ ನಿರ್ಣಾಯಕ. ಬಹುಸಂಖ್ಯಾತ ಕೋಲಿ ಸಮುದಾಯದ ಮತದಾರರು ಇರುವ ಚಿತ್ತಾಪುರದಲ್ಲಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದ ಚಿಂಚನಸೂರ ಗ್ರೌಂಡ್ ಲೆವಲ್‌ನಿಂದ ಕೆಲಸ ಮಾಡಿ, ಕಾರ್ಯಕರ್ತರ ಪಡೆ ಕಟ್ಟಿದ್ದಾರೆ.
ಹೀಗಾಗಿ ಪ್ರಿಯಾಂಕ್ ಖರ್ಗೆ ಗೆಲ್ಲಬೇಕಾದ್ರೆ ಚಿಂಚನಸೂರ್ ಕಾಂಗ್ರೆಸ್‌ಗೆ (Congress) ಅನಿವಾರ್ಯ. ಇತ್ತ ಬಿಜೆಪಿ ನಾಯಕರೂ ಸಹಿತ ಈ ಬಾರಿ ಶತಾಯಗತಾಯ ಪ್ರಿಯಾಂಕ್ ಖರ್ಗೆ ಸೋಲಿಸಬೇಕು ಅನ್ನೋ ಜಿದ್ದಿಗೆ ಬಿದ್ದಿದ್ದಾರೆ. ಆದರೆ ಕಾಂಗ್ರೆಸ್ ತಮ್ಮ ಮಾನಸ ಪುತ್ರನನ್ನ ಗೆಲ್ಲಿಸಲು ಚಿಂಚನಸೂರ್ ಅಗತ್ಯತೆ ಇದ್ದಿದ್ದರಿಂದ ಕೆಲವು ಕಂಡೀಷನ್‌ಗಳನ್ನ ಹಾಕಿ ಈಗ ಕಾಂಗ್ರೆಸ್ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದ್ದು, ಇದೇ 25ರಂದು ಮತ್ತೆ ಕೈ ಹಿಡಿಯೋದು ಪಕ್ಕಾ ಆಗಿದೆ. ಯಾದಗಿರಿಯ ಗುರುಮಠಕಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೈದಾಪುರದಲ್ಲಿ ಮಲ್ಲಿಕಾರ್ಜುನ್ ಖರ್ಗೆ ಅಭಿನಂದನಾ ಬೃಹತ್ ಸಮಾವೇಶವಿದ್ದು, ಅಂದೇ ʼಕೈʼ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಸಿಎಂ ಇಬ್ರಾಹಿಂಗೆ ದೃಷ್ಠಿ ತೆಗೆದು ನೋಟಿನ ಸುರಿಮಳೆ ಸುರಿಸಿದ ಯುವಕ!
5 ಬಾರಿ ಶಾಸಕರಾಗಿದ್ದ ಚಿಂಚನಸೂರ್ : ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ 3 ಬಾರಿ ಹಾಗೂ ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ 2 ಬಾರಿ ಸೇರಿ 5 ಬಾರಿಯೂ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ 2019ರಲ್ಲಿ ಕಾಂಗ್ರೆಸ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಚಿಂಚನಸೂರ್, ಖರ್ಗೆ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2020ರಲ್ಲಿ ಅಂಬಿಗರ ಚೌಡಯ್ಯ ನಿಗಮ ಮಂಡಳಿ ಅಧ್ಯಕ್ಷರಾಗಿದ್ದ ಚಿಂಚನಸೂರ್ 2022 ಕೊನೆಯಲ್ಲಿ ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೆಲ್ಲದರ ನಡುವೆ ಲೋಕಸಭಾ ಚುನಾವಣೆ ವೇಳೆ ಖರ್ಗೆ ವಿರುದ್ಧ ಪುತ್ರ ವ್ಯಾಮೋಹದ ಆರೋಪ ಮಾಡಿ, ಜಿದ್ದಿಗೆ ಬಿದ್ದು ಪ್ರಚಾರ ಮಾಡಿದ್ದ ಚಿಂಚನಸೂರ್ ಈಗ ಮತ್ತೇ ಖರ್ಗೆ ಮೂಲಕವೇ ಕೈ ಕುಲುಕಲು ಮುಂದಾಗಿದ್ದಾರೆ. ಇದನ್ನೂ ಓದಿ: ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
2013ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಜವಳಿ ಮತ್ತು ಒಳನಾಡು ಜಲಸಾರಿಗೆ ಬಂದರು ಸಚಿವರಾಗಿದ್ದ ಅವರು, 2019ರಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸಿಡಿದೆದ್ದು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾದರು. ಬಿಜೆಪಿ ಸೇರ್ಪಡೆ ನಂತರ 2020ರಲ್ಲಿ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಆಗಿ 2022 ಕೊನೆಯಲ್ಲಿ ಸಿಎಂ ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾದ ಎಮ್ಎಲ್ಸಿ ಸ್ಥಾನಕ್ಕೆ ಬಿಜೆಪಿಯಿಂದ ಅವಿರೋಧ ಆಯ್ಕೆಯಾದರು.