ತಮಿಳಿನ ದುಬಾರಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ (Lyca Production) ಹೌಸ್, ಮೊದಲ ಬಾರಿಗೆ ಕನ್ನಡ ಸಿನಿಮಾಗೆ ಹಣ ಹೂಡುತ್ತಿದೆ. ತಮ್ಮ ಹೊಸ ಚಿತ್ರಕ್ಕೆ ನಿಖಿಲ್ ಕುಮಾರ್ ಸ್ವಾಮಿ ಅವರನ್ನು ಆಯ್ಕೆ ಮಾಡಿಕೊಂಡಿದೆ. ಇದು ಕೂಡ ಭಾರೀ ಬಜೆಟ್ ಸಿನಿಮಾವಾಗಿದ್ದು, ಅಷ್ಟೊಂದು ಬಜೆಟ್ ಹೂಡಲು ನಿಖಿಲ್ ನಟನೆಯ ಸೀತಾ ರಾಮ ಕಲ್ಯಾಣ ಸಿನಿಮಾವಂತೆ. ಈ ಸಿನಿಮಾ ನೋಡಿದ್ದ ಸಂಸ್ಥೆಯ ಮುಖ್ಯಸ್ಥರು ನಿಖಿಲ್ ಚಿತ್ರವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರಂತೆ.
ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy). ಚುನಾವಣೆಗೂ ಮುನ್ನ ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ ಭಾಗಿಯಾಗಿರಲಿಲ್ಲ. ಚುನಾವಣೆ ಮುಗಿದ ಕಾರಣದಿಂದಾಗಿ ಮತ್ತೆ ಚಿತ್ರರಂಗದತ್ತ ನಿಖಿಲ್ ಮುಖ ಮಾಡಿದ್ದಾರೆ.
ಸೀತಾ ರಾಮ್ ಕಲ್ಯಾಣ್ ಸಿನಿಮಾದ ನಂತರ ಧನುಷ್ (Dhanush) ಮತ್ತು ಯದುವೀರ (Yaduveer) ಎಂಬೆರಡು ಚಿತ್ರಗಳನ್ನು ನಿಖಿಲ್ ಒಪ್ಪಿಕೊಂಡಿದ್ದರೂ, ಎರಡೂ ಚಿತ್ರಗಳ ಚಿತ್ರೀಕರಣ ಪ್ರಾರಂಭವಾಗಿರಲಿಲ್ಲ. ಹಾಗಾಗಿ ನಿರಾಳರಾಗಿ ಚುನಾವಣೆಗೆ ಕಳುಹಿಸಿ ಕೊಟ್ಟಿದ್ದರು ಆಯಾ ಚಿತ್ರಗಳ ನಿರ್ಮಾಪಕರು. ಆ ಚಿತ್ರಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಈ ನಡುವೆ ನಿಖಿಲ್ ಲೈಕಾ ಸಂಸ್ಥೆ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ:ಎಲ್ಲೆಲ್ಲೂ ‘ಜೈಲರ್’ ಚಿತ್ರದ ಹವಾ, ನಿಲ್ಲುತ್ತಿಲ್ಲ ರಜನಿ ತಾಕತ್ತು
ನಿಖಿಲ್ ಮತ್ತು ಲೈಕಾ ಪ್ರೊಡಕ್ಷನ್ ಜಂಟಿಯಾಗಿ ಮಾಡುತ್ತಿರುವ ಹೊಸ ಚಿತ್ರಕ್ಕೆ ನಾಳೆಯೇ ಚಾಲನೆ (Muhurta) ನೀಡಲಾಗುತ್ತಿದೆ. ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿನಿಮಾ ಕುರಿತಾಗಿ ಹೆಚ್ಚಿನ ಮಾಹಿತಿ ನಾಳೆಯೇ ಸಿಗಲಿದೆ.
ನಿಖಿಲ್ ಕುಮಾರ ಸ್ವಾಮಿ ದೊಡ್ಡದೊಂದು ಬ್ರೇಕ್ ಗಾಗಿ ಕಾಯುತ್ತಿದ್ದಾರೆ. ಈವರೆಗೂ ಬಂದ ಚಿತ್ರಗಳು ನಿಖಿಲ್ ಅವರಿಗೆ ಅಷ್ಟೇನೂ ಹೇಳಿಕೊಳ್ಳುವಂತಹ ಆದಾಯ ಮತ್ತು ಹೆಸರು ತಂದುಕೊಟ್ಟಿಲ್ಲ. ಹಾಗಾಗಿ ದೊಡ್ಡ ಬ್ರೇಕ್ ಗಾಗಿಯೇ ಅವರು ಕಾಯುತ್ತಿದ್ದಾರೆ. ಒಪ್ಪಿಕೊಂಡ ಚಿತ್ರಗಳು ಅವರ ಕೈ ಹಿಡಿಯಲಿ ಎನ್ನುವುದು ಅಭಿಮಾನಿಗಳ ಆಸೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]