ವಿಜಯಪುರ: ನಿಸಾರ್ ಅಹಮದ್ (Nissar Ahmed) ದಸರಾ ಉದ್ಘಾಟನೆ ಮಾಡಿದಾಗ ಯಾಕೆ ನ್ಯಾಯಾಲಯಕ್ಕೆ (Court) ಹೋಗಿಲ್ಲ ಎಂದು ಸಿದ್ದರಾಮಯ್ಯ (CM Siddaramaiah) ತಿರುಗೇಟು ನೀಡಿದ್ದಾರೆ.
ಮೈಸೂರು ದಸರಾ (Mysuru Dasara) ಉದ್ಘಾಟನೆಯನ್ನು ಬಾನು ಮುಷ್ತಾಕ್ (Banu Mushtaq) ಮಾಡುತ್ತಿರುವುದನ್ನು ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಹೈಕೋರ್ಟ್‌ನಲ್ಲಿ (High Court) ಅರ್ಜಿ ಸಲ್ಲಿಸಿದ ವಿಚಾರಕ್ಕೆ ಅವರು ಆಲಮಟ್ಟಿ ಜಲಾಶಯದ ಬಳಿ ಪ್ರತಿಕ್ರಿಯಿಸಿದರು.
ಪ್ರತಾಪ್ ಸಿಂಹ ಕೋರ್ಟ್ ಮೆಟ್ಟಿಲೇರಿದ್ದು ಬಹಳ ಸಂತೋಷ. ನಮ್ಮ ನಿರ್ಧಾರವನ್ನು ಕೋರ್ಟ್ ತೀರ್ಮಾನ ಮಾಡುತ್ತದೆ. ಈ ಅರ್ಜಿಗೆ ಕೋರ್ಟ್ ಪ್ರೋತ್ಸಾಹ ನೀಡುವುದಿಲ್ಲ ಎಂದರು. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ – ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ
ಬಾನು ಮುಷ್ತಾಕ್ ಬರೆದ ಪುಸ್ತಕಕ್ಕೆ ಬೂಕರ್ ಪ್ರಶಸ್ತಿ (Booker Award) ಬಂದಿದೆ. ಬೂಕರ್ ಪ್ರಶಸ್ತಿಯನ್ನ ಅನುವಾದಕರು ಬರಹಗಾರಿಗೆ ಹಂಚಲಾಗಿದೆ. ಬಿಜೆಪಿಯವರು ರಾಜಕೀಯಕ್ಕಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರು | ಬಿಜೆಪಿಗೂ ಮುನ್ನವೇ ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ
ಬಾನು ಮುಷ್ತಾಕ್ ಕನ್ನಡಾಂಬೆಗೆ, ಕನ್ನಡಕ್ಕೆ ಅವಮಾನ ಮಾಡಿದ್ದಾರೆ ಎಂಬ ಪ್ರಶ್ನೆಗೆ ಸಾಕ್ಷ್ಯ ಎಲ್ಲಿ ಎಂದು ಪ್ರಶ್ನಿಸಿ ಲೇಖಕಿಯ ಆಯ್ಕೆಯನ್ನು ಸಮರ್ಥಿಸಿಕೊಂಡರು.