Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಸಿಎಂ ವಿರುದ್ಧ ದೂರು ನೀಡಿಲ್ಲವೇಕೆ?: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಸಿಎಂ ವಿರುದ್ಧ ದೂರು ನೀಡಿಲ್ಲವೇಕೆ?: ವಿಜಯೇಂದ್ರ

Bengaluru City

ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಸಿಎಂ ವಿರುದ್ಧ ದೂರು ನೀಡಿಲ್ಲವೇಕೆ?: ವಿಜಯೇಂದ್ರ

Public TV
Last updated: July 4, 2025 8:27 pm
Public TV
Share
3 Min Read
B Y Vijayendra
SHARE

ಬೆಂಗಳೂರು: ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳ ವಿರುದ್ಧ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಆಗ ಅವರು ಯಾಕೆ ಸಿದ್ದರಾಮಯ್ಯ (Siddaramaiah) ವಿರುದ್ಧ ದೂರು ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಅವರು ಪ್ರಶ್ನಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯ ರವಿಕುಮಾರ್ (Ravikumar) ಅವರ ಹೇಳಿಕೆ ಕುರಿತು ಮಾಧ್ಯಮಗಳನ್ನು ಗಮನಿಸಿದ್ದೇನೆ. ರವಿಕುಮಾರ್ ಅವರು ಈ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ. ತದನಂತರ ಐಎಎಸ್ (IAS) ಅಧಿಕಾರಿಗಳ ಅಸೋಸಿಯೇಷನ್‍ನವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾಗಿ ಮಾಹಿತಿ ಬಂದಿದೆ. ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಹೊರಟ್ಟಿಯವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ; ಎಫ್‍ಐಆರ್ ದಾಖಲಾಗಿದೆ ಎಂದು ಈ ಕುರಿತ ಪ್ರಶ್ನೆಗೆ ಉತ್ತರಿಸಿದರು.

ರವಿಕುಮಾರ್ ಅವರ ವಿಚಾರ ಒಂದೆಡೆ ಇರಲಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವತಃ ಬೆಳಗಾವಿಯಲ್ಲಿ ಬಹಿರಂಗ ಸಭೆಯಲ್ಲಿ ಒಬ್ಬ ಹಿರಿಯ ಪೊಲೀಸ್ ಅಧಿಕಾರಿಗೆ ಕಪಾಳಕ್ಕೆ ಹೊಡೆಯಲು ಹೋದರಲ್ಲವೇ? ಆಗ ಈ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಿದರು. ಇದೇ ಮುಖ್ಯಮಂತ್ರಿಗಳು ಇನ್ನೊಂದು ಕಡೆ ಸರಕಾರಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳನ್ನು ‘ಏಯ್ ಎದ್ದೇಳು’ ಎಂದು ಅಪಮಾನ ಮಾಡಿದ್ದರು. ಆಗ ಐಎಎಸ್ ಅಸೋಸಿಯೇಷನ್ ಎಲ್ಲಿ ಹೋಗಿತ್ತು ಎಂದು ಕೇಳಿದರು. ಇದು ಕೂಡ ಚರ್ಚೆ ಆಗಲಿ. ಜನರು ಕೂಡ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ವಿಜಯೇಂದ್ರ ಕಿಡಿ ಕಾರಿದರು. ಇದನ್ನೂ ಓದಿ: 46 ರೂ. ಆಗಿದ್ರೂ 50 ರೂ. ಟಿಕೆಟ್‌ – ಭಾರೀ ಟೀಕೆ ಬೆನ್ನಲ್ಲೇ KSRTC ಆದೇಶ ರದ್ದು

Siddaramaiah 6

ಸಂಬಳ ನೀಡಲಾಗದ ಪರಿಸ್ಥಿತಿ
ಮುಖ್ಯಮಂತ್ರಿ ಸ್ಥಾನಕ್ಕಾಗಿ ಬಹಳ ಜನ ಪ್ರಾರ್ಥನೆ ಮಾಡುತ್ತಿದ್ದಾರೆ; ಪ್ರಯತ್ನ ಮಾಡುತ್ತಿದ್ದಾರೆ. ಸುರ್ಜೇವಾಲಾರನ್ನು ಕರೆಸಿ ಭೂಮಿ ಪೂಜೆ, ಗುದ್ದಲಿ ಪೂಜೆ ಮಾಡಿಸಲಿದ್ದಾರೆ. ಬರುವ ದಿನಗಳಲ್ಲಿ ಏನೇನಾಗುತ್ತೋ ಕಾದು ನೋಡೋಣ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ಸಿದ್ದರಾಮಯ್ಯನವರು ರಾಜೀನಾಮೆ ನೀಡಿದರೆ ಯಾರು ಮುಖ್ಯಮಂತ್ರಿ ಎಂಬುದು ನಮಗೆ ಮುಖ್ಯವಲ್ಲ; ಕಾಂಗ್ರೆಸ್ ಸರಕಾರದ ಬಗ್ಗೆ ರಾಜ್ಯದ ಜನರು ಛೀಮಾರಿ ಹಾಕುತ್ತಿದ್ದಾರೆ. ಸಂಕಷ್ಟದಲ್ಲಿರುವ ರೈತರ ಬಗ್ಗೆ ಈ ಸರಕಾರಕ್ಕೆ ಕಾಳಜಿ ಇಲ್ಲ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.

ಬಡವರಿಗೆ ಮನೆ, ಗಂಗಾ ಕಲ್ಯಾಣ ಯೋಜನೆ ನೀಡಲು ಈ ಕಾಂಗ್ರೆಸ್ ಸರಕಾರಕ್ಕೆ ಸಾಧ್ಯ ಆಗುತ್ತಿಲ್ಲ. ಮುಖ್ಯಮಂತ್ರಿ ಯಾರು ಇದ್ದರೆಷ್ಟು? ಬಿಟ್ಟರೆಷ್ಟು. ಅಭಿವೃದ್ಧಿ ಆಗುತ್ತಿಲ್ಲ. ರಾಜ್ಯದ ಇತಿಹಾಸದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮೊದಲ ಬಾರಿಗೆ ಸರಕಾರಿ ನೌಕರರಿಗೆ ಸಂಬಳ ಕೊಡಲು ಸಾಧ್ಯ ಆಗುತ್ತಿಲ್ಲ ಎಂದು ಆಕ್ಷೇಪಿಸಿದರು. ಪೊಲೀಸ್ ಇಲಾಖೆಯಲ್ಲಿ ನಿಗದಿತ ದಿನದಂದು ವೇತನ ಕೊಡಲು ಸಾಧ್ಯ ಆಗುತ್ತಿಲ್ಲ ಎಂದು ವಿವರಿಸಿದರು. ನೀರಾವರಿ ಇಲಾಖೆಯಲ್ಲಿ 2-3 ತಿಂಗಳಿನಿಂದ ಸಂಬಳ ಸರಿಯಾಗಿ ಆಗುತ್ತಿಲ್ಲ. ಎಲ್ಲ ಇಲಾಖೆಗಳಲ್ಲೂ ಇದೇ ಪರಿಸ್ಥಿತಿ ಇದೆ ಎಂದು ತಿಳಿಸಿದರು. ಇಂಥ ದರಿದ್ರ ಸರಕಾರ ಬದುಕಿದೆಯೇ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಯಾರೇ ಮುಖ್ಯಮಂತ್ರಿ ಇದ್ದರೂ ಪರಿಸ್ಥಿತಿ ಬದಲಾಗದು ಎಂದು ಹೇಳಿದರು. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ – ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್‌

 

ಪ್ರಿಯಾಂಕ್ ಖರ್ಗೆ ತಿರುಕನ ಕನಸು
ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ನಿಷೇಧಿಸುವುದಾಗಿ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದರ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಮೂರ್ಖತನದ ಹೇಳಿಕೆಗೆ ನಾವು ಪ್ರತಿಕ್ರಿಯೆ ಕೊಡಲಾಗುವುದಿಲ್ಲ; ಕೇಂದ್ರದಲ್ಲಿ ನರೇಂದ್ರ ಮೋದಿ ಜೀ ಅವರ ಸರಕಾರವು ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ. ನರೇಂದ್ರ ಮೋದಿ ಜೀ ಅವರ ಜನಪ್ರಿಯತೆಯೂ ಜಾಸ್ತಿ ಆಗುತ್ತಿದೆ. ದೇಶವೂ ಅಭಿವೃದ್ಧಿ ಪಥದಲ್ಲಿ ಮುಂದೆ ಸಾಗುತ್ತಿದೆ. ಪುಕ್ಸಟ್ಟೆ ಭಾಷಣ ಮಾಡಿದರೆ ಭಾರತ 4ನೇ ದೊಡ್ಡ ಆರ್ಥಿಕ ಶಕ್ತಿ ಆಗಲು ಸಾಧ್ಯ ಇರಲಿಲ್ಲ; ಯಾವ ರೀತಿ ನರೇಂದ್ರ ಮೋದಿ ಜೀ ಅವರು ಕಳೆದ 11 ವರ್ಷಗಳಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ದೇಶವನ್ನು ಮುನ್ನಡೆಸಿದ್ದಾರೋ ಅದರಿಂದ ಈ ಸ್ಥಾನ ಲಭಿಸಿದೆ. ಪ್ರಿಯಾಂಕ್ ಖರ್ಗೆ ರಾತ್ರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ತಿರುಕನ ಕನಸು ಕಾಣುತ್ತಿದ್ದರೆ ಅದಕ್ಕೆ ನಮ್ಮ ಅಭ್ಯಂತರ ಇಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಸರಕಾರ ಬದಲಾಗುವ ಕುರಿತು ನಮ್ಮ ಪಕ್ಷದವರು ಮಾತ್ರವಲ್ಲ; ಜನಸಾಮಾನ್ಯರೂ ಮಾತನಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರೂ ಮಾತನಾಡುತ್ತಿದ್ದಾರೆ. ರಾಮನಗರದ ಶಾಸಕ ಇಕ್ಬಾಲ್ ಅವರ ಹೇಳಿಕೆಗೆ ಮುಖ್ಯಮಂತ್ರಿ ಪ್ರತಿಕ್ರಿಯೆ ಏನು ಎಂದು ಈ ಸಂಬಂಧ ಪ್ರಶ್ನೆಗೆ ಮರುಪ್ರಶ್ನೆ ಹಾಕಿದರು.

ಕೇಂದ್ರದ ಸಚಿವರು, ನಮ್ಮೆಲ್ಲರ ಹಿರಿಯರಾದ ಪ್ರಲ್ಹಾದ್ ಜೋಶಿ ಅವರು ನಮ್ಮ ಪಕ್ಷದೊಳಗೆ ಕೆಲವು ಜಿಲ್ಲೆಗಳಲ್ಲಿ ಇದ್ದ ಆಂತರಿಕ ಸಮಸ್ಯೆ ಪರಿಹರಿಸುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆ ಪರಿಹರಿಸುವಂತೆ ನಾನೇ ಮನವಿ ಮಾಡಿದ್ದೆ. ಅದರಂತೆ ಸಮಯ ಕೊಟ್ಟು ಸಮಸ್ಯೆ ತಿಳಿಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

TAGGED:bjppoliticssiddaramaiahಬಿಜೆಪಿಬಿವೈ ವಿಜಯೇಂದ್ರರಾಜಕೀಯಮ BY Vijayendraಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?