ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೆರೆಸುತ್ತೀರಿ? : ಸಿಎಂ ಡಿನ್ನರ್‌ ಸಭೆಗೆ ಡಿಕೆಶಿ ಪ್ರಶ್ನೆ

Public TV
1 Min Read
DK Shivakumar

ನವದೆಹಲಿ: ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ? ಎಲ್ಲರೂ ಊಟಕ್ಕೆ ಸೇರಿದರೆ ಅದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ವಿದೇಶ ಪ್ರವಾಸ ಮುಗಿಸಿ ದೆಹಲಿಗೆ ಡಿಕೆ ಡಿಕೆ ಶಿವಕುಮಾರ್‌ ಬಂದಿದ್ದಾರೆ. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ನಿವಾಸದಲ್ಲಿ ಸಿಎಂ ಡಿನ್ನರ್‌ ಸಭೆ ( Dinner Meeting) ನಡೆಸಿದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ನಮ್ಮ ಮನೆಗೆ ನೀವು ಬರೋದು, ನಿಮ್ಮ ಮನೆಗೆ ನಾವು ಬರೋದು ಸಹಜ. ಔತಣ ಕೂಟಕ್ಕೆ ಸೇರಿದರೆ ರಾಜಕೀಯ ಯಾಕೆ ಬೇರೆಸುತ್ತೀರಿ. ನಾನು ಕೆಲವು ಬಾರಿ ಊಟಕ್ಕೆ ಕರೆಯುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಇಬ್ಬರು ಮಕ್ಕಳನ್ನು ಹತ್ಯೆಗೈದು ಬೆಂಗಳೂರಿನ ಟೆಕ್ಕಿ, ಪತ್ನಿ ಆತ್ಮಹತ್ಯೆ

Siddaramaiah 2 3

ನಾಲ್ಕು ವರ್ಷದಿಂದ ಎಲ್ಲೂ ಹೊರಗೆ ಹೋಗಿರಲಿಲ್ಲ. ಹೀಗಾಗಿ ಕುಟುಂಬದ ಜೊತೆಗೆ ಹೊಸ ವರ್ಷಕ್ಕೆ ವಿದೇಶಕ್ಕೆ ತೆರಳಿದ್ದೆ. ಕೆಲವರು ಕುಟುಂಬ ಜೊತೆಗೆ ಬೇರೆ ಕಡೆಗೆ ಹೋಗಿದ್ದಾರೆ ಎಂದರು.

ಸತೀಶ್‌ ಜಾರಕಿಹೊಳಿ ನಿವಾಸದಲ್ಲಿ ಜ.2ರ ರಾತ್ರಿ ನಡೆದ ಔತಣ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೆಲವು ಸಚಿವರು ಮತ್ತು ಶಾಸಕರು ಪಾಲ್ಗೊಂಡಿದ್ದರು. ಸಂಪುಟ ಸಭೆಯ ಬಳಿಕ ಸಚಿವರ ಅಧಿಕೃತ ನಿವಾಸದಲ್ಲಿ ಔತಣಕೂಟ ಆಯೋಜಿಸಲಾಗಿತ್ತು.

 

Satish Jarkiholi

ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿತ್ತು. ಸಭೆಯಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿತ್ತು.

ಡಾ.ಜಿ.ಪರಮೇಶ್ವರ್, ಕೆ.ಎನ್. ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು ಹಾಜರಿದ್ದರು. ಜತೆಗೆ ಒಟ್ಟು 35 ಮಂದಿ ಶಾಸಕರೂ ಭಾಗವಹಿಸಿದ್ದರು.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಭೋಜನಕೂಟಕ್ಕೆ ಆಹ್ವಾನಿಸಿದ್ದಾಗಿ ಸತೀಶ್ ಜಾರಕಿಹೊಳಿ ಕಚೇರಿ ಮೂಲಗಳು ತಿಳಿಸಿದ್ದರೂ ಡಿಕೆಶಿ ವಿದೇಶ ಪ್ರವಾಸದಲ್ಲಿದ್ದಾಗಲೇ ಈ ಔತಣಕೂಟ ನಡೆದಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

Share This Article