ಬೆಂಗಳೂರು: ಭ್ರಷ್ಟಾಚಾರ ಸಹಿಸುವುದಿಲ್ಲ ಎನ್ನುವ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಅಮಿತ್ ಶಾ (Amit Shah) ಅವರು ಬಿಜೆಪಿ (BJP) ಸರ್ಕಾರದ 40% ಕಮಿಷನ್ (40 percent commission) ಬಗ್ಗೆ ಮಾತನಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಟಾಂಗ್ ನೀಡಿದ್ದಾರೆ.
ಭ್ರಷ್ಟಾಚಾರ ಸಹಿಸುವುದಿಲ್ಲ ಎಂಬ ಮೋದಿ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, 40% ಕಮಿಷನ್ ದೂರು ನೀಡಿದ ಕೆಂಪಣ್ಣ ಅವರಿಗೆ ಯಾಕೆ ಉತ್ತರ ನೀಡುತ್ತಿಲ್ಲ? ಪಿಎಸ್‌ಐ ಹಗರಣ, ನೇಮಕಾತಿ ಅಕ್ರಮ ಯಾರಿಂದ ಆಗುತ್ತಿದೆ? ಸ್ಕಿಲ್ ಇಂಡಿಯಾ ಕಿಲ್ ಇಂಡಿಯಾ ಆಗಿದೆ. ಇದೆಲ್ಲದರ ಬಗ್ಗೆ ನಾವು ಮಾಹಿತಿ ಸಂಗ್ರಹಿಸುತ್ತಿದ್ದೇವೆ. ನಂತರ ಈ ವಿಚಾರವಾಗಿ ಮಾತನಾಡುತ್ತೇವೆ. ಈ ಹಗರಣಗಳ ಬಗ್ಗೆ ಮೋದಿ ಅವರಿಗೆ ಮಾಹಿತಿ ಇಲ್ಲವೇ? ಎಂದು ಪ್ರಶ್ನೆ ಮಾಡಿದರು.
ಬಿಜೆಪಿ ಸರ್ಕಾರ ರಾಜ್ಯವನ್ನು ಭ್ರಷ್ಟಾಚಾರದ ಕೂಪವನ್ನಾಗಿ ಮಾಡಿದೆ. ದೇಶದಲ್ಲಿ ರಾಜ್ಯವನ್ನು ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದೆ. ಈ ಬಗ್ಗೆ ಅವರು ಮಾತನಾಡುತ್ತಿಲ್ಲ. ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಮಾಡಿದರು. ಆದರೆ ಶಿವಮೊಗ್ಗಕ್ಕೆ ಬಂಡವಾಳ ಹೂಡಿಕೆ ಮಾಡಲು ಯಾರೂ ಬರುತ್ತಿಲ್ಲ ಎಂದು ಯಾಕೆ ಹೇಳುತ್ತಿಲ್ಲ? ಈ ಬಗ್ಗೆ ಪ್ರಧಾನಮಂತ್ರಿಗಳು, ಅಮಿತ್ ಶಾ ಅವರು ಯಾಕೆ ಮಾತನಾಡುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ರಾಷ್ಟ್ರೀಯ ನಾಯಕರು ಎಲ್ಲಿದ್ದಾರೆ – ಈಶ್ವರಪ್ಪ ಪ್ರಶ್ನೆ
ಬಿಜೆಪಿ ಎಂಎಲ್‌ಸಿ ಆಯನೂರು ಮಂಜುನಾಥ್ ಅವರ ಪೋಸ್ಟರ್ ವಿಚಾರವಾಗಿ ಮುಖ್ಯಮಂತ್ರಿಗಳು ಯಾಕೆ ಮಾತನಾಡುತ್ತಿಲ್ಲ? ರಾಮಮಂದಿರ ಬೇಡ ಎಂದು ಅವರೇ ಹೇಳಿದ್ದಾರೆ. ಇದಕ್ಕೆ ಬೊಮ್ಮಾಯಿ ಉತ್ತರ ಕೊಡಲಿ. ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆ ಎಂದವರು ಈಗ ಪ್ರಧಾನಿಗಳ ನೇತೃತ್ವದಲ್ಲಿ ಚುನಾವಣೆ ಎಂದು ಹೇಳುತ್ತಿರುವುದು ಯಾಕೆ? ಬಿಜೆಪಿ ಮುಕ್ತ ಕರ್ನಾಟಕ ನಿರ್ಮಾಣದ ದಿನಗಳು ಸನಿಹದಲ್ಲಿದೆ ಎಂದು ಡಿಕೆಶಿ ಹೇಳಿದರು. ಇದನ್ನೂ ಓದಿ: ಟಿಕೆಟ್ ಕೇಳುವ ಹಕ್ಕು ಭವಾನಿಗೂ ಇದೆ, ಪ್ರತಿಯೊಬ್ಬ JDS ಕಾರ್ಯಕರ್ತನಿಗೂ ಇದೆ – ಇಬ್ರಾಹಿಂ