-ಅಂಬೇಡ್ಕರ್ ಭವನದಲ್ಲಿ ಆಗಿದ್ದಾದ್ರೂ ಏನು..?
ಬೆಂಗಳೂರು: ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ಪುತ್ರ ಸಾಮ್ರಾಟ್‍ನನ್ನು ವೇದಿಕೆ ಮೇಲೆ ಮಾರುತಿ ಗೌಡ ಅವಮಾನಿಸಿದ್ದರಿಂದ ವಿಜಿ ಹಲ್ಲೆ ನಡೆಸಿದರಂತೆ ಎಂಬ ಸುದ್ದಿಯೊಂದು ಕೇಳಿ ಬರುತ್ತಿದೆ.
ಅಂದಿದ್ದು ಏನು?:
ಶನಿವಾರ ಅಂಬೇಡ್ಕರ್ ಭವನದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆದಿತ್ತು. ಈ ವೇಳೆ ದುನಿಯಾ ವಿಜಯ್ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಫೋಸ್ ಕೊಡುತ್ತಿದ್ದರು. ಆಗ ಮಗ ಸಾಮ್ರಾಟ್ ತಂದೆಯೊಂದಿಗೆ ವೇದಿಕೆ ಹತ್ತಿದ್ದಾರೆ. ಇದನ್ನು ನೋಡಿದ ಮಾರುತಿಗೌಡ `ಏಯ್, ಚಿಲ್ಟು ಕೆಳಗೆ ಇಳಿಯೋ’ ಎಂದು ಎಚ್ಚರಿಸಿದ್ದರಂತೆ. ಮಾರುತಿಗೌಡ ಮಾತು ಕೇಳಿಸಿಕೊಂಡ ವಿಜಯ್ ಕೋಪ ನೆತ್ತಿಗೇರಿತ್ತಂತೆ. ತಕ್ಷಣವೇ `ಯಾಕಪ್ಪ ಹಾಗಂತಿಯಾ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮಾರುತಿಗೌಡ, `ಮತ್ತೆ ಏನಣ್ಣ, ನೀನು ಚಿಲ್ಟು-ಪಿಲ್ಟುಗಳನ್ನೆಲ್ಲಾ ಸ್ಟೇಜ್‍ಗೆ ಹತ್ತಿಸ್ತೀಯ’ ಎಂದಿದ್ದಾರೆ. ಆತನ ಉತ್ತರದಿಂದ ಗರಂ ಆದ ವಿಜಯ್, ಸಾಮ್ರಾಟ್‍ನನ್ನು ಚಿಲ್ಟು ಅಂತ ಕರೆದಿದ್ದಕ್ಕೆ ವಾಗ್ದಾಳಿ ನಡೆಸಿದ್ದರಂತೆ. ಇದನ್ನೂ ಓದಿ: ನಿನಗೂ, ರೌಡಿಗಳಿಗೂ ಏನು ವ್ಯತ್ಯಾಸ..?- ದುನಿಯಾ ವಿಜಯ್‍ಗೆ ಪೊಲೀಸರಿಂದ ಫುಲ್ ಕ್ಲಾಸ್!
ಸ್ಪರ್ಧೆ ನಡೆಯುವ ಜಾಗದಲ್ಲಿಯೇ ಬುದ್ಧಿ ಹೇಳುವುದಕ್ಕೆ ಹೋದರೆ ಗಲಾಟೆ ಆಗುತ್ತದೆ ಅಂತ ಮಾರುತಿ ಗೌಡನನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದೇವೆ. ನಾವು ಅಪಹರಣ ಮಾಡಿಲ್ಲ ಅಂತ ವಿಚಾರಣೆ ವೇಳೆ ವಿಜಯ್ ಸ್ಪಷ್ಟನೆ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಾಡಿ ಬಿಲ್ಡಿಂಗ್ ಕಾಂಪಿಟೇಷನ್‍ನಲ್ಲಿ ಗಲಾಟೆ ಮಾಡಿ ಜಿಮ್ ಟ್ರೈನರ್ ಅಪಹರಿಸಿ ಹಲ್ಲೆ ಮಾಡಿದ್ದ ಆರೋಪ ಸಂಬಂಧ ನಟ ದುನಿಯಾ ವಿಜಿ ಮತ್ತು ಅವರ ಮೂವರು ಸಹಚರರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದುನಿಯಾ ವಿಜಿ ಮೊದಲನೇ ಆರೋಪಿಯಾಗಿದ್ದರೆ, ಶಿಷ್ಯ ಜಿಮ್ ಟ್ರೈನರ್ ಪ್ರಸಾದ್ ಎರಡನೇ, ಮಣಿ ಮೂರನೇ ಮತ್ತು ಮತ್ತೊರ್ವ ಶಿಷ್ಯ ಪ್ರಸಾದ್ ನಾಲ್ಕನೇ ಆರೋಪಿಯಾಗಿದ್ದಾರೆ. ಶನಿವಾರ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದಿದ್ದ ಗಲಾಟೆ ವೇಳೆ ಪಾನಿಪುರಿ ಕಿಟ್ಟಿಯ ಅಣ್ಣನ ಮಗ ಮಾರುತಿಗೌಡನನ್ನ ಅಪಹರಿಸಿ ಹಲ್ಲೆ ನಡೆಸಿದ್ದರು. ಬಳಿಕ ಪೊಲೀಸರ ಸೂಚನೆಯಂತೆ ಹೈಗ್ರೌಂಡ್ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದರು ಅಲ್ಲೂ ಪಾನಿಪುರಿ ಕಿಟ್ಟಿ ಮತ್ತು ದುನಿಯಾ ವಿಜಿ ನಡುವೆ ಗಲಾಟೆ ನಡೆಯಿತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://youtu.be/5mlMHi06fyA