ಬೆಂಗಳೂರು: ನಾನ್ಯಾಕೆ ರಾಜೀನಾಮೆ ಕೊಡಲಿ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಅವರು ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ನಾನ್ಯಾಕೆ ರಾಜೀನಾಮೆ ಕೊಡಲಿ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. 2009-10ರಲ್ಲಿ ಯಡಿಯೂರಪ್ಪ ಅವರ ಅವಧಿಯಲ್ಲಿ 18 ಶಾಸಕರು ರಾಜೀನಾಮೆ ನೀಡಿದ್ದರು. ಹಾಗಂತ ಯಡಿಯೂರಪ್ಪ ಅವರು ರಾಜೀನಾಮೆ ಕೊಟ್ರಾ? ನಾನು ರಾಜೀನಾಮೆ ನೀಡುವ ಸನ್ನಿವೇಶ ಉದ್ಭವವಾಗಿಲ್ಲ. ಕಾನೂನು ತಜ್ಞರಿಂದ ನಾನು ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈ ತೆಗೆದುಕೊಳ್ಳುತ್ತೇನೆ ಎಂದರು.
ಇಂದು ಕುಮಾರಕೃಪಾ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಮುಖಂಡರಾದ ಗುಲಾಂ ನಬಿ ಆಜಾದ್, ವೇಣುಗೋಪಾಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಜಂಟಿಯಾಗಿ ಸಭೆ ನಡೆಸಿದ್ದರು. ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರನ್ನು ಮನವೊಲಿಸುವ ಎಲ್ಲ ಪ್ರಯತ್ನವನ್ನು ಮಾಡಲಾಗಿದೆ. ಇನ್ನು ಮುಂದೆ ಯಾರು ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗಬಾರದು ಎಂದು ಸಿದ್ದರಾಮಯ್ಯನವರು ಸಭೆಯಲ್ಲಿ ತಮ್ಮ ಎಲ್ಲ ಸಚಿವರು ಮತ್ತು ಕಾರ್ಯಕರ್ತರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.